Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:22 - ಪರಿಶುದ್ದ ಬೈಬಲ್‌

22 ಈ ಸ್ಥಳದಲ್ಲಿ ನೀನು ಅನ್ನಪಾನಗಳನ್ನು ತೆಗೆದುಕೊಳ್ಳಕೂಡದೆಂದು ಯೆಹೋವನು ನಿನಗೆ ಆಜ್ಞಾಪಿಸಿದ್ದನು. ಆದರೆ ನೀನು ಹಿಂದಿರುಗಿಬಂದು ಅನ್ನಪಾನಗಳನ್ನು ತೆಗೆದುಕೊಂಡೆ. ಆದ್ದರಿಂದ ನಿನ್ನ ವಂಶದ ಸ್ಮಶಾನದಲ್ಲಿ ನಿನ್ನ ದೇಹವನ್ನು ಸಮಾಧಿಮಾಡಲಾಗುವುದಿಲ್ಲ ಎಂದು ಯೆಹೋವನು ಹೇಳುತ್ತಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೋಸ್ಕರ ಹಿಂದಿರುಗಿ ಬಂದದ್ದರಿಂದ, ನಿನ್ನ ಶವವು ನಿನ್ನ ಕುಟುಂಬ ಸ್ಮಶಾನಭೂಮಿಯನ್ನು ಸೇರುವುದೇ ಇಲ್ಲವೆಂದು ಯೆಹೋವನು ಹೇಳುತ್ತಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕಾಗಿ ಹಿಂದಿರುಗಿ ಬಂದುದರಿಂದ ನಿನ್ನ ಶವ ನಿನ್ನ ಕುಟುಂಬ ಸ್ಮಶಾನಭೂಮಿಯನ್ನು ಸೇರುವುದೇ ಇಲ್ಲವೆಂದು ಸರ್ವೇಶ್ವರ ಹೇಳುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅನ್ನಪಾನಗಳನ್ನು ತೆಗೆದುಕೊಳ್ಳುವದಕ್ಕೋಸ್ಕರ ಹಿಂದಿರುಗಿ ಬಂದದರಿಂದ ನಿನ್ನ ಶವವು ನಿನ್ನ ಕುಟುಂಬ ಶ್ಮಶಾನಭೂವಿುಯನ್ನು ಸೇರುವದೇ ಇಲ್ಲವೆಂದು ಯೆಹೋವನು ಹೇಳುತ್ತಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀನು ಹಿಂದಿರುಗಿ ಬಂದು, ನೀನು ರೊಟ್ಟಿ ತಿಂದು, ನೀರು ಕುಡಿದಿದ್ದರಿಂದ, ನಿನ್ನ ಹೆಣ ನಿನ್ನ ಪಿತೃಗಳ ಸಮಾಧಿಗೆ ಸೇರುವುದಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:22
8 ತಿಳಿವುಗಳ ಹೋಲಿಕೆ  

ಇಸ್ರೇಲರೆಲ್ಲರು ಅವನಿಗಾಗಿ ಗೋಳಾಡಿ ಸಮಾಧಿಮಾಡುತ್ತಾರೆ. ಯಾರೊಬ್ಬಾಮನ ಕುಟುಂಬದಲ್ಲಿ ನಿನ್ನ ಮಗನನೊಬ್ಬನನ್ನು ಮಾತ್ರ ಸಮಾಧಿ ಮಾಡುತ್ತಾರೆ. ಏಕೆಂದರೆ ಯಾರೊಬ್ಬಾಮನ ಕುಟುಂಬದಲ್ಲಿ ಇವನೊಬ್ಬನು ಮಾತ್ರ ಇಸ್ರೇಲಿನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.


ಪ್ರವಾದಿಯು ತನ್ನ ಕುಟುಂಬದ ಸ್ಮಶಾನದಲ್ಲಿ ಆ ಮನುಷ್ಯನ ದೇಹವನ್ನು ಸಮಾಧಿ ಮಾಡಿದನು. ಪ್ರವಾದಿಯು ಅವನಿಗಾಗಿ ಗೋಳಾಡುತ್ತಾ, “ಅಯ್ಯೋ, ನನ್ನ ಸೋದರನೇ!” ಎಂದು ಹೇಳಿದನು.


ಸಕಲ ಪ್ರಜೆ, ಕುಲ, ಭಾಷೆ, ಜನಾಂಗದವರು ಮೂರುವರೆ ದಿನಗಳ ಕಾಲ ಈ ಸಾಕ್ಷಿಗಳ ಶವಗಳನ್ನು ನೋಡುತ್ತಾ ಇರುತ್ತಾರೆ. ಅವರನ್ನು ಸಮಾಧಿ ಮಾಡಲು ಜನರು ಒಪ್ಪುವುದಿಲ್ಲ.


ಆ ಪ್ರವಾದಿಯು ಯೆಹೂದ ದೇಶದವನಾದ ದೇವಮನುಷ್ಯನಿಗೆ, “ಯೆಹೋವನು ಹೇಳುವುದೇನೆಂದರೆ, ನೀನು ಆತನಿಗೆ ವಿಧೇಯನಾಗಲಿಲ್ಲ. ಆತನ ಆಜ್ಞೆಯನ್ನು ನೀನು ಅನುಸರಿಸಲಿಲ್ಲ.


ದೇವಮನುಷ್ಯನು ಅನ್ನಪಾನಗಳನ್ನು ತೆಗೆದುಕೊಂಡ ನಂತರ ಆ ಪ್ರವಾದಿಯು ಅವನಿಗಾಗಿ ಕತ್ತೆಯ ಮೇಲೆ ತಡಿಯನ್ನು ಹಾಕಿದನು. ದೇವಮನುಷ್ಯನು ಅಲ್ಲಿಂದ ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು