Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:24 - ಪರಿಶುದ್ದ ಬೈಬಲ್‌

24 ಇತರ ದೇವರುಗಳ ಸೇವೆಗಾಗಿ ತಮ್ಮ ದೇಹಗಳನ್ನು ಲೈಂಗಿಕ ಸಂಬಂಧಕ್ಕೆ ಮಾರಾಟ ಮಾಡುವ ಗಂಡಸರೂ ಅಲ್ಲಿದ್ದರು. ಯೆಹೂದದ ಜನರು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದರು. ಆ ದೇಶದಲ್ಲಿ ಇವರಿಗಿಂತ ಮುಂಚೆ ನೆಲಸಿದ್ದ ಜನರು ಇಂತಹ ದುಷ್ಕೃತ್ಯಗಳನ್ನು ಮಾಡುತ್ತಿದ್ದರು. ದೇವರು ಆ ಜನರಿಂದ ಈ ದೇಶವನ್ನು ತೆಗೆದುಕೊಂಡು ಇಸ್ರೇಲರಿಗೆ ಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇದಲ್ಲದೆ ಅವರ ದೇಶದಲ್ಲಿ ವೇಶ್ಯಾವೃತ್ತಿಯನ್ನು ಅನುಸರಿಸುತ್ತಿರುವ ದೇವದಾಸ, ದೇವದಾಸಿಯರು ಇದ್ದರು. ಯೆಹೋವನು ಅವರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳಲ್ಲಿದ್ದ ದುರಾಚಾರಗಳನ್ನೆಲ್ಲಾ ಅವರೂ ಆಚರಿಸುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇದಲ್ಲದೆ, ಅವರ ನಾಡಿನಲ್ಲಿ ವೇಶ್ಯಾವೃತ್ತಿಯನ್ನು ಅನುಸರಿಸುತ್ತಿದ್ದ ಗಂಡಸರೂ ಹೆಂಗಸರೂ ಇದ್ದರು. ಅವರ ನಾಡಿನಿಂದ ಸರ್ವೇಶ್ವರ ಹೊರಡಿಸಿಬಿಟ್ಟಿದ್ದ ಅನ್ಯಜನಾಂಗಗಳ ದುರಾಚಾರಗಳನ್ನೆಲ್ಲಾ ಅವರೂ ನಡೆಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇದಲ್ಲದೆ ಅವರ ದೇಶದಲ್ಲಿ ವೇಶ್ಯಾವೃತ್ತಿಯನ್ನನುಸರಿಸುತ್ತಿರುವ ದೇವದಾಸ ದೇವದಾಸಿಯರು ಇದ್ದರು. ಯೆಹೋವನು ಅವರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳಲ್ಲಿದ್ದ ದುರಾಚಾರಗಳನ್ನೆಲ್ಲಾ ಅವರೂ ನಡಿಸುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇದಲ್ಲದೆ ಪೂಜಾಸ್ಥಳಗಳಲ್ಲಿ ಪುರುಷಗಾಮಿಗಳಿದ್ದರು. ಅವರು ಇಸ್ರಾಯೇಲರ ಮುಂದೆ ಯೆಹೋವ ದೇವರು ಹೊರಡಿಸಿದ ಜನಾಂಗಗಳ ಸಕಲ ಅಸಹ್ಯ ಕಾರ್ಯಗಳನ್ನು ಮಾಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:24
11 ತಿಳಿವುಗಳ ಹೋಲಿಕೆ  

“ಇಸ್ರೇಲರ ಗಂಡಸಾಗಲಿ ಹೆಂಗಸಾಗಲಿ ದೇವಸ್ಥಾನದ ವೇಶ್ಯೆಯಾಗಬಾರದು.


ಅಧರ್ಮಿಗಳು ದೇವರ ರಾಜ್ಯವನ್ನು ಪಡೆಯುವುದಿಲ್ಲವೆಂದು ನಿಮಗೆ ಖಂಡಿತವಾಗಿ ತಿಳಿದಿದೆ. ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿ. ದೇವರ ರಾಜ್ಯಕ್ಕೆ ಸೇರದ ಜನರು ಯಾರ್ಯಾರೆಂದರೆ: ಲೈಂಗಿಕ ಪಾಪ ಮಾಡುವವರು, ವಿಗ್ರಹಗಳನ್ನು ಪೂಜಿಸುವವರು, ವ್ಯಭಿಚಾರ ಮಾಡುವವರು, ಸಲಿಂಗಕಾಮಿಗಳು, ಕದಿಯುವವರು, ಸ್ವಾರ್ಥಿಗಳು, ಕುಡುಕರು, ಬೈಯುವವರು ಮತ್ತು ಮೋಸಗಾರರು.


ನಂತರ ರಾಜನಾದ ಯೋಷೀಯನು ದೇವಾಲಯದಲ್ಲಿದ್ದ ದೇವದಾಸ ದೇವದಾಸಿಯರ ಮನೆಗಳನ್ನು ಕೆಡವಿಹಾಕಿಸಿದನು. ಆ ಮನೆಗಳಲ್ಲಿ ಸುಳ್ಳುದೇವತೆಯಾದ ಅಶೇರಳಿಗೋಸ್ಕರ ಚಿಕ್ಕ ಗುಡಾರಗಳನ್ನು ನೇಯುತ್ತಿದ್ದರು.


ಆ ಕಾಲದಲ್ಲಿ, ಇತರ ದೇವರುಗಳ ಸೇವೆಗೋಸ್ಕರ ತಮ್ಮ ದೇಹಗಳನ್ನು ಲೈಂಗಿಕವಾಗಿ ಮಾರಾಟ ಮಾಡುತ್ತಿದ್ದ ಜನರು ಅಲ್ಲಿದ್ದರು. ಆ ಜನರು ದೇಶವನ್ನು ಬಿಟ್ಟುಹೋಗುವಂತೆ ಅವನು ಬಲವಂತ ಮಾಡಿದನು. ಆಸನು ತನ್ನ ಪೂರ್ವಿಕರು ನಿರ್ಮಿಸಿದ ವಿಗ್ರಹಗಳನ್ನು ನಿರ್ಮೂಲಮಾಡಿದನು.


ಲೈಂಗಿಕ ಸಂಬಂಧಕ್ಕಾಗಿ ತಮ್ಮ ದೇಹಗಳನ್ನು ಮಾರಾಟ ಮಾಡುತ್ತಿದ್ದ ಗಂಡಸರನ್ನು ಮತ್ತು ಹೆಂಗಸರನ್ನು, ಯೆಹೋಷಾಫಾಟನು ದೇಶದಿಂದ ಹೊರಗಟ್ಟಿದನು. ಅವನ ತಂದೆಯಾದ ಆಸನು ರಾಜನಾಗಿದ್ದ ಕಾಲದಲ್ಲಿ ಆ ಜನರು ಪೂಜಾಸ್ಥಳಗಳಲ್ಲಿ ಸೇವೆಯನ್ನು ಮಾಡುತ್ತಿದ್ದರು.


“ನಿನ್ನ ಮನೆಗೆ ಬಂದ ಆ ಇಬ್ಬರು ಪುರುಷರು ಎಲ್ಲಿದ್ದಾರೆ? ಅವರನ್ನು ಹೊರಗೆ ಕಳುಹಿಸು. ನಾವು ಅವರನ್ನು ಸಂಭೋಗಿಸಬೇಕು” ಎಂದು ಕೂಗಿ ಹೇಳಿದರು.


ಲೇವಿಯು ಮತ್ತು ಅವನ ಸಂಗಡಿಗರು ಸಂತೋಷದಿಂದ ಅಲ್ಲಿದ್ದಾಗ ಆ ನಗರದ ಕೆಲವು ಜನರು ಆ ಮನೆಗೆ ಮುತ್ತಿಗೆ ಹಾಕಿದರು. ಅವರು ಮಹಾ ನೀಚಜನರಾಗಿದ್ದರು. ಅವರು ಬಾಗಿಲು ತಟ್ಟತೊಡಗಿದರು. ಆ ಮನೆಯ ಯಜಮಾನನಾದ ವೃದ್ಧನಿಗೆ, “ನಿನ್ನ ಮನೆಗೆ ಬಂದ ಆ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ. ನಾವು ಅವನೊಂದಿಗೆ ಸಂಭೋಗ ಮಾಡಬೇಕು”ಎಂದು ಕೂಗಾಡಿದರು.


“ಆದ್ದರಿಂದ ನೀವು ನನ್ನ ಕಟ್ಟಳೆಗಳಿಗೂ ನಿಯಮಗಳಿಗೂ ಆಜ್ಞಾವಿಧಿಗಳಿಗೂ ವಿಧೇಯರಾಗಬೇಕು. ನೀವು ಆ ಭಯಂಕರ ಪಾಪಗಳಲ್ಲಿ ಯಾವುದನ್ನೂ ಮಾಡಬಾರದು. ಆ ವಿಧಿಗಳು ಇಸ್ರೇಲರಿಗಾಗಿ ಮತ್ತು ನಿಮ್ಮ ಮಧ್ಯದಲ್ಲಿ ವಾಸಿಸುವ ಅನ್ಯಜನರಿಗಾಗಿ ಇರುತ್ತವೆ.


ಅನ್ಯಜನರು ಆ ಭಯಂಕರ ಪಾಪಗಳನ್ನು ಮಾಡಿದ್ದಾರೆ. ಆದರೆ ನೀವು ನನ್ನ ಕಟ್ಟಳೆಗಳಿಗೆ ವಿಧೇಯರಾಗಬೇಕು. ನೀವು ಆ ಭಯಂಕರ ಪಾಪಗಳಲ್ಲಿ ಯಾವುದನ್ನೂ ಮಾಡಬಾರದು. ಆ ಭಯಂಕರ ಪಾಪಗಳಿಂದ ನಿಮ್ಮನ್ನು ಹೊಲೆ ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು.”


ಸೂಳೆತನದಿಂದ ಗಳಿಸಿದ ಹಣವನ್ನು ನಿಮ್ಮ ದೇವರಾದ ಯೆಹೋವನ ವಿಶೇಷ ವಾಸಸ್ಥಾನಕ್ಕೆ ತೆಗೆದುಕೊಂಡು ಬರಬಾರದು. ಒಬ್ಬನು ತಾನು ಹೊತ್ತುಕೊಂಡ ಹರಕೆಯನ್ನು ಆ ಹಣದಿಂದ ಪೂರೈಸಕೂಡದು. ಯಾಕೆಂದರೆ ಲೈಂಗಿಕ ಪಾಪದಲ್ಲಿ ತಮ್ಮ ದೇಹಗಳನ್ನು ಮಾರುವವರನ್ನು ನಿಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ; ಲೈಂಗಿಕ ಪಾಪಗಳ ಆದಾಯದಿಂದ ಬಂದ ಹಣದಿಂದ ಖರೀದಿ ಮಾಡಿದ ಕಾಣಿಕೆಗಳನ್ನು ಆತನು ದ್ವೇಷಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು