1 ಅರಸುಗಳು 14:27 - ಪರಿಶುದ್ದ ಬೈಬಲ್27 ಆದ್ದರಿಂದ ರಾಜನಾದ ರೆಹಬ್ಬಾಮನು ಅವುಗಳ ಸ್ಥಾನದಲ್ಲಿಡಲು ಅನೇಕ ಗುರಾಣಿಗಳನ್ನು ಮಾಡಿಸಿದನು. ಆದರೆ ಈ ಗುರಾಣಿಗಳನ್ನು ಮಾಡಿಸಿದ್ದು ಹಿತ್ತಾಳೆಯಲ್ಲೇ ಹೊರತು ಬಂಗಾರದಿಂದಲ್ಲ. ಅರಮನೆಯ ಬಾಗಿಲಿನ ಕಾವಲುಗಾರರಿಗೆ ಈ ಗುರಾಣಿಗಳನ್ನು ಅವನು ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅರಸ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದಕಾರಣ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ಪ್ರವೇಶದ್ವಾರದ ಕರ್ತವ್ಯದಲ್ಲಿದ್ದ ಕಾವಲುಗಾರರ ಅಧಿಪತಿಗಳ ಕೈಯಲ್ಲಿ ಒಪ್ಪಿಸಿದನು. ಅಧ್ಯಾಯವನ್ನು ನೋಡಿ |
ಏಳನೆ ವರ್ಷದಲ್ಲಿ, ಪ್ರಧಾನ ಯಾಜಕನಾದ ಯೆಹೋಯಾದಾವನು ಕೆರೇತ್ಯರ ಸೇನಾಧಿಪತಿಗಳನ್ನು ಮತ್ತು ಕಾವಲುಗಾರರನ್ನು ಕರೆಸಿಕೊಂಡನು. ಯೆಹೋಯಾದಾವನು ಅವರನ್ನೆಲ್ಲ ಯೆಹೋವನ ಆಲಯದಲ್ಲಿ ಒಟ್ಟಾಗಿ ಸೇರಿಸಿದನು. ನಂತರ ಯೆಹೋಯಾದಾವನು ಅವರೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಯೆಹೋಯಾದಾವನು ಆಲಯದಲ್ಲಿ ಅವರು ವಾಗ್ದಾನ ಮಾಡುವಂತೆ ಬಲತ್ಕಾರಗೊಳಿಸಿದನು. ನಂತರ ಅವನು ಅವರಿಗೆ ರಾಜನ ಮಗನನ್ನು (ಯೆಹೋವಾಷನನ್ನು) ತೋರಿಸಿದನು.