Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:33 - ಪರಿಶುದ್ದ ಬೈಬಲ್‌

33 ರಾಜನಾದ ಯಾರೊಬ್ಬಾಮನು ಬದಲಾವಣೆಯಾಗಲಿಲ್ಲ. ಅವನು ಕೆಟ್ಟಕಾರ್ಯಗಳನ್ನು ಮಾಡುತ್ತಲೇ ಇದ್ದನು. ಅವನು ಬೇರೆಬೇರೆ ಕುಲಗಳಿಂದ ಯಾಜಕರನ್ನು ಆರಿಸಿಕೊಳ್ಳುತ್ತಲೇ ಇದ್ದನು. ಆ ಯಾಜಕರು ಎತ್ತರದ ಸ್ಥಳಗಳಲ್ಲಿ ಸೇವೆಯನ್ನು ಮಾಡುತ್ತಿದ್ದರು. ಯಾಜಕನಾಗಬೇಕೆಂದು ಯಾವ ವ್ಯಕ್ತಿಯಾದರೂ ಇಚ್ಛಿಸಿದರೆ, ಯಾಜಕನಾಗಲು ಅವನಿಗೆ ಅವಕಾಶ ಕಲ್ಪಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ, ಪುನಃ ಕನಿಷ್ಠರಾದ ಜನರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ ಪದೇ ಪದೇ ಜನಸಾಮಾನ್ಯರನ್ನು ಉನ್ನತಸ್ಥಾನಗಳಿಗೆ ನೇಮಿಸಿದನು; ಮನಸ್ಸಿಗೆ ಬಂದವರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ ತಿರಿಗಿ ತಿರಿಗಿ ಕನಿಷ್ಠರಾದ ಜನರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ನೇವಿುಸಿದನು; ಮನಸ್ಸಿಗೆ ಬಂದವರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ, ಪೂಜಾ ಸ್ಥಳಗಳಿಗೆ ಕನಿಷ್ಠ ಜನರಿಂದ ಪುನಃ ಯಾಜಕರನ್ನು ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ, ಪೂಜಾಸ್ಥಳಗಳ ಯಾಜಕರಲ್ಲಿ ಅವನು ಒಬ್ಬನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:33
21 ತಿಳಿವುಗಳ ಹೋಲಿಕೆ  

ನೀವು ಆರೋನನ ಸಂತತಿಯವರಾದ ಯೆಹೋವನ ಯಾಜಕರನ್ನು ಹೊರಡಿಸಿಬಿಟ್ಟರಿ. ನೀವು ಲೇವಿಯರನ್ನೂ ಹೊರಡಿಸಿಬಿಟ್ಟಿರಿ. ಅನ್ಯಜನಾಂಗದವರಂತೆ ನೀವು ನಿಮ್ಮಲ್ಲಿಂದಲೇ ಯಾಜಕರನ್ನು ಆರಿಸಿಕೊಂಡಿರಿ. ಯಾವನಾದರೂ ಏಳು ಟಗರುಗಳನ್ನೂ ಒಂದು ಎಳೇ ಹೋರಿಯನ್ನೂ ತಂದರೆ ನೀವು ಅವನನ್ನು ‘ದೇವರಲ್ಲದವುಗಳ’ ಸೇವೆಮಾಡಲು ಯಾಜಕನನ್ನಾಗಿ ಮಾಡುವಿರಿ.


ಯಾರೊಬ್ಬಾಮನು ತನಗೆ ಬೇಕಾದ ಯಾಜಕರನ್ನು ಆರಿಸಿ ತಾನು ಮಾಡಿಸಿದ ಬಸವನ ಮತ್ತು ಆಡುಗಳ ಪ್ರತಿಮೆಗಳನ್ನು ಉನ್ನತಸ್ಥಳಗಳಲ್ಲಿ ಪ್ರತಿಷ್ಠಾಪಿಸಿ ಆರಾಧಿಸಲು ನೇಮಿಸಿದನು.


ದುಷ್ಟರು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನದಿಂದ ದಿನಕ್ಕೆ ಕೀಳುಮಟ್ಟಕ್ಕೆ ಇಳಿಯುತ್ತಿದ್ದಾರೆ.


ನೋಡು, ಯೆಹೋವನು ಆಜ್ಞೆಯನ್ನು ಕೊಡುವನು. ಆಗ ಭವ್ಯಭವನಗಳು ಒಡೆದು ಚೂರುಚೂರಾಗಿ ಬೀಳುವವು. ಮತ್ತು ಸಣ್ಣ ಮನೆಗಳು ಚಿಂದಿಚಿಂದಿಯಾಗಿ ಚೂರಾಗುವವು.


ಅವನು ಜೇಡಿಮಣ್ಣಿನಿಂದ ಒಂದು ಮಡಕೆಯನ್ನು ಮಾಡುತ್ತಿದ್ದನು. ಆ ಮಡಕೆಯಲ್ಲಿ ಯಾವುದೋ ಒಂದು ದೋಷವಿತ್ತು. ಆದ್ದರಿಂದ ಆ ಕುಂಬಾರನು ಪುನಃ ಆ ಜೇಡಿಮಣ್ಣನ್ನು ಬಳಸಿ ಮತ್ತೊಂದು ಮಡಕೆಯನ್ನು ಮಾಡಿದನು. ಮಡಕೆಗೆ ತಾನು ಬಯಸಿದ ಆಕಾರವನ್ನು ಕೊಡಲು ತನ್ನ ಕೈಗಳನ್ನು ಉಪಯೋಗಿಸಿದನು.


ಅವರಲ್ಲಿ ಕೆಲವರನ್ನು ದೇವರು ಕೊಂದಾಗಲೆಲ್ಲಾ, ಉಳಿದವರು ಆತನ ಕಡೆಗೆ ತಿರುಗಿಕೊಂಡು ಓಡಿ ಬರುತ್ತಿದ್ದರು.


ಮೀಕನು ಅವನನ್ನು ತಮಗೆ ಯಾಜಕನಾಗಬೇಕೆಂದು ಕೇಳಿಕೊಂಡನು. ಆದ್ದರಿಂದ ಆ ತರುಣನು ಯಾಜಕನಾಗಿ ಮೀಕನ ಮನೆಯಲ್ಲಿಯೇ ವಾಸಮಾಡಿದನು.


ನಾನು ಒಬ್ಬನನ್ನು ನನ್ನ ಯಾಜಕನನ್ನಾಗಿ ಆರಿಸಿಕೊಳ್ಳುವೆನು; ಅವನ ಕೋಲು ಚಿಗುರುವುದು, ಇಸ್ರೇಲ್ ಜನರು ನಿಮ್ಮ ವಿರುದ್ಧವಾಗಿ ಹೇಳುತ್ತಿರುವ ದೂರುಗಳನ್ನು ನಾನು ಹೀಗೆ ನಿಲ್ಲಿಸುವೆನು.”


“ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸು. ಅವರು ತಮ್ಮತಮ್ಮ ಯಾಜಕ ಉದ್ಯೋಗವನ್ನು ಕಾಪಾಡಿಕೊಳ್ಳಬೇಕು. ಯಾಜಕರ ಕರ್ತವ್ಯಗಳನ್ನು ಮಾಡಲು ಪವಿತ್ರ ವಸ್ತುಗಳ ಬಳಿಗೆ ಬರಲು ಬೇರೆ ಯಾವನಾದರೂ ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು.”


ಪವಿತ್ರ ಗುಡಾರವನ್ನು ತೆಗೆದುಕೊಂಡು ಹೋಗುವಾಗಲೆಲ್ಲಾ ಲೇವಿಯರೇ ಅದನ್ನು ಬಿಚ್ಚಬೇಕು, ಇಳಿಸುವಾಗಲೆಲ್ಲಾ ಲೇವಿಯರೇ ಅದನ್ನು ಹಾಕಬೇಕು. ಪವಿತ್ರ ಗುಡಾರವನ್ನು ನೋಡಿಕೊಳ್ಳುವವರು ಅವರೇ. ಲೇವಿ ಕುಲಕ್ಕೆ ಸೇರದ ಯಾವನಾದರೂ ಅದರ ಸಮೀಪಕ್ಕೆ ಬಂದರೆ, ಅವನಿಗೆ ಮರಣಶಿಕ್ಷೆಯಾಗಬೇಕು.


ನಿನ್ನ ಸಹೋದರನಾದ ಆರೋನನಿಗೆ ಮತ್ತು ಅವನ ಗಂಡುಮಕ್ಕಳಿಗೆ ಬಟ್ಟೆಗಳನ್ನು ತೊಡಿಸು. ಬಳಿಕ ಅವರನ್ನು ಯಾಜಕರನ್ನಾಗಿ ಮಾಡಲು ವಿಶೇಷ ತೈಲದಿಂದ ಅಭಿಷೇಕಿಸು. ಇದು ಅವರನ್ನು ಪ್ರತಿಷ್ಠಿಸುವುದು ಮತ್ತು ಪವಿತ್ರರನ್ನಾಗಿ ಮಾಡುವುದು. ಅವರು ಯಾಜಕರಾಗಿ ನನ್ನ ಸೇವೆ ಮಾಡುವರು.


ವಿಗ್ರಹಗಳನ್ನು ಪೂಜಿಸುವುದಕ್ಕಾಗಿ ಮೀಕನಿಗೆ ಒಂದು ಮಂದಿರವಿತ್ತು. ಮೀಕನು ಏಫೋದನ್ನೂ ವಿಗ್ರಹಗಳನ್ನೂ ಪೂಜಿಸಲು ತನ್ನ ಒಬ್ಬ ಮಗನನ್ನು ಅರ್ಚಕನನ್ನಾಗಿ ನೇಮಿಸಿದನು.


ನಾದಾಬನು ಯೆಹೋವನ ವಿರುದ್ಧ ಕೆಟ್ಟಕಾರ್ಯಗಳನ್ನು ಮಾಡಿದನು. ತನ್ನ ತಂದೆಯಾದ ಯಾರೊಬ್ಬಾಮನು ಮಾಡಿದ ಪಾಪಗಳನ್ನೇ ಅವನೂ ಮಾಡಿದನು. ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು.


ಆದರೂ ಇಸ್ರೇಲಿನ ಪಾಪಗಳಿಗೆ ಪ್ರೇರಕನಾದ, ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಂದ ಯೇಹುವು ಸಂಪೂರ್ಣವಾಗಿ ವಿಮುಖನಾಗಲಿಲ್ಲ. ಬೇತೇಲ್ ಮತ್ತು ದಾನ್‌ಗಳಲ್ಲಿದ್ದ ಬಂಗಾರದ ಕರುಗಳನ್ನು ಯೇಹುವು ನಾಶಗೊಳಿಸಲಿಲ್ಲ.


ಬೇತೇಲಿನ ಯಾಜಕನಾದ ಅಮಚ್ಯನು ಇಸ್ರೇಲಿನ ಅರಸನಾದ ಯಾರೊಬ್ಬಾಮನಿಗೆ ಈ ಪತ್ರವನ್ನು ಕಳುಹಿಸಿದನು. “ನಿನಗೆ ವಿರುದ್ಧವಾಗಿ ಆಮೋಸನು ಯೋಜನೆಗಳನ್ನು ಮಾಡುತ್ತಿದ್ದಾನೆ. ಇಸ್ರೇಲಿನ ಜನರು ನಿನಗೆ ವಿರುದ್ಧವಾಗಿ ಯುದ್ಧಮಾಡುವಂತೆ ಪ್ರಯತ್ನಿಸುತ್ತಾನೆ. ಅವನು ಎಷ್ಟೆಲ್ಲಾ ಮಾತಾಡುತ್ತಾನೆಂದರೆ, ಈ ದೇಶವು ಅವನ ಮಾತುಗಳನ್ನು ತುಂಬಲು ಸಾಧ್ಯವಿಲ್ಲ.


ತನ್ನ ಪೂರ್ವಿಕರು ಅನುಸರಿಸಿದ ದೇವರನ್ನು ನಿರೀಕ್ಷಿಸಿದನು. ಆತನ ಆಜ್ಞೆಗಳನ್ನು ಅನುಸರಿಸಿದನು. ಇಸ್ರೇಲಿ ಅರಸರು ನಡೆದಂತೆ ಇವನು ನಡೆಯಲಿಲ್ಲ.


ಆಹಾಜನಿಗೆ ಸಂಕಟ ಬಂದಾಗಲೂ ಇನ್ನೂ ಹೆಚ್ಚಾಗಿ ಪಾಪ ಮಾಡುತ್ತಾ ಯೆಹೋವನಿಗೆ ಇನ್ನೂ ಹೆಚ್ಚಾಗಿ ದ್ರೋಹಿಯಾದನು.


ನೀನು ಮೂಢನನ್ನು ಅರೆದು ಪುಡಿಪುಡಿ ಮಾಡಿದರೂ ಅವನ ಮೂಢತನವನ್ನು ತೊಲಗಿಸಲಾರೆ.


ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನ್ನೂ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು