Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:26 - ಪರಿಶುದ್ದ ಬೈಬಲ್‌

26 ಆ ಪ್ರವಾದಿಯು ಆ ಮನುಷ್ಯನನ್ನು ಮೋಸದಿಂದ ಕರೆದು ತಂದಿದ್ದನು. ಅವನಿಗೆ ಸಂಭವಿಸಿದ್ದನ್ನು ಕೇಳಿದಾಗ ಅವನು, “ಯೆಹೋವನ ಆಜ್ಞೆಗಳನ್ನು ಅನುಸರಿಸದಿದ್ದ ದೇವಮನುಷ್ಯನೇ ಅವನಾಗಿರಬೇಕು. ಅವನನ್ನು ಕೊಲ್ಲಲು ಯೆಹೋವನು ಸಿಂಹವನ್ನು ಕಳುಹಿಸಿದನು. ಹೀಗೆ ಮಾಡುವುದಾಗಿ ಯೆಹೋವನೇ ಹೇಳಿದ್ದನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿಯು ಈ ಸುದ್ದಿಯನ್ನು ಕೇಳಿ ಅವರಿಗೆ, “ಆ ಶವವು ದೇವರ ಮನುಷ್ಯನದೇ ಆಗಿರಬೇಕು. ಅವನು ಯೆಹೋವನ ಆಜ್ಞೆಗೆ ಅವೀಧೆಯನಾದ್ದರಿಂದ ಯೆಹೋವನು ಅವನ ವಿಷಯದಲ್ಲಿ ತಾನು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದನು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿ, ಈ ಸುದ್ದಿಯನ್ನು ಕೇಳಿ, “ಆ ಶವವು ದೈವಭಕ್ತನದೇ ಆಗಿರಬೇಕು. ಅವನು ಸರ್ವೇಶ್ವರನ ಆಜ್ಞೆಗೆ ಅವಿಧೇಯನಾದುದರಿಂದ ಸರ್ವೇಶ್ವರ ಅವನ ವಿಷಯದಲ್ಲಿ ತಾವು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದರು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು,” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನನ್ನು ಹಿಂದಕ್ಕೆ ಕರಕೊಂಡು ಹೋಗಿದ್ದ ಪ್ರವಾದಿಯು ಈ ಸುದ್ದಿಯನ್ನು ಕೇಳಿ - ಆ ಶವವು ದೇವರ ಮನುಷ್ಯನದೇ ಆಗಿರಬೇಕು; ಅವನು ಯೆಹೋವನ ಆಜ್ಞೆಗೆ ಅವಿಧೇಯನಾದದರಿಂದ ಯೆಹೋವನು ಅವನ ವಿಷಯದಲ್ಲಿ ತಾನು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದನು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವನನ್ನು ಮಾರ್ಗದಿಂದ ಹಿಂದಕ್ಕೆ ಕರೆತಂದ ಪ್ರವಾದಿಯು ಆ ವರ್ತಮಾನವನ್ನು ಕೇಳಿ, “ಇವನೇ ಯೆಹೋವ ದೇವರ ಮಾತಿಗೆ ಅವಿಧೇಯನಾದ ದೇವರ ಮನುಷ್ಯನು, ಯೆಹೋವ ದೇವರು ಅವನನ್ನು ಸಿಂಹಕ್ಕೆ ಒಪ್ಪಿಸಿದ್ದಾರೆ, ಅದು ಅವನನ್ನು ಸೀಳಿ ಕೊಂದುಹಾಕಿತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:26
11 ತಿಳಿವುಗಳ ಹೋಲಿಕೆ  

ಆದಕಾರಣವೇ, ನಿಮ್ಮ ಸಭೆಯಲ್ಲಿರುವ ಅನೇಕರು ರೋಗಿಗಳೂ ಬಲಹೀನರೂ ಆಗಿದ್ದಾರೆ ಮತ್ತು ಅನೇಕರು ಸತ್ತು ಹೋದರು.


ಶಿಷ್ಟರು ಭೂಮಿಯ ಮೇಲೆ ಪ್ರತಿಫಲವನ್ನು ಹೊಂದುವುದಾದರೆ ಕೆಡುಕರು ಸಹ ತಮಗೆ ಬರತಕ್ಕ ದಂಡನೆಯನ್ನು ಹೊಂದುವುದು ನಿಶ್ಚಯ.


ನಾನು ನಿನ್ನಲ್ಲಿ ಭಯವುಳ್ಳವನಾಗಿದ್ದೇನೆ. ನಾನು ನಿನ್ನ ತೀರ್ಪುಗಳಿಗೆ ಅಂಜಿಕೊಂಡಿದ್ದೇನೆ.


ನೀನು ನಿನ್ನ ಪಾಪಕೃತ್ಯಗಳಿಂದ ಯೆಹೋವನ ವೈರಿಗಳು ಯೆಹೋವನನ್ನು ಹೆಚ್ಚು ದ್ವೇಷಿಸುವಂತೆ ಮಾಡಿದೆ. ನಿನಗೆ ಹುಟ್ಟಿದ ಗಂಡುಮಗು ಈ ಕಾರಣಕ್ಕಾಗಿ ಸತ್ತುಹೋಗುವುದು” ಎಂದು ಹೇಳಿದನು.


ನೀನು ಅವನ ಹೆಂಡತಿಯನ್ನು ತೆಗೆದುಕೊಂಡದ್ದರಿಂದ ಮತ್ತು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದ ಕತ್ತಿಯು ನಿನ್ನ ಕುಟುಂಬವನ್ನು ಸದಾ ಹಿಡಿದಿರುವುದು.’


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳುವುದೇನೆಂದರೆ, ‘ನನ್ನ ಬಳಿಗೆ ಬರುವ ಯಾಜಕರು ನನ್ನನ್ನು ಗೌರವಿಸಬೇಕು. ಯಾಕೆಂದರೆ ನಾನು ಅವರ ಮೂಲಕ ಜನರಿಗೆ ಪ್ರಕಟಿಸಿಕೊಳ್ಳುವೆನು. ನಾನು ಪರಿಶುದ್ಧನೆಂದು ಅವರು ಮತ್ತು ಎಲ್ಲಾ ಜನರು ತಿಳಿದುಕೊಂಡು ನನ್ನನ್ನು ಘನಪಡಿಸಬೇಕು’” ಎಂದು ಹೇಳಿದನು. ಆದ್ದರಿಂದ ಆರೋನನು ತನ್ನ ಪುತ್ರರು ಸತ್ತಿದ್ದರ ಬಗ್ಗೆ ಏನೂ ಹೇಳದೆ ಸುಮ್ಮನಿದ್ದನು.


ನಿಮ್ಮ ನ್ಯಾಯನಿರ್ಣಯದ ಕಾಲ ಬಂದಿದೆ. ಅದು ದೇವರ ಕುಟುಂಬದಿಂದಲೇ ಆರಂಭವಾಗುವುದು. ನಮ್ಮಲ್ಲಿಯೇ ಅದು ಆರಂಭವಾದರೆ, ದೇವರ ಸುವಾರ್ತೆಗೆ ವಿಧೇಯರಾಗದ ಜನರಿಗೆ ಏನಾಗಬಹುದು?


ಆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕೆಲವರು ಆ ದೇಹವನ್ನೂ ಮತ್ತು ಆ ದೇಹದ ಬಳಿ ನಿಂತಿದ್ದ ಸಿಂಹವನ್ನೂ ನೋಡಿದರು. ಆ ಜನರು ಪ್ರವಾದಿಯು ವಾಸಿಸುತ್ತಿದ್ದ ನಗರಕ್ಕೆ ಬಂದು, ಅವರು ರಸ್ತೆಯ ಮೇಲೆ ಕಂಡದ್ದನ್ನು ಹೇಳಿದರು.


ನಂತರ ಆ ಪ್ರವಾದಿಯು ತನ್ನ ಮಕ್ಕಳಿಗೆ, “ನನ್ನ ಕತ್ತೆಯ ಮೇಲೆ ತಡಿಯೊಂದನ್ನು ಹಾಕಿ” ಎಂದು ಹೇಳಿದನು. ಆಗ ಅವನ ಮಕ್ಕಳು ಕತ್ತೆಯ ಮೇಲೆ ತಡಿಯನ್ನು ಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು