Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:28 - ಪರಿಶುದ್ದ ಬೈಬಲ್‌

28 ರಾಜನು ಯೆಹೋವನ ಆಲಯಕ್ಕೆ ಹೋಗುವಾಗ ಪ್ರತಿಸಲವೂ ಮೈಗಾವಲಿನವರು ಅವನ ಜೊತೆಯಲ್ಲಿ ಹೋಗುತ್ತಿದ್ದರು. ಅವರು ಗುರಾಣಿಗಳನ್ನು ತೆಗೆದುಕೊಂಡು ಹೋಗುತ್ತಿದ್ದರು. ನಂತರ ಅವರು ರಕ್ಷಣಾಕೊಠಡಿಯ ಗೋಡೆಯ ಮೇಲೆ ಈ ಗುರಾಣಿಗಳನ್ನು ಇಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅರಸನು ಯೆಹೋವನ ಆಲಯಕ್ಕೆ ಹೋಗುವಾಗಲೆಲ್ಲಾ ಅವರು ಅವುಗಳನ್ನು ಹಿಡಿದುಕೊಳ್ಳುವರು. ಅಲ್ಲಿಂದ ಅರಸನು ಹಿಂತಿರುಗಿ ಹೋದ ಮೇಲೆ ಅವುಗಳನ್ನು ತಮ್ಮ ಕೋಣೆಯಲ್ಲಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅರಸನು ಸರ್ವೇಶ್ವರನ ಆಲಯಕ್ಕೆ ಹೋಗುವಾಗಲೆಲ್ಲಾ ಅವರು ಆ ಗುರಾಣಿಗಳನ್ನು ಹಿಡಿದುಕೊಳ್ಳುತ್ತಿದ್ದರು. ಅಲ್ಲಿಂದ ಹಿಂದಕ್ಕೆ ಬಂದ ಮೇಲೆ ಅವುಗಳನ್ನು ತಮ್ಮ ಕೋಣೆಯಲ್ಲಿಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅರಸನು ಯೆಹೋವನ ಆಲಯಕ್ಕೆ ಹೋಗುವಾಗೆಲ್ಲಾ ಅವರು ಅವುಗಳನ್ನು ಹಿಡಿದುಕೊಳ್ಳುವರು; ಅಲ್ಲಿಂದ ತಿರಿಗಿ ಬಂದ ಮೇಲೆ ಅವುಗಳನ್ನು ತಮ್ಮ ಕೋಣೆಯಲ್ಲಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅರಸನು ಯೆಹೋವ ದೇವರ ಆಲಯಕ್ಕೆ ಹೋಗುವಾಗಲೆಲ್ಲಾ, ಕಾವಲುಗಾರರು ಅವುಗಳನ್ನು ಎತ್ತಿಕೊಂಡು ಬರುತ್ತಿದ್ದರು. ಅಲ್ಲಿಂದ ಹಿಂದಕ್ಕೆ ಬಂದ ನಂತರ ಕಾವಲಿನ ಚಾವಡಿಗೆ ತರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:28
4 ತಿಳಿವುಗಳ ಹೋಲಿಕೆ  

ರಾಜನು ದೇವಾಲಯವನ್ನು ಪ್ರವೇಶಿಸುವಾಗ, ಕಾವಲುಗಾರರು ಆ ಗುರಾಣಿಗಳನ್ನು ಹೊರತರುವರು. ತರುವಾಯ ಅವುಗಳನ್ನು ಮೊದಲಿದ್ದ ಸ್ಥಳದಲ್ಲಿಯೇ ಇಡುವರು.


ಆದರೆ ಊರೀಯನು ಮನೆಗೆ ಹೋಗದೆ ಅರಮನೆಯ ಹೊರಬಾಗಿಲಿನಲ್ಲಿ ರಾಜನ ಸೇವಕರೊಂದಿಗೆ ಮಲಗಿದನು.


ಆದ್ದರಿಂದ ರಾಜನಾದ ರೆಹಬ್ಬಾಮನು ಅವುಗಳ ಸ್ಥಾನದಲ್ಲಿಡಲು ಅನೇಕ ಗುರಾಣಿಗಳನ್ನು ಮಾಡಿಸಿದನು. ಆದರೆ ಈ ಗುರಾಣಿಗಳನ್ನು ಮಾಡಿಸಿದ್ದು ಹಿತ್ತಾಳೆಯಲ್ಲೇ ಹೊರತು ಬಂಗಾರದಿಂದಲ್ಲ. ಅರಮನೆಯ ಬಾಗಿಲಿನ ಕಾವಲುಗಾರರಿಗೆ ಈ ಗುರಾಣಿಗಳನ್ನು ಅವನು ಕೊಟ್ಟನು.


ರಾಜನಾದ ರೆಹಬ್ಬಾಮನು ಮಾಡಿದ ಎಲ್ಲಾ ಕಾರ್ಯಗಳನ್ನು “ಯೆಹೂದದ ರಾಜರುಗಳ ಚರಿತ್ರೆ” ಎಂಬ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು