Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:5 - ಪರಿಶುದ್ದ ಬೈಬಲ್‌

5 ಯಜ್ಞವೇದಿಕೆಯೂ ಒಡೆದು ಚೂರಾಯಿತು. ಅದರ ಮೇಲಿನ ಬೂದಿಯು ನೆಲದ ಮೇಲೆ ಚೆಲ್ಲಿಹೋಯಿತು. ದೇವರೇ ಆಜ್ಞಾಪಿಸಿದನೆಂದು ದೇವಮನುಷ್ಯನು ಹೇಳಿದ ಸಂಗತಿಗಳಿಗೆ ಇದೇ ಗುರುತಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಯಿತು. ಹೀಗೆ ಆ ದೇವರ ಮನುಷ್ಯನು ಯೆಹೋವನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬಲಿಪೀಠವು ಸೀಳಿ ಅದರ ಮೇಲಿನ ಬೂದಿ ಬಿದ್ದುಹೋಯಿತು. ಹೀಗೆ ಆ ದೈವಭಕ್ತನು ಸರ್ವೇಶ್ವರನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ಅದನ್ನು ಹಿಂದೆಗೆಯಲಾರದವನಾದನು. ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಯಿತು; ಹೀಗೆ ಆ ದೇವರ ಮನುಷ್ಯನು ಯೆಹೋವನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ಯೆಹೋವ ದೇವರ ಮಾತಿನಿಂದ ದೇವರ ಮನುಷ್ಯನು ಕೊಟ್ಟ ಗುರುತಿನ ಪ್ರಕಾರವೇ ಬಲಿಪೀಠವು ಸೀಳಿಹೋಗಿ, ಬೂದಿಯು ಬಲಿಪೀಠದಿಂದ ಬಿದ್ದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:5
13 ತಿಳಿವುಗಳ ಹೋಲಿಕೆ  

ಶಿಷ್ಯರು ಪ್ರಪಂಚದ ಎಲ್ಲಾ ಕಡೆಗೆ ಹೋಗಿ, ಜನರಿಗೆ ಸುವಾರ್ತೆಯನ್ನು ಸಾರಿದರು. ಪ್ರಭುವು ಅವರೊಂದಿಗೆ ಕಾರ್ಯಸಾಧಿಸುತ್ತಾ, ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸಿದನು.


ಸೈನಿಕರು ಹೋರಾಡುತ್ತಲೇ ಇದ್ದರು. ರಾಜನಾದ ಅಹಾಬನು ರಥದಲ್ಲಿಯೇ ಇದ್ದನು. ಅವನು ರಥದ ಒಂದು ಪಕ್ಕಕ್ಕೆ ಒರಗಿಕೊಂಡು ನಿಂತಿದ್ದನು. ಅವನು ಅರಾಮ್ಯರ ಸೇನೆಯ ಕಡೆಗೆ ನೋಡುತ್ತಲೇ ಇದ್ದನು. ಅವನ ದೇಹದಿಂದ ಹರಿದ ರಕ್ತವು, ರಥದ ತಳದಲ್ಲಿ ಮಡುಗಟ್ಟಿತು. ಸಾಯಂಕಾಲವಾದ ಮೇಲೆ ರಾಜನು ಸತ್ತುಹೋದನು.


ಮೀಕಾಯೆಹು ಗಟ್ಟಿಯಾದ ಧ್ವನಿಯಲ್ಲಿ, “ನಾನು ಏನು ಹೇಳುತ್ತೇನೆಂಬುದನ್ನು ಜನರೆಲ್ಲರೂ ಕೇಳಿರಿ! ರಾಜನಾದ ಅಹಾಬನೇ, ನೀನು ಈ ಹೋರಾಟದಿಂದ ಜೀವಸಹಿತ ಮನೆಗೆ ಬಂದರೆ, ಯೆಹೋವನು ನನ್ನ ಮೂಲಕ ಮಾತನಾಡಿಲ್ಲ” ಎಂದು ಹೇಳಿದನು.


ಇದಲ್ಲದೆ ದೇವಮನುಷ್ಯನು ಜನರಿಗೆ, “ಯೆಹೋವನು ಇದರ ಬಗ್ಗೆ ನನಗೆ ಹೇಳಿರುವ ಗುರುತೇನೆಂದರೆ, ‘ಯಜ್ಞವೇದಿಕೆಯು ಒಡೆದುಹೋಳಾಗುವುದು, ಬೂದಿಯು ನೆಲದ ಮೇಲೆ ಚೆಲ್ಲಿಹೋಗುವುದು’” ಎಂದನು.


ಒಬ್ಬ ಪ್ರವಾದಿಯು ತಾನು ಯೆಹೋವನಿಂದ ಕಳುಹಿಸಲ್ಪಟ್ಟವನು ಎಂದು ಹೇಳಿಕೊಂಡರೆ ಮತ್ತು ಅವನು ಹೇಳಿದ ಮಾತುಗಳು ನೆರವೇರದೆ ಹೋದರೆ ಆಗ ಆ ವಿಷಯಗಳನ್ನು ಯೆಹೋವನು ಹೇಳಲಿಲ್ಲವೆಂದು ನಿಮಗೆ ಗೊತ್ತಾಗುವುದು. ಆ ಪ್ರವಾದಿಯು ತನ್ನದೆ ಆದ ಆಲೋಚನೆಯನ್ನು ನಿಮಗೆ ಹೇಳುತ್ತಿದ್ದಾನೆಂದು ನಿಮಗೆ ತಿಳಿಯುವುದು. ನೀವು ಅವನಿಗೆ ಭಯಪಡಬೇಡಿರಿ.


ಬೇತೇಲಿನ ಯಜ್ಞವೇದಿಕೆಯನ್ನು ಕುರಿತು ದೇವಮನುಷ್ಯನು ಹೇಳಿದ ಸಂದೇಶವು ರಾಜನಾದ ಯಾರೊಬ್ಬಾಮನಿಗೆ ಕೇಳಿಸಿತು. ಅವನು ತನ್ನ ಕೈಯನ್ನು ಯಜ್ಞವೇದಿಕೆಯಿಂದ ಥಟ್ಟನೆ ತೆಗೆದು, ಆ ಮನುಷ್ಯನ ಕಡೆಗೆ ಗುರಿಮಾಡಿ, “ಆ ಮನುಷ್ಯನನ್ನು ಹಿಡಿಯಿರಿ!” ಎಂದು ಹೇಳಿದನು. ಆದರೆ ರಾಜನು ಇದನ್ನು ಹೇಳಿದಾಗ, ಅವನ ಕೈಗೆ ಲಕ್ವ ಹೊಡೆಯಿತು. ಅವನು ಅದನ್ನು ಚಲಿಸಲಾಗಲಿಲ್ಲ,


ನಂತರ ರಾಜನಾದ ಯಾರೊಬ್ಬಾಮನು ದೇವಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನಲ್ಲಿ ನನಗಾಗಿ ಪ್ರಾರ್ಥಿಸು. ನನ್ನ ಕೈಯನ್ನು ಗುಣಪಡಿಸುವಂತೆ ಯೆಹೋವನಲ್ಲಿ ಪ್ರಾರ್ಥಿಸು” ಎಂದನು. ದೇವಮನುಷ್ಯನು ಯೆಹೋವನಿಗೆ ಪ್ರಾರ್ಥಿಸಿದನು. ಆಗ ರಾಜನ ಕೈ ಗುಣವಾಯಿತು. ಅದು ಮತ್ತೆ ಮೊದಲಿನಂತೆ ಆಯಿತು.


ಮಡಕೆಯಲ್ಲಿದ್ದ ಹಿಟ್ಟು ಮತ್ತು ಪಾತ್ರೆಯಲ್ಲಿದ್ದ ಎಣ್ಣೆ ಎಂದೆಂದಿಗೂ ಖಾಲಿಯಾಗಲಿಲ್ಲ. ಯೆಹೋವನು ಎಲೀಯನ ಮೂಲಕ ಹೇಳಿದ್ದಂತೆಯೇ ಇದು ಸಂಭವಿಸಿತು.


ಇಸ್ರೇಲು ಪಾಪಮಾಡಿದೆ. ಅದಕ್ಕಾಗಿ ನಾನು ಅದನ್ನು ಶಿಕ್ಷಿಸುವೆನು. ಬೇತೇಲಿನಲ್ಲಿರುವ ವೇದಿಕೆಗಳನ್ನು ನಾನು ನಾಶಮಾಡುವೆನು. ವೇದಿಕೆಯ ಕೊಂಬುಗಳು ಮುರಿಯಲ್ಪಟ್ಟು ನೆಲದ ಮೇಲೆ ಬೀಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು