1 ಅರಸುಗಳು 13:7 - ಪರಿಶುದ್ದ ಬೈಬಲ್7 ಆಗ ರಾಜನು ದೇವಮನುಷ್ಯನಿಗೆ, “ದಯವಿಟ್ಟು ನನ್ನೊಡನೆ ಮನೆಗೆ ಬಾ. ನನ್ನೊಡನೆ ಊಟಮಾಡು. ನಾನು ನಿನಗೆ ಒಂದು ಕಾಣಿಕೆಯನ್ನು ಕೊಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ಅರಸನು ಅವನಿಗೆ, “ನನ್ನ ಮನೆಗೆ ಬಾ, ಸ್ವಲ್ಪ ಊಟ ಮಾಡಿ ವಿಶ್ರಾಂತಿ ಪಡೆದುಕೋ. ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಅರಸನು, “ನನ್ನ ಮನೆಗೆ ಬಾ; ಸ್ವಲ್ಪ ಊಟಮಾಡಿ ಸುಧಾರಿಸಿಕೊ. ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಗ ಅರಸನು ಅವನಿಗೆ - ನನ್ನ ಮನೆಗೆ ಬಾ; ಸ್ವಲ್ಪ ಊಟಮಾಡಿ ಬಲಹೊಂದು; ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ ಅನ್ನಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅರಸನು ದೇವರ ಮನುಷ್ಯನಿಗೆ, “ನೀನು ನನ್ನ ಮನೆಗೆ ಬಂದು ಊಟಮಾಡಿ ವಿಶ್ರಮಿಸಿಕೋ, ನಾನು ನಿನಗೆ ಬಹುಮಾನ ಕೊಡುವೆನು,” ಎಂದನು. ಅಧ್ಯಾಯವನ್ನು ನೋಡಿ |
ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.