Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:12 - ಪರಿಶುದ್ದ ಬೈಬಲ್‌

12 ನಂತರ ಪ್ರವಾದಿಯಾದ ಅಹೀಯನು ಯಾರೊಬ್ಬಾಮನ ಪತ್ನಿಯ ಸಂಗಡ ಮಾತನಾಡುವುದನ್ನು ಮುಂದುವರಿಸಿ, “ಈಗ ಮನೆಗೆ ಹೋಗು. ನೀನು ನಿನ್ನ ನಗರವನ್ನು ಪ್ರವೇಶಿಸಿದ ತಕ್ಷಣ, ನಿನ್ನ ಮಗನು ಸತ್ತುಹೋಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀನು ಪಟ್ಟಣದೊಳಗೆ ಕಾಲಿಡುವಷ್ಟರಲ್ಲಿ ಹುಡುಗನು ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ನೀನು ನಿನ್ನ ಮನೆಗೆ ಹೋಗು; ನೀನು ಪಟ್ಟಣದೊಳಗೆ ಕಾಲಿಡುವಷ್ಟರಲ್ಲಿ ಹುಡುಗನು ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀನು ನಿನ್ನ ಮನೆಗೆ ಹೋಗು; ನೀನು ಪಟ್ಟಣದೊಳಗೆ ಕಾಲಿಡುವಷ್ಟರಲ್ಲಿ ಹುಡುಗನು ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಆದ್ದರಿಂದ ನೀನೆದ್ದು ನಿನ್ನ ಮನೆಗೆ ಹೋಗು. ಪಟ್ಟಣದಲ್ಲಿ ಪ್ರವೇಶಿಸುವಾಗ ನಿನ್ನ ಮಗನು ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:12
6 ತಿಳಿವುಗಳ ಹೋಲಿಕೆ  

ಎಲೀಯನು ಅಹಜ್ಯನಿಗೆ, “ಇಸ್ರೇಲಿನಲ್ಲಿ ದೇವರಿದ್ದಾನೆ. ಹೀಗಿರುವಾಗ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ಪ್ರಶ್ನೆಗಳನ್ನು ಕೇಳಲು ಸಂದೇಶಕರನ್ನು ಏಕೆ ಕಳುಹಿಸಿದೆ? ನೀನು ಈ ಕಾರ್ಯವನ್ನು ಮಾಡಿದ್ದರಿಂದ ನಿನ್ನ ಹಾಸಿಗೆಯಿಂದ ನೀನು ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ! ಎಂಬುದಾಗಿ ಯೆಹೋವನು ಅನ್ನುತ್ತಾನೆ.” ಎಂದು ಹೇಳಿದನು.


ಸಂದೇಶಕರು ಅಹಜ್ಯನಿಗೆ, “ಒಬ್ಬನು ನಮ್ಮನ್ನು ಭೇಟಿಯಾಗಿ ನಿಮ್ಮನ್ನು ಕಳುಹಿಸಿದ ರಾಜನ ಬಳಿಗೆ ಹಿಂದಿರುಗಿ ಹೋಗಿ ಯೆಹೋವನು ಹೇಳುವುದನ್ನು ಅವನಿಗೆ ತಿಳಿಸಿ. ಯೆಹೋವನು ಹೇಳುವುದೇನೆಂದರೆ: ‘ಇಸ್ರೇಲಿನಲ್ಲಿ ಒಬ್ಬ ದೇವರಿದ್ದಾನೆ! ಹೀಗಿರುವಾಗ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಸಂದೇಶಕರನ್ನು ಕಳುಹಿಸಿದುದೇಕೆ? ನೀನು ಈ ಕಾರ್ಯವನ್ನು ಮಾಡಿದ್ದರಿಂದ ನಿನ್ನ ಹಾಸಿಗೆಯಿಂದ ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ!’” ಎಂಬುದಾಗಿ ಹೇಳಿದರು.


ಪ್ರವಾದಿಗೆ ಹತ್ತು ರೊಟ್ಟಿಗಳನ್ನು, ಕೆಲವು ಸಿಹಿ ಪದಾರ್ಥಗಳನ್ನು ಮತ್ತು ಜೇನುತುಪ್ಪ ಜಾಡಿಯನ್ನು ಕೊಡು. ನಂತರ ನಮ್ಮ ಮಗನಿಗೆ ಏನಾಗುತ್ತದೆಂಬುದನ್ನು ಕೇಳು. ಪ್ರವಾದಿಯಾದ ಅಹೀಯನು ನಿನಗೆ ತಿಳಿಸುತ್ತಾನೆ” ಎಂದು ಹೇಳಿದನು.


ಇಸ್ರೇಲರೆಲ್ಲರು ಅವನಿಗಾಗಿ ಗೋಳಾಡಿ ಸಮಾಧಿಮಾಡುತ್ತಾರೆ. ಯಾರೊಬ್ಬಾಮನ ಕುಟುಂಬದಲ್ಲಿ ನಿನ್ನ ಮಗನನೊಬ್ಬನನ್ನು ಮಾತ್ರ ಸಮಾಧಿ ಮಾಡುತ್ತಾರೆ. ಏಕೆಂದರೆ ಯಾರೊಬ್ಬಾಮನ ಕುಟುಂಬದಲ್ಲಿ ಇವನೊಬ್ಬನು ಮಾತ್ರ ಇಸ್ರೇಲಿನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು