2 ಯಾರೊಬ್ಬಾಮನು ತನ್ನ ಪತ್ನಿಗೆ, “ಶೀಲೋವಿಗೆ ಹೋಗು. ಅಲ್ಲಿಗೆ ಹೋಗಿ ಪ್ರವಾದಿಯಾದ ಅಹೀಯನನ್ನು ನೋಡು. ನಾನು ಇಸ್ರೇಲಿನ ರಾಜನಾಗುವೆನೆಂದು ತಿಳಿಸಿದ ಮನುಷ್ಯನೇ ಅಹೀಯನು. ನೀನು ನನ್ನ ಪತ್ನಿಯೆಂದು ಜನರಿಗೆ ತಿಳಿಯದ ರೀತಿಯಲ್ಲಿ ವಸ್ತ್ರಗಳನ್ನು ಧರಿಸಿಕೊ.
2 ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ, “ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷಹಾಕಿಕೊಂಡು ಶೀಲೋವಿಗೆ ಹೋಗು. ನಾನು ಈ ಜನರಿಗೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿಯಾದ ಅಹೀಯನು ಅಲ್ಲಿರುತ್ತಾನೆ.
2 ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ, “ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷಮಾರ್ಪಡಿಸಿಕೊಂಡು ಶಿಲೋವಿಗೆ ಹೋಗು. ನಾನು ಈ ಜನರಿಗೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿ ಅಹೀಯನು ಅಲ್ಲಿರುತ್ತಾನೆ.
2 ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ - ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷ ಮಾರ್ಪಡಿಸಿಕೊಂಡು ಶೀಲೋವಿಗೆ ಹೋಗು. ನಾನು ಈ ಜನರ ಮೇಲೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿಯಾದ ಅಹೀಯನು ಅಲ್ಲಿರುತ್ತಾನೆ.
2 “ನೀನು ಯಾರೊಬ್ಬಾಮನ ಪತ್ನಿ ಎಂದು ಯಾರೂ ತಿಳಿಯದ ಹಾಗೆ ನೀನೆದ್ದು, ವೇಷಹಾಕಿಕೊಂಡು ಶೀಲೋವಿಗೆ ಹೋಗು. ‘ಈ ಜನರ ಮೇಲೆ ಅರಸನಾಗಿರುವೆ,’ ಎಂದು ನನಗೆ ಹೇಳಿದ ಪ್ರವಾದಿ ಅಹೀಯನು ಅಲ್ಲಿದ್ದಾನೆ.
ಯಾರಿಗೂ ತನ್ನ ಗುರುತು ಸಿಕ್ಕದಂತೆ ಸೌಲನು ವೇಷವನ್ನು ಬದಲಾಯಿಸಿಕೊಂಡನು. ಸೌಲನು ತನ್ನ ಜನರಿಬ್ಬರೊಡನೆ ಅದೇ ರಾತ್ರಿಯಲ್ಲೇ ಆ ಬೇತಾಳಿಕಳನ್ನು ನೋಡಲು ಹೋದನು. ಸೌಲನು ಅವಳಿಗೆ, “ಬೇತಾಳದ ಮೂಲಕ ನನ್ನ ಭವಿಷ್ಯವನ್ನು ನನಗೆ ತೋರಿಸು, ನಾನು ಹೆಸರಿಸುವ ವ್ಯಕ್ತಿಯನ್ನು ಕರೆ” ಎಂದು ಕೇಳಿದನು.
ಯೆಹೋಷಾಫಾಟನಿಗೆ ಅಹಾಬನು, “ನಾನು ಯುದ್ಧರಂಗಕ್ಕೆ ಹೋಗುವ ಮೊದಲು ವೇಷ ಬದಲಾಯಿಸುತ್ತೇನೆ. ನೀನು ರಾಜವಸ್ತ್ರದಲ್ಲಿಯೇ ಇರು” ಎಂದು ಹೇಳಿ ತನ್ನ ರೂಪವನ್ನು ಬದಲಾಯಿಸಿದನು. ಇಬ್ಬರು ರಾಜರೂ ಯುದ್ಧರಂಗಕ್ಕಿಳಿದರು.
ಅಹಾಬನು ಯೆಹೋಷಾಫಾಟನಿಗೆ, “ನಾವು ಹೋರಾಟಕ್ಕೆ ಸಿದ್ಧತೆಗಳನ್ನು ಮಾಡೋಣ. ನೋಡುವುದಕ್ಕೆ ರಾಜನಲ್ಲವೆಂದು ತೋರುವಂತಹ ವಸ್ತ್ರಗಳನ್ನು ನಾನು ಧರಿಸಿಕೊಳ್ಳುತ್ತೇನೆ. ಆದರೆ ನೀನು ರಾಜನಂತೆ ತೋರುವ ನಿನ್ನ ವಿಶೇಷ ವಸ್ತ್ರಗಳನ್ನು ಧರಿಸಿಕೊ” ಎಂದನು. ಇಸ್ರೇಲಿನ ರಾಜನು, ತಾನು ರಾಜನಲ್ಲವೆಂದು ತೋರುವಂತಹ ವಸ್ತ್ರಗಳನ್ನು ಧರಿಸಿಕೊಂಡು ಹೋರಾಟವನ್ನು ಆರಂಭಿಸಿದನು.
ಇಸ್ರೇಲರೆಲ್ಲರು ಶೀಲೋವಿನಲ್ಲಿ ಒಟ್ಟಾಗಿ ಸೇರಿದರು. ಆ ಸ್ಥಳದಲ್ಲಿ ಅವರು ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಂಡಿದ್ದರು. ಅವರು ಆ ದೇಶದ ಎಲ್ಲ ಶತ್ರುಗಳನ್ನು ಸೋಲಿಸಿದ್ದರು.
ಪ್ರವಾದಿಯು ತನ್ನ ಕಣ್ಣಿನ ಮೇಲೆ ಬಟ್ಟೆಯನ್ನು ಕಟ್ಟಿಕೊಂಡನು. ತನ್ನನ್ನು ಯಾರೂ ಗುರುತಿಸಬಾರದೆಂದು ಅವನು ಹೀಗೆ ಕಟ್ಟಿಕೊಂಡನು. ಬಳಿಕ ಆ ಪ್ರವಾದಿಯು ಹೋಗಿ, ರಾಜನಿಗಾಗಿ ರಸ್ತೆಯಂಚಿನಲ್ಲಿ ಕಾಯುತ್ತಿದ್ದನು.