1 ಅರಸುಗಳು 13:8 - ಪರಿಶುದ್ದ ಬೈಬಲ್8 ಆದರೆ ದೇವಮನುಷ್ಯನು ರಾಜನಿಗೆ, “ನಾನು ನಿನ್ನೊಡನೆ ಮನೆಗೆ ಬರುವುದಿಲ್ಲ! ನೀನು ನಿನ್ನ ಅರ್ಧರಾಜ್ಯವನ್ನು ಕೊಟ್ಟರೂ ನಾನು ಬರುವುದಿಲ್ಲ! ನಾನು ಈ ಸ್ಥಳದಲ್ಲಿ ಏನನ್ನೂ ತಿನ್ನುವುದಿಲ್ಲ ಮತ್ತು ಕುಡಿಯುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೆ ದೇವರ ಮನುಷ್ಯನು ಅರಸನಿಗೆ, “ನೀನು ನನಗೆ ನಿನ್ನ ಆಸ್ತಿಯಲ್ಲಿ ಅರ್ಧವನ್ನು ಕೊಟ್ಟರೂ, ನಾನು ನಿನ್ನ ಸಂಗಡ ಬರುವುದಿಲ್ಲ. ಇಲ್ಲಿ ಅನ್ನ ಪಾನಗಳನ್ನು ತೆಗೆದುಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆ ದೈವಭಕ್ತನು, “ನೀವು ನನಗೆ ನಿಮ್ಮ ಆಸ್ತಿಯಲ್ಲಿ ಅರ್ಧ ಕೊಟ್ಟರೂ ನಾನು ನಿಮ್ಮ ಸಂಗಡ ಬರುವುದಿಲ್ಲ. ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದೇವರ ಮನುಷ್ಯನು ಅರಸನಿಗೆ - ನೀನು ನನಗೆ ನಿನ್ನ ಆಸ್ತಿಯಲ್ಲಿ ಅರ್ಧವನ್ನು ಕೊಟ್ಟರೂ ನಾನು ನಿನ್ನ ಸಂಗಡ ಬರುವದಿಲ್ಲ; ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ದೇವರ ಮನುಷ್ಯನು ಅರಸನಿಗೆ ಉತ್ತರವಾಗಿ, “ನೀನು ನನಗೆ ನಿನ್ನ ಅರ್ಧ ಆಸ್ತಿಯನ್ನು ಕೊಟ್ಟರೂ, ನಾನು ನಿನ್ನ ಸಂಗಡ ಹೋಗುವುದಿಲ್ಲ. ಈ ಸ್ಥಳದಲ್ಲಿ ರೊಟ್ಟಿ ತಿನ್ನುವುದಿಲ್ಲ, ಕುಡಿಯುವುದಿಲ್ಲ. ಅಧ್ಯಾಯವನ್ನು ನೋಡಿ |