Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:16 - ಪರಿಶುದ್ದ ಬೈಬಲ್‌

16 ಯಾರೊಬ್ಬಾಮನು ಪಾಪವನ್ನು ಮಾಡಿದನು. ನಂತರ ಇಸ್ರೇಲಿನ ಜನರೂ ಪಾಪ ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು. ಆದ್ದರಿಂದ ಇಸ್ರೇಲಿನ ಜನರು ಸೋಲಿಸಲ್ಪಡುವಂತೆ ಯೆಹೋವನು ಅವಕಾಶ ಮಾಡುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು” ಎಂದು ಆಕೆಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಯಾರೊಬ್ಬಾಮನ ಪಾಪಗಳ ನಿಮಿತ್ತ ಹಾಗು ಅವನ ಪ್ರೇರಣೆಯಿಂದ ಇಸ್ರಯೇಲರು ಮಾಡಿದ ಪಾಪಗಳ ನಿಮಿತ್ತ ಸರ್ವೇಶ್ವರ ಅವರನ್ನು ಶತ್ರುಗಳಿಗೆ ಒಪ್ಪಿಸುವರು,” ಎಂದು ಆಕೆಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಯಾರೊಬ್ಬಾಮನ ಪಾಪಗಳ ನಿವಿುತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲ್ಯರು ಮಾಡಿದ ಪಾಪಗಳ ನಿವಿುತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು ಎಂದು ಆಕೆಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲರನ್ನು ಶತ್ರುಗಳಿಗೆ ಒಪ್ಪಿಸಿಬಿಡುವರು. ಏಕೆಂದರೆ ಯಾರೊಬ್ಬಾಮನೇ ಪಾಪಮಾಡಿ, ಪಾಪವನ್ನು ಮಾಡಲು ಇಸ್ರಾಯೇಲರನ್ನು ಪ್ರೇರೇಪಿಸಿದನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:16
36 ತಿಳಿವುಗಳ ಹೋಲಿಕೆ  

“ನಾನು ನಿನ್ನನ್ನು ಪ್ರಾಮುಖ್ಯ ವ್ಯಕ್ತಿಯನ್ನಾಗಿ ಮಾಡಿದೆ. ಇಸ್ರೇಲಿನ ಜನರಿಗೆ ನಿನ್ನನ್ನು ರಾಜನನ್ನಾಗಿ ನಾನು ಮಾಡಿದೆ. ಆದರೆ ನೀನು ಯಾರೊಬ್ಬಾಮನ ಮಾರ್ಗವನ್ನೇ ಅನುಸರಿಸಿದೆ. ಇಸ್ರೇಲಿನ ನನ್ನ ಜನರು ಪಾಪಮಾಡುವಂತೆ ನೀನು ಪ್ರೇರೇಪಿಸಿದೆ. ಅವರು ತಮ್ಮ ಪಾಪಗಳಿಂದ ನನ್ನನ್ನು ಕೋಪಗೊಳಿಸಿದರು.


ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಬಾಷನು ಮಾಡಿದನು. ತನಗಿಂತ ಮುಂಚೆ ಆಳಿದ ಇಸ್ರೇಲಿನ ರಾಜನಾದ ಯಾರೊಬ್ಬಾಮನು ಮಾಡಿದ ಪಾಪಗಳನ್ನೇ ಅವನು ಮಾಡಿದನು. ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು.


ರಾಜನಾದ ಯಾರೊಬ್ಬಾಮನು ಅನೇಕ ಪಾಪಗಳನ್ನು ಮಾಡಿದ್ದರಿಂದ ಇದು ಸಂಭವಿಸಿತು. ಇಸ್ರೇಲಿನ ಜನರು ಅನೇಕ ಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಇಸ್ರೇಲಿನ ದೇವರಾದ ಯೆಹೋವನು ಹೆಚ್ಚು ಕೋಪಗೊಳ್ಳುವಂತೆ ಯಾರೊಬ್ಬಾಮನು ಮಾಡಿದ್ದನು.


ಅವನ ರಾಜ್ಯವು ವಿನಾಶಗೊಳ್ಳಲು ಮತ್ತು ಹಾಳಾಗಲು ಆ ಪಾಪವೇ ಕಾರಣವಾಯಿತು.


ಆದರೆ ಇದು ಮಹಾ ಪಾಪವಾಗಿತ್ತು. ಇಸ್ರೇಲಿನ ಜನರು ಕರುಗಳನ್ನು ಆರಾಧಿಸಲು ಬೇತೇಲ್ ಮತ್ತು ದಾನ್ ನಗರಗಳಿಗೆ ಪ್ರಯಾಣ ಮಾಡಿದರು.


ಆದ್ದರಿಂದ, ನಾವು ಒಬ್ಬರಿಗೊಬ್ಬರು ತೀರ್ಪುಕೊಡುವುದನ್ನು ಬಿಟ್ಟುಬಿಡಬೇಕು. ನಮ್ಮ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಬಲಹೀನಗೊಳಿಸುವಂಥ ಅಥವಾ ಪಾಪಕ್ಕೆ ಬೀಳಿಸುವಂಥ ಯಾವುದನ್ನೇ ಆಗಲಿ ಮಾಡದಂತೆ ನಾವು ನಿರ್ಧರಿಸಬೇಕು.


ಜನರನ್ನು ಪಾಪಕ್ಕೆ ನಡೆಸುವ ಸಂಗತಿಗಳ ನಿಮಿತ್ತ ನಾನು ಈ ಲೋಕದ ವಿಷಯದಲ್ಲಿ ದುಃಖಪಡುತ್ತೇನೆ. ಅವು ಯಾವಾಗಲೂ ಇರುತ್ತವೆ. ಆದರೆ ಅವುಗಳಿಗೆ ಕಾರಣವಾಗುವ ವ್ಯಕ್ತಿಗೆ ಬಹಳ ಕೇಡಾಗುವುದು.


ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”


ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.


ಇವರು ನೆಲದಲ್ಲಿ ನೆಟ್ಟಿರುವ ಸಸಿಗಳಂತಿರುವರು. ಅವುಗಳ ಬೇರುಗಳು ನೆಲದೊಳಗೆ ಆಳವಾಗಿ ಹೋಗುವ ಮೊದಲೇ ದೇವರ ಉಸಿರಿಗೆ ಅವು ಬಾಡಿ ಸಾಯುವವು; ಗಾಳಿಯು ಒಣಹುಲ್ಲಿನಂತೆ ಅವುಗಳನ್ನು ಬಡಿದುಕೊಂಡು ಹೋಗುವದು.


ಆದ್ದರಿಂದ ತಮ್ಮ ಇಷ್ಟಾನುಸಾರ ಮಾಡಲೆಂದು ಅವರನ್ನು ಬಿಟ್ಟುಕೊಟ್ಟೆ. ಇಸ್ರೇಲ್ ತನ್ನ ಇಷ್ಟಾನುಸಾರ ಮಾಡಿತು.


ಆದ್ದರಿಂದ ಯೆಹೋವನು ಜನರಿಗೆ ಭಯಂಕರವಾದ ವ್ಯಾದಿಯನ್ನು ಬರಮಾಡಿದನು. ಅವರು ಆರೋನನಿಂದ ಬಸವನನ್ನು ಮಾಡಿಸಿಕೊಂಡದ್ದೇ ಇದಕ್ಕೇ ಕಾರಣ.


ಮೋಶೆಯು ಆರೋನನಿಗೆ, “ಈ ಜನರು ನಿನಗೇನು ಮಾಡಿದರು? ಇಂಥಾ ಕೆಟ್ಟ ಪಾಪವನ್ನು ಮಾಡುವಂತೆ ಯಾಕೆ ಅವರನ್ನು ನಡಿಸಿದೆ?” ಎಂದು ಹೇಳಿದನು.


ಜನರು ಅಂಕೆತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಬಿಟ್ಟುಬಿಟ್ಟಿರುವುದು ಮೋಶೆಗೆ ತಿಳಿಯಿತು. ಜನರು ಕ್ರಮವಿಲ್ಲದೆ ಸ್ವೇಚ್ಛೆಯಿಂದ ನಡೆಯುತ್ತಿದ್ದರು; ಅವರ ಮೂರ್ಖತನವು ಅವರ ವಿರೋಧಿಗಳಿಗೆ ಎದ್ದುಕಾಣುತ್ತಿತ್ತು!


ನಾದಾಬನು ಯೆಹೋವನ ವಿರುದ್ಧ ಕೆಟ್ಟಕಾರ್ಯಗಳನ್ನು ಮಾಡಿದನು. ತನ್ನ ತಂದೆಯಾದ ಯಾರೊಬ್ಬಾಮನು ಮಾಡಿದ ಪಾಪಗಳನ್ನೇ ಅವನೂ ಮಾಡಿದನು. ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು.


ಜಿಮ್ರಿಯು ತಾನು ಮಾಡಿದ ಪಾಪದ ಕಾರಣದಿಂದಲೇ ಸತ್ತುಹೋದನು. ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಜಿಮ್ರಿಯು ಮಾಡಿದನು. ಯಾರೊಬ್ಬಾಮನು ಪಾಪಮಾಡಿದಂತೆ ಅವನೂ ಪಾಪವನ್ನು ಮಾಡಿದನು. ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು.


ನೆಬಾಟನ ಮಗನಾದ, ರಾಜನಾದ ಯಾರೊಬ್ಬಾಮನ ಕುಟುಂಬಕ್ಕೆ ಆದ ಗತಿಯೇ ನಿನ್ನ ಕುಟುಂಬಕ್ಕೂ ಆಗುವುದು. ರಾಜನಾದ ಬಾಷನ ಕುಟುಂಬಕ್ಕೆ ಆದ ಗತಿಯೇ ನಿನ್ನ ಕುಟುಂಬಕ್ಕೂ ಆಗುವುದು. ಈ ಎರಡು ಕುಟುಂಬಗಳೂ ಸಂಪೂರ್ಣವಾಗಿ ನಾಶಗೊಂಡವು. ನೀನು ನನ್ನನ್ನು ಕೋಪಗೊಳಿಸಿದ್ದಕ್ಕಾಗಿ ನಾನು ನಿನಗೆ ಹೀಗೆ ಮಾಡುತ್ತೇನೆ. ಇಸ್ರೇಲಿನ ಜನರು ಪಾಪಮಾಡುವುದಕ್ಕೆ ನೀನು ಕಾರಣನಾದೆ’ ಎನ್ನುತ್ತಾನೆ.


ಆದರೆ ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದ ಪಾಪಗಳನ್ನೇ ಅವನು ಮುಂದುವರಿಸಿದನು. ಇಸ್ರೇಲರು ಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಯೋರಾಮನು ಯಾರೊಬ್ಬಾಮನ ಪಾಪಗಳನ್ನು ನಿಲ್ಲಿಸಲಿಲ್ಲ.


ಒಬ್ಬನು ಸಾವಿರ ಮಂದಿಯನ್ನು ಓಡಿಸಬಲ್ಲನೇ? ಇಬ್ಬರು ಹತ್ತು ಸಾವಿರ ಮಂದಿಯನ್ನು ಓಡಿಸುವರೇ? ಯೆಹೋವನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುವಾಗ ಹಾಗೆಯೇ ಆಗುವುದು, ಅವರ ಬಂಡೆಯಾದ ದೇವರು ಅವರನ್ನು ಗುಲಾಮರನ್ನಾಗಿ ಮಾರುವನು;


ಬಾಷನ ಮತ್ತು ಅವನ ಮಗನಾದ ಏಲನ ಪಾಪಗಳೇ ಅದಕ್ಕೆ ಕಾರಣ. ಅವರು ಪಾಪಗಳನ್ನು ಮಾಡಿದರು ಮತ್ತು ಪಾಪಗಳನ್ನು ಮಾಡುವಂತೆ ಇಸ್ರೇಲಿನ ಜನರನ್ನು ಪ್ರೇರೇಪಿಸಿದರು. ಅವರಲ್ಲಿ ಅನೇಕ ವಿಗ್ರಹಗಳಿದ್ದುದರಿಂದ ಯೆಹೋವನು ಕೋಪಗೊಂಡನು.


ಒಮ್ರಿಯ ಕುರಿತಾದ ಇತರ ಸಂಗತಿಗಳನ್ನೂ ಅವನ ಪರಾಕ್ರಮಗಳನ್ನೂ “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ.


ಅಹಜ್ಯನು ತನ್ನ ತಂದೆಯಂತೆಯೇ ಸುಳ್ಳುದೇವರಾದ ಬಾಳನನ್ನು ಪೂಜಿಸಿ ಅವನ ಸೇವೆ ಮಾಡಿದನು; ಇಸ್ರೇಲಿನ ದೇವರಾದ ಯೆಹೋವನನ್ನು ರೇಗಿಸಿದನು. ಯೆಹೋವನು ಮೊದಲು ಅಹಜ್ಯನ ತಂದೆಯ ಮೇಲೆ ಕೋಪಗೊಂಡಿದ್ದಂತೆ, ಅಹಜ್ಯನ ಮೇಲೂ ಕೋಪಗೊಂಡನು.


ಆದರೆ ಯೇಹು ಇಸ್ರೇಲಿನ ದೇವರಾದ ಯೆಹೋವನ ನಿಯಮಗಳನ್ನು ಪೂರ್ಣಮನಸ್ಸಿನಿಂದಲೂ ಎಚ್ಚರಿಕೆಯಿಂದಲೂ ಪಾಲಿಸಲಿಲ್ಲ. ಇಸ್ರೇಲಿನ ಪಾಪಗಳಿಗೆ ಪ್ರೇರಕನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ಮಾಡುವುದನ್ನು ನಿಲ್ಲಿಸಲೇ ಇಲ್ಲ.


ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಯೆಹೋವಾಹಾಜನು ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನೂ ಯೆಹೋವಾಹಾಜನು ಅನುಸರಿಸುತ್ತಲೇ ಹೋದನು.


ಆದರೂ ಇಸ್ರೇಲರು ಪಾಪಗಳನ್ನು ಮಾಡುವಂತೆ ಪ್ರೇರೇಪಿಸಿದ ಯಾರೊಬ್ಬಾಮನ ಕುಟುಂಬದ ಪಾಪಗಳನ್ನು ಮಾಡುವುದನ್ನು ಇಸ್ರೇಲರು ನಿಲ್ಲಿಸಲಿಲ್ಲ. ಇಸ್ರೇಲರು ಯಾರೊಬ್ಬಾಮನ ಪಾಪಗಳನ್ನು ಮಾಡುತ್ತಲೇ ಹೋದರು. ಅವರು ಸಮಾರ್ಯದಲ್ಲಿ ಅಶೇರ ವಿಗ್ರಹಸ್ತಂಭವನ್ನು ನೆಟ್ಟರು.


ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯಾರೊಬ್ಬಾಮನು ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಕೃತ್ಯಗಳನ್ನು ಮಾಡುವುದನ್ನು ಯಾರೊಬ್ಬಾಮನು ನಿಲ್ಲಿಸಲಿಲ್ಲ.


ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಜೆಕರ್ಯನು ಮಾಡಿದನು. ಅವನ ಪೂರ್ವಿಕರು ಮಾಡಿದಂತೆಯೇ ಅವನೂ ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಕೃತ್ಯಗಳನ್ನು ಅವನು ನಿಲ್ಲಿಸಲಿಲ್ಲ.


ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಮೆನಹೇಮನು ಮಾಡಿದನು. ಇಸ್ರೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಕೃತ್ಯಗಳನ್ನು ಮೆನಹೇಮನು ಮುಂದುವರಿಸಿದನು.


ಯೆಹೋವನು ಇಸ್ರೇಲನ್ನು ದಾವೀದನ ವಂಶಾವಳಿಯಿಂದ ಕಿತ್ತುಹಾಕಿದನು. ಇಸ್ರೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ತಮ್ಮ ರಾಜನನ್ನಾಗಿಸಿಕೊಂಡರು. ಯಾರೊಬ್ಬಾಮನು ಇಸ್ರೇಲರನ್ನು ಯೆಹೋವನಿಂದ ದೂರಮಾಡಿದನು. ಇಸ್ರೇಲರು ಮಹಾಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು.


ಯೆಹೋವನು ಇಸ್ರೇಲನ್ನು ತನ್ನ ದೃಷ್ಟಿಯಿಂದ ದೂರ ತಳ್ಳುವವರೆಗೆ, ಅವರು ಈ ಪಾಪಗಳನ್ನು ಮಾಡುವುದನ್ನು ನಿಲ್ಲಿಸಲೇ ಇಲ್ಲ. ಇದು ಸಂಭವಿಸುತ್ತದೆಂದು ಯೆಹೋವನು ಹೇಳಿದ್ದನು! ಆತನು ಜನರಿಗೆ ಇದನ್ನು ಮುಂಚೆಯೇ ತಿಳಿಸಲು ತನ್ನ ಪ್ರವಾದಿಗಳನ್ನು ಕಳುಹಿಸಿದ್ದನು. ಆದ್ದರಿಂದಲೇ ಇಸ್ರೇಲರನ್ನು ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಹಿಡಿದು ಒಯ್ದರು. ಅವರು ಇಂದಿಗೂ ಅಲ್ಲಿಯೇ ಇದ್ದಾರೆ.


ಮನಸ್ಸೆಯು ಅನೇಕ ನಿರಪರಾಧಿಗಳನ್ನು ಕೊಂದುಹಾಕಿದನು; ಜೆರುಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೆ ರಕ್ತದಿಂದ ತುಂಬಿಸಿದನು. ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದ್ದರ ಜೊತೆಗೆ ಅವನ ಈ ಪಾಪಗಳು ಕೂಡಿಕೊಂಡವು. ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೆಹೂದವು ಮಾಡುವಂತೆ ಮನಸ್ಸೆಯು ಪ್ರೇರೇಪಿಸಿದನು.’”


ಯೋಷೀಯನು ಬೇತೇಲಿನ ಉನ್ನತಸ್ಥಳವನ್ನು ಮತ್ತು ಯಜ್ಞವೇದಿಕೆಯನ್ನು ಕೆಡವಿಬಿಟ್ಟನು. ನೆಬಾಟನ ಮಗನಾದ ಯಾರೊಬ್ಬಾಮನು ಈ ಯಜ್ಞವೇದಿಕೆಯನ್ನು ನಿರ್ಮಿಸಿದ್ದನು. ಇಸ್ರೇಲರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಯೋಷೀಯನು ಯಜ್ಞವೇದಿಕೆಯನ್ನು ಮತ್ತು ಉನ್ನತಸ್ಥಳವನ್ನು ಕೆಡವಿಬಿಟ್ಟನು. ಯೋಷೀಯನು ಯಜ್ಞವೇದಿಕೆಯ ಕಲ್ಲುಗಳನ್ನು ಪುಡಿಪುಡಿಮಾಡಿ ಧೂಳಿನಲ್ಲಿ ಬೆರಸಿದನು. ಅವನು ಅಶೇರಸ್ತಂಭವನ್ನು ಸುಟ್ಟುಹಾಕಿದನು.


ಅರಸನಾದ ಆಹಾಜನು ತನ್ನ ಜನರನ್ನು ಪಾಪಮಾಡಲು ಪ್ರೋತ್ಸಾಹಿಸಿದ್ದಕ್ಕಾಗಿ ಯೆಹೋವನು ಯೆಹೂದ ದೇಶಕ್ಕೆ ಕಷ್ಟವನ್ನು ಕೊಟ್ಟನು. ಆಹಾಜನು ದೇವರಿಗೆ ದ್ರೋಹಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು