Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:21 - ಪರಿಶುದ್ದ ಬೈಬಲ್‌

21 ಆ ಕಾಲದಲ್ಲಿ ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ರಾಜನಾಗಿದ್ದನು. ಅವನು ರಾಜನಾದಾಗ ಅವನಿಗೆ ನಲವತ್ತೊಂದು ವರ್ಷ ವಯಸ್ಸಾಗಿತ್ತು. ರೆಹಬ್ಬಾಮನು ಜೆರುಸಲೇಮ್ ನಗರದಲ್ಲಿ ಹದಿನೇಳು ವರ್ಷ ಆಳಿದನು. ಈ ನಗರದಲ್ಲಿ ತಾನು ಸನ್ಮಾನಿಸಲ್ಪಡಬೇಕೆಂದು ಯೆಹೋವನು ಈ ನಗರವನ್ನು ಆರಿಸಿಕೊಂಡಿದ್ದನು. ಇಸ್ರೇಲಿನ ಎಲ್ಲಾ ನಗರಗಳಲ್ಲಿ ಈ ನಗರವನ್ನು ಆತನು ಆರಿಸಿಕೊಂಡಿದ್ದನು. ಅಮ್ಮೋನಿಯಳಾದ ನಯಮಾ ಎಂಬವಳು ರೆಹಬ್ಬಾಮನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ಅರಸನಾದನು. ಅವನು ಪಟ್ಟಕ್ಕೆ ಬಂದಾಗ ನಲ್ವತ್ತೊಂದು ವರ್ಷದವನಾಗಿದ್ದು, ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷಗಳ ಕಾಲ ಆಳ್ವಿಕೆ ಮಾಡಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸೊಲೊಮೋನನ ಮಗ ರೆಹಬ್ಬಾಮನು ಜುದೇಯದ ಅರಸನಾದನು. ಅವನು ಪಟ್ಟಕ್ಕೆ ಬಂದಾಗ ಅವನಿಗೆ ನಾಲ್ವತ್ತೊಂದು ವರ್ಷ ವಯಸ್ಸು. ಸರ್ವೆಶ್ವರ ತಮ್ಮ ಹೆಸರನ್ನು ನೆಲೆಗೊಳಿಸುವುದಕ್ಕಾಗಿ, ಇಸ್ರಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಜೆರುಸಲೇಮ್ ಪಟ್ಟಣದಲ್ಲಿ ಅವನು ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆ ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ಅರಸನಾದನು. ಅವನು ಪಟ್ಟಕ್ಕೆ ಬಂದಾಗ ನಾಲ್ವತ್ತೊಂದು ವರುಷದವನಾಗಿದ್ದು ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲ್ಯರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರುಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಸೊಲೊಮೋನನ ಮಗ ರೆಹಬ್ಬಾಮನು ಯೆಹೂದದಲ್ಲಿ ಆಳುತ್ತಾ ಇದ್ದನು. ರೆಹಬ್ಬಾಮನು ಆಳಲು ಆರಂಭಿಸಿದಾಗ, ನಲವತ್ತೊಂದು ವರ್ಷದವನಾಗಿದ್ದು, ಅಲ್ಲಿ ಯೆಹೋವ ದೇವರು ತಮ್ಮ ಹೆಸರಿಗೋಸ್ಕರ ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ಅವನ ತಾಯಿಯ ಹೆಸರು ನಯಮಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:21
22 ತಿಳಿವುಗಳ ಹೋಲಿಕೆ  

ರಾಜನಾದ ರೆಹಬ್ಬಾಮನು ತನ್ನ ರಾಜ್ಯವನ್ನು ಸ್ಥಿರಪಡಿಸಿಕೊಂಡು ಬಲಗೊಂಡನು. ಅವನು ಪಟ್ಟಕ್ಕೆ ಬಂದಾಗ ನಲವತ್ತೊಂದು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಹದಿನೇಳು ವರ್ಷ ಆಳಿದನು. ಯೆಹೋವನು ತಾನೇ ತನ್ನ ಹೆಸರನ್ನು ಸ್ಥಾಪಿಸುವದಕ್ಕೋಸ್ಕರ ಇಸ್ರೇಲಿನ ಎಲ್ಲಾ ಕುಲಗಳಲ್ಲಿ ಜೆರುಸಲೇಮನ್ನು ಆರಿಸಿಕೊಂಡಿದ್ದನು. ರೆಹಬ್ಬಾಮನ ತಾಯಿಯ ಹೆಸರು ನಯಮಾ. ಆಕೆ ಅಮ್ಮೋನ್ ದೇಶದವಳು.


ಸೊಲೊಮೋನನ ಮಗನಿಗೆ ಒಂದು ಕುಲವನ್ನು ಮಾತ್ರ ಕೊಡುತ್ತೇನೆ. ಜೆರುಸಲೇಮಿನ ನನ್ನ ಸನ್ನಿಧಿಯಲ್ಲಿ ಆಳಲು ನನ್ನ ಸೇವಕನಾದ ದಾವೀದನು ಯಾವಾಗಲೂ ತನ್ನ ಸಂತತಿಯವರಲ್ಲಿ ಒಬ್ಬನನ್ನು ಹೊಂದಿರಲೆಂದು ನಾನು ಇದನ್ನು ಮಾಡುತ್ತೇನೆ. ಜೆರುಸಲೇಮ್ ನಗರವನ್ನು ನಾನು ನನ್ನ ಸ್ವಂತದ್ದೆಂದು ಆರಿಸಿಕೊಂಡೆನು.


ರೆಹಬ್ಬಾಮನು ಸತ್ತುಹೋದನು. ಅವನನ್ನು ಅವನ ಪೂರ್ವಿಕನಾದ ದಾವೀದನಗರದಲ್ಲಿ ಸಮಾಧಿಮಾಡಿದರು. (ಅಮ್ಮೋನಿಯಾದ ನಯಮಾಳು ಅವನ ತಾಯಿ) ಅವನ ನಂತರ ಅವನ ಮಗ ಅಬೀಯಾಮನು ರಾಜನಾದನು.


ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.


ಆಗ ಕೆಲಸಕ್ಕೆ ಬಾರದ ದುಷ್ಟಜನರು ಯಾರೊಬ್ಬಾಮನ ಸ್ನೇಹಿತರಾಗಿ ಅವನನ್ನು ಹಿಂಬಾಲಿಸಿ ರೆಹಬ್ಬಾಮನಿಗೆ ವಿರುದ್ಧವಾಗಿ ದಂಗೆ ಎದ್ದರು. ಸೊಲೊಮೋನನ ಮಗನಾದ ರೆಹಬ್ಬಾಮನು ಆಗ ಸಣ್ಣ ಪ್ರಾಯದವನಾಗಿ ಅನುಭವವಿಲ್ಲದವನಾಗಿದ್ದನು. ಆದ್ದರಿಂದ ಯಾರೊಬ್ಬಾಮನನ್ನೂ ಅವನ ದುಷ್ಟ ಹಿಂಬಾಲಕರನ್ನೂ ತಡೆಯಲು ಅವನಿಗೆ ಆಗಲಿಲ್ಲ.


ಬಳಿಕ ಸೊಲೊಮೋನನು ಸತ್ತನು. ಅವನನ್ನು ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಅವನನ್ನು ಅವನ ತಂದೆಯಾದ ದಾವೀದ ನಗರದಲ್ಲಿ ಸಮಾಧಿಮಾಡಿದರು. ಸೊಲೊಮೋನನ ಮಗನಾದ ರೆಹಬ್ಬಾಮನು ಸೊಲೊಮೋನನ ಬಳಿಕ ರಾಜನಾದನು.


ಒಂದು ಕುಲವನ್ನು ಮಾತ್ರ ದಾವೀದನ ವಂಶದ ಅಧೀನದಲ್ಲಿ ಬಿಡುತ್ತೇನೆ. ಅವರು ಈ ಕುಲವನ್ನು ಉಳಿಸಿಕೊಳ್ಳಲು ನಾನು ಅವಕಾಶ ಮಾಡಿಕೊಡುತ್ತೇನೆ. ನನ್ನ ಸೇವಕನಾದ ದಾವೀದನಿಗಾಗಿ ಮತ್ತು ಜೆರುಸಲೇಮಿಗಾಗಿ ನಾನು ಇದನ್ನು ಮಾಡುತ್ತೇನೆ. ಇಸ್ರೇಲಿನ ಎಲ್ಲಾ ಕುಲಗಳಿಂದಲೂ ನಾನು ಜೆರುಸಲೇಮ್ ನಗರವನ್ನು ಆರಿಸಿಕೊಂಡಿದ್ದೇನೆ.


“ಕೆಲವು ಸಂದರ್ಭಗಳಲ್ಲಿ ತಮ್ಮ ಶತ್ರುಗಳ ವಿರುದ್ಧ ಹೋರಾಡುವಂತೆ ನಿನ್ನ ಜನರಿಗೆ ನೀನು ಆಜ್ಞಾಪಿಸುವೆ. ಆಗ ನಿನ್ನ ಜನರು, ನಿನ್ನಿಂದ ಆರಿಸಲ್ಪಟ್ಟ ಈ ನಗರದ ಕಡೆಗೆ ಮತ್ತು ನಾನು ನಿನ್ನ ಗೌರವಕ್ಕಾಗಿ ನಿರ್ಮಿಸಿದ ಈ ದೇವಾಲಯದ ಕಡೆಗೆ ಮುಖ ಮಾಡಿ ನಿನ್ನಲ್ಲಿ ಪ್ರಾರ್ಥಿಸುತ್ತಾರೆ,


‘ನಾನು ನನ್ನ ಜನರಾದ ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದೆನು. ಆದರೆ ನನ್ನನ್ನು ಘನಪಡಿಸಿಕೊಳ್ಳುವುದಕ್ಕಾಗಿ ಆಲಯವೊಂದನ್ನು ಕಟ್ಟಲು ಇಸ್ರೇಲಿನ ಕುಲಗಳಿಂದ ನಾನಿನ್ನೂ ಯಾವ ನಗರವನ್ನು ಆರಿಸಿಕೊಂಡಿರಲಿಲ್ಲ. ಇಸ್ರೇಲಿನ ಜನರನ್ನಾಳುವ ನಾಯಕನನ್ನು ನಾನಿನ್ನೂ ಆರಿಸಿಕೊಂಡಿರಲಿಲ್ಲ, ಆದರೆ ನಾನೀಗ ಜೆರುಸಲೇಮನ್ನು ನನಗೆ ಸನ್ಮಾನವನ್ನು ತರುವಂಥ ಸ್ಥಳವನ್ನಾಗಿ ಆರಿಸಿಕೊಂಡಿರುವೆ. ಇಸ್ರೇಲಿನ ನನ್ನ ಜನರನ್ನು ಆಳಲು ದಾವೀದನನ್ನು ನಾನು ಆರಿಸಿಕೊಂಡಿರುವೆ’ ಎಂದು ಹೇಳಿದ್ದನು.


“ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ಇಸ್ರೇಲರೊಂದಿಗೆ ಸೇರಿ ದೇವಾರಾಧನೆ ಮಾಡಕೂಡದು. ಅವರ ಸಂತತಿಯ ಹತ್ತನೆಯ ತಲೆಮಾರಿನವರೆಗೂ ಆರಾಧನೆ ಮಾಡಬಾರದು.


ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.


“ಒಂದು ವಿಶೇಷ ಯಜ್ಞವೇದಿಕೆಯನ್ನು ನನಗೋಸ್ಕರ ಮಣ್ಣಿನಿಂದ ಕಟ್ಟಿರಿ. ಈ ಯಜ್ಞವೇದಿಕೆಯ ಮೇಲೆ ಕುರಿದನಗಳನ್ನು ನನಗೆ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಸಮರ್ಪಿಸಿರಿ. ನಾನು ನಿಮಗೆ ಹೇಳುವ ಪ್ರತಿಯೊಂದು ಸ್ಥಳದಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಳ್ಳಲು ಹೀಗೆಯೇ ಮಾಡಿರಿ. ಆಗ ನಾನು ಬಂದು ನಿಮ್ಮನ್ನು ಆಶೀರ್ವದಿಸುವೆನು.


ಯಾರೊಬ್ಬಾಮನು ರಾಜನಾಗಿ ಇಪ್ಪತ್ತೆರಡು ವರ್ಷ ಆಳಿದನು. ನಂತರ ಅವನು ಸತ್ತುಹೋದನು. ಅವನನ್ನು ಪೂರ್ವಿಕರ ಬಳಿ ಸಮಾಧಿಮಾಡಿದರು. ಅವನ ಮಗನಾದ ನಾದಾಬನು ಅವನ ನಂತರ ಹೊಸ ರಾಜನಾದನು.


‘ಅಲ್ಲಿ ನಾನು ಸನ್ಮಾನಿಸಲ್ಪಡುವೆನು’ ಎಂದು ನೀನು ಬಹುಕಾಲದ ಹಿಂದೆ ಹೇಳಿರುವೆ. ಆದ್ದರಿಂದ ಈ ಆಲಯವನ್ನು ಹಗಲಿರುಳೂ ದೃಷ್ಟಿಸು. ನಾನು ಈ ಆಲಯದಲ್ಲಿ ನಿನಗೆ ಮಾಡುವ ಪ್ರಾರ್ಥನೆಯನ್ನು ದಯವಿಟ್ಟು ಕೇಳು.


ರಾಜನಾದ ಸೊಲೊಮೋನನು ಸ್ತ್ರೀಯರನ್ನು ಪ್ರೀತಿಸಿದನು! ಅವನು ಇಸ್ರೇಲರಲ್ಲದ ಅನೇಕ ಸ್ತ್ರೀಯರನ್ನು ಪ್ರೀತಿಸಿದನು. ಇವರಲ್ಲಿ ಫರೋಹನ ಮಗಳು, ಮೋವಾಬ್ಯ, ಅಮ್ಮೋನಿಯ, ಎದೋಮ್ಯ ಚೀದೋನ್ಯ ಮತ್ತು ಹಿತ್ತಿಯ ಸ್ತ್ರೀಯರು ಸೇರಿದ್ದರು.


ಆದರೆ ರೆಹಬ್ಬಾಮನು ಯೆಹೂದನಗರಗಳಲ್ಲಿ ವಾಸವಾಗಿದ್ದ ಇಸ್ರೇಲರನ್ನು ಆಳಿದನು.


ಯೆಹೋಷಾಫಾಟನು ರಾಜನಾದಾಗ ಅವನಿಗೆ ಮೂವತ್ತೈದು ವರ್ಷ ವಯಸ್ಸಾಗಿತ್ತು. ಯೆಹೋಷಾಫಾಟನು ಜೆರುಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಯೆಹೋಷಾಫಾಟನ ತಾಯಿಯು ಆಜೂಬಳೆಂಬ ಹೆಸರಿನವಳು. ಆಜೂಬಳು ಶಿಲ್ಹಿಯ ಮಗಳು.


ರೆಹಬ್ಬಾಮನು ಬಲಾಢ್ಯನಾದ ರಾಜನಾಗಿ ತನ್ನ ರಾಜ್ಯವನ್ನು ಬಲಗೊಳಿಸಿದ ನಂತರ ಅವನೂ ಯೆಹೂದದ ಜನರೂ ದೇವರಾದ ಯೆಹೋವನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು