1 ಅರಸುಗಳು 14:23 - ಪರಿಶುದ್ದ ಬೈಬಲ್23 ಈ ಜನರು ಎತ್ತರವಾದ ಸ್ಥಳಗಳಲ್ಲಿ ಕಲ್ಲಿನ ಸ್ಮಾರಕಗಳನ್ನು, ಪವಿತ್ರ ಸ್ತಂಭಗಳನ್ನು ನಿರ್ಮಿಸಿದರು. ಅವರು ಅವುಗಳನ್ನು ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೂ ಪ್ರತಿಯೊಂದು ಹಸಿರುಮರದ ಕೆಳಗಡೆಯೂ ನಿರ್ಮಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ತಮ್ಮ ಪೂರ್ವಿಕರಂತೆಯೇ ಅವರೂ ತಮಗೋಸ್ಕರ ಪೂಜಾ ಸ್ಥಳಗಳನ್ನು ನಿರ್ಮಿಸಿಕೊಂಡರು. ಪ್ರತಿಯೊಂದು ದಿಣ್ಣೆಗಳ ಮೇಲೆ ಹಾಗೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಕಲ್ಲಿನ ಕಂಬಗಳನ್ನೂ ಮತ್ತು ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಪಿತೃಗಳಂತೆಯೇ ಅವರೂ ತಮಗಾಗಿ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು. ಪ್ರತಿಯೊಂದು ದಿಣ್ಣೆಯ ಮೇಲೆ ಹಾಗು ಚೆನ್ನಾಗಿ ಬೆಳೆದಿದ್ದ ಪ್ರತಿಯೊಂದು ಮರದ ಕೆಳಗೆ, ಕಲ್ಲಿನ ಕಂಬಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಪಿತೃಗಳಂತೆಯೇ ಅವರೂ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು. ಪ್ರತಿಯೊಂದು ದಿನ್ನೆಯ ಮೇಲೆಯೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆಯೂ ಕಲ್ಲಿನ ಕಂಬಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವರು ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ, ಉನ್ನತ ಸ್ಥಳಗಳನ್ನೂ ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ, ಹಸುರಾದ ಪ್ರತಿ ಗಿಡದ ಕೆಳಗೂ ತಮಗಾಗಿ ಮಾಡಿಕೊಂಡರು. ಅಧ್ಯಾಯವನ್ನು ನೋಡಿ |
ನಂತರ ಯೆಹೋವನು ಇಸ್ರೇಲರನ್ನು ಹೊಡೆಯುತ್ತಾನೆ. ಇಸ್ರೇಲಿನ ಜನರು ಬಹಳ ಭಯಗೊಳ್ಳುವರು. ಅವರು ನೀರಿನಲ್ಲಿ ಎತ್ತರವಾಗಿ ಬೆಳೆದಿರುವ ಹುಲ್ಲಿನಂತೆ ನಡುಗುವರು. ಯೆಹೋವನು ಇಸ್ರೇಲರನ್ನು ಈ ಶ್ರೇಷ್ಠವಾದ ದೇಶದಿಂದ ಚದರಿಸಿಬಿಡುವನು; ಆತನು ಈ ದೇಶವನ್ನು ಅವರ ಪೂರ್ವಿಕರಿಗೆ ಕೊಟ್ಟಿದ್ದನು. ಆತನು ಇಸ್ರೇಲರನ್ನು ಯೂಫ್ರೇಟೀಸ್ ನದಿಯ ಮತ್ತೊಂದು ಕಡೆಗೆ ಚದರಿಸಿಬಿಡುತ್ತಾನೆ. ಯೆಹೋವನು ಅವರ ಮೇಲೆ ಕೋಪಗೊಂಡಿರುವುದೇ ಅದಕ್ಕೆ ಕಾರಣ. ಅವರು ಅಶೇರ್ ವಿಗ್ರಹವನ್ನು ಆರಾಧಿಸಲು ವಿಶೇಷ ಸ್ತಂಭಗಳನ್ನು ಮಾಡಿಕೊಂಡಿದ್ದರಿಂದ ಆತನು ಅವರ ಮೇಲೆ ಕೋಪಗೊಂಡನು.
ಆಗಲೇ ನಾನು ಯೆಹೋವನೆಂದು ನೀವು ಅರಿಯುವಿರಿ. ಅವರ ದೇಶದಲ್ಲಿರುವವರ ಹೆಣಗಳು ಅವರ ಹೊಲಸು ವಿಗ್ರಹಗಳ ಸುತ್ತಲೂ ಯಜ್ಞವೇದಿಗಳ ಸುತ್ತಲೂ ಎತ್ತರವಾದ ಸ್ಥಳಗಳ ಮೇಲೆಯೂ ಬೆಟ್ಟಗಳಲ್ಲಿಯೂ ಮತ್ತು ಪ್ರತಿಯೊಂದು ಹಸಿರು ಮರದ ಕೆಳಗೂ ಬೀಳುವಾಗ ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು. ಅವರು ಈ ಎಲ್ಲಾ ಸ್ಥಳಗಳಲ್ಲಿ ತಮ್ಮ ಎಲ್ಲಾ ಹೊಲಸು ವಿಗ್ರಹಗಳಿಗೆ ಪರಿಮಳಭರಿತವಾದ ಯಜ್ಞಗಳನ್ನು ಅರ್ಪಿಸಿದರು.
ಸೊಲೊಮೋನನು ತನಗೆ ಯೆಹೋವನ ಮೇಲಿದ್ದ ಪ್ರೀತಿಯನ್ನು ತೋರ್ಪಡಿಸಿದನು. ಅವನ ತಂದೆಯಾದ ದಾವೀದನು ಅವನಿಗೆ ಮಾಡಬೇಕೆಂದು ಹೇಳಿದ್ದ ಎಲ್ಲ ಕಾರ್ಯಗಳನ್ನು ಮಾಡುವುದರ ಮೂಲಕ ವಿಧೇಯತೆಯನ್ನು ತೋರ್ಪಡಿಸಿದನು. ಆದರೆ ಸೊಲೊಮೋನನು ತನಗೆ ದಾವೀದನು ಹೇಳದೆ ಇದ್ದ ಕೆಲವು ಕಾರ್ಯಗಳನ್ನೂ ಮಾಡಿದನು. ಸೊಲೊಮೋನನು ಎತ್ತರವಾದ ಸ್ಥಳಗಳನ್ನು ಯಜ್ಞವನ್ನರ್ಪಿಸಲು ಮತ್ತು ಧೂಪಹಾಕಲು ಉಪಯೋಗಿಸುತ್ತಿದ್ದನು.
ನಿಮ್ಮ ಜನರು ವಾಸಮಾಡುವಲ್ಲೆಲ್ಲಾ ಕೆಟ್ಟಸಂಗತಿಗಳು ನಡೆಯುವವು; ಪಟ್ಟಣಗಳು ಕಲ್ಲಿನ ರಾಶಿಗಳಾಗುವವು; ಪೂಜಾಸ್ಥಳಗಳು ನಾಶಮಾಡಲ್ಪಡುವವು. ನಿಮ್ಮ ಯಜ್ಞವೇದಿಕೆಗಳು ಕೆಡವಲ್ಪಟ್ಟು ಹಾಳಾಗಿಹೋಗುವವು; ನಿಮ್ಮ ವಿಗ್ರಹಗಳು ಮುರಿಯಲ್ಪಟ್ಟು ನಾಶವಾಗುವವು. ಜನರು ಅವುಗಳನ್ನು ಇನ್ನು ಎಂದಿಗೂ ಪೂಜಿಸರು. ನಿಮ್ಮ ಧೂಪವೇದಿಕೆಗಳು ಕತ್ತರಿಸಲ್ಪಡುವವು. ನೀವು ಮಾಡಿಕೊಂಡ ವಿಗ್ರಹಗಳು ಅಳಿದುಹೋಗುವವು.