ಯೋಷೀಯನ ಮಗನಾದ ಯೆಹೋಯಾಕೀಮನಿಗೆ ಯೆಹೋವನು ಹೀಗೆ ಹೇಳುವನು, “ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಗೋಳಾಡುವದಿಲ್ಲ. ಅವರು ಒಬ್ಬರಿಗೊಬ್ಬರು, ‘ನನ್ನ ಸೋದರನೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ, ನನ್ನ ಸೋದರಿಯೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ’ ಎಂದು ಹೇಳುವದಿಲ್ಲ. ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಅಳುವದಿಲ್ಲ. ಅವರು ಅವನ ಬಗ್ಗೆ ‘ಒಡೆಯನೇ, ನನ್ನ ರಾಜನೇ, ನನಗೆ ತುಂಬಾ ದುಃಖವಾಗಿದೆ’ ಎಂದು ಹೇಳುವದಿಲ್ಲ.
ಇಸ್ರೇಲರೆಲ್ಲರು ಅವನಿಗಾಗಿ ಗೋಳಾಡಿ ಸಮಾಧಿಮಾಡುತ್ತಾರೆ. ಯಾರೊಬ್ಬಾಮನ ಕುಟುಂಬದಲ್ಲಿ ನಿನ್ನ ಮಗನನೊಬ್ಬನನ್ನು ಮಾತ್ರ ಸಮಾಧಿ ಮಾಡುತ್ತಾರೆ. ಏಕೆಂದರೆ ಯಾರೊಬ್ಬಾಮನ ಕುಟುಂಬದಲ್ಲಿ ಇವನೊಬ್ಬನು ಮಾತ್ರ ಇಸ್ರೇಲಿನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.
ಯೋಷೀಯನು, “ನಾನು ನೋಡುತ್ತಿರುವ ಆ ಸ್ಮಾರಕ ಯಾವುದು?” ಎಂದು ಕೇಳಿದನು. ಆ ನಗರದ ಜನರು ಅವನಿಗೆ, “ಅದು ಯೆಹೂದದಿಂದ ಬಂದ ದೇವಮನುಷ್ಯನ ಸಮಾಧಿ. ನೀನು ಬೇತೇಲಿನ ಯಜ್ಞವೇದಿಕೆಗೆ ಮಾಡಿದ ಕಾರ್ಯಗಳನ್ನು ಕುರಿತು ಈ ಪ್ರವಾದಿಯು ಬಹಳ ಕಾಲದ ಹಿಂದೆಯೇ ಹೇಳಿದ್ದನು” ಎಂದರು.