Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:29 - ಪರಿಶುದ್ದ ಬೈಬಲ್‌

29 ರಾಜನಾದ ರೆಹಬ್ಬಾಮನು ಮಾಡಿದ ಎಲ್ಲಾ ಕಾರ್ಯಗಳನ್ನು “ಯೆಹೂದದ ರಾಜರುಗಳ ಚರಿತ್ರೆ” ಎಂಬ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ರೆಹಬ್ಬಾಮನ ಉಳಿದ ಚರಿತ್ರೆಯು ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ರೆಹಬ್ಬಾಮನ ಉಳಿದ ಚರಿತ್ರೆ ಹಾಗು ಅವನ ಎಲ್ಲಾ ಕೃತ್ಯಗಳು ಯೆಹೂದ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ರೆಹಬ್ಬಾಮನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಯೆಹೂದರಾಜಕಾಲ ವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ರೆಹಬ್ಬಾಮನ ಉಳಿದ ಕಾರ್ಯಗಳೂ, ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:29
22 ತಿಳಿವುಗಳ ಹೋಲಿಕೆ  

ಯೆಹೋಷಾಫಾಟನು ಬಹಳ ಧೈರ್ಯಶಾಲಿ. ಅವನು ಅನೇಕ ಯುದ್ಧಗಳಲ್ಲಿ ಹೋರಾಡಿದ್ದನು. ಅವನು ಮಾಡಿದ ಕಾರ್ಯಗಳನ್ನೆಲ್ಲಾ “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆಯಲಾಗಿದೆ.


ಆಸನು ಮಾಡಿದ ಮಹಾಕಾರ್ಯಗಳನ್ನೂ ಅವನು ಕಟ್ಟಿಸಿದ ನಗರಗಳನ್ನೂ ಮತ್ತು ಅವನನ್ನು ಕುರಿತ ಇತರ ಸಂಗತಿಗಳನ್ನೂ “ಯೆಹೂದದ ರಾಜರುಗಳ ಚರಿತ್ರೆ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ. ಆಸನಿಗೆ ವಯಸ್ಸಾದಾಗ, ಅವನ ಕಾಲುಗಳಿಗೆ ರೋಗವಾಗಿತ್ತು.


ರಾಜನಾದ ಯಾರೊಬ್ಬಾಮನು ಇತರ ಅನೇಕ ಕಾರ್ಯಗಳನ್ನು ಮಾಡಿದನು. ಅವನು ಯುದ್ಧಗಳಲ್ಲಿ ಹೋರಾಡಿದನು ಮತ್ತು ಜನರನ್ನು ಆಳಿದನು. “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅವನು ಮಾಡಿದ ಕಾರ್ಯಗಳೆಲ್ಲವನ್ನು ಬರೆಯಲಾಗಿದೆ.


ಸೊಲೊಮೋನನು ತಾನು ಆಳುತ್ತಿದ್ದಾಗ ಅನೇಕ ಮಹಾಕಾರ್ಯಗಳನ್ನೂ ಜ್ಞಾನದ ಕಾರ್ಯಗಳನ್ನೂ ಮಾಡಿದನು. ಈ ಕಾರ್ಯಗಳನ್ನೆಲ್ಲ ಸೊಲೊಮೋನನ ಚರಿತ್ರೆ ಎಂಬ ಪುಸ್ತಕದಲ್ಲಿ ಬರೆಯಲಾಗಿದೆ.


ರಾಜನು ಯೆಹೋವನ ಆಲಯಕ್ಕೆ ಹೋಗುವಾಗ ಪ್ರತಿಸಲವೂ ಮೈಗಾವಲಿನವರು ಅವನ ಜೊತೆಯಲ್ಲಿ ಹೋಗುತ್ತಿದ್ದರು. ಅವರು ಗುರಾಣಿಗಳನ್ನು ತೆಗೆದುಕೊಂಡು ಹೋಗುತ್ತಿದ್ದರು. ನಂತರ ಅವರು ರಕ್ಷಣಾಕೊಠಡಿಯ ಗೋಡೆಯ ಮೇಲೆ ಈ ಗುರಾಣಿಗಳನ್ನು ಇಡುತ್ತಿದ್ದರು.


ರೆಹಬ್ಬಾಮನ ಮತ್ತು ಯಾರೊಬ್ಬಾಮನ ನಡುವೆ ಯುದ್ಧವು ನಡೆಯುತ್ತಲೇ ಇರುತ್ತಿತ್ತು.


ಅಬೀಯಾಮನು ಮಾಡಿದ ಇತರ ಎಲ್ಲಾ ಕಾರ್ಯಗಳ ಬಗ್ಗೆ “ಯೆಹೂದದ ರಾಜರುಗಳ ಚರಿತ್ರೆಯಲ್ಲಿ” ಬರೆದಿದೆ. ಅಬೀಯಾಮನು ರಾಜನಾಗಿದ್ದ ಎಲ್ಲಾ ಕಾಲದಲ್ಲೂ, ಯಾರೊಬ್ಬಾಮನ ಮತ್ತು ಅಬೀಯಾಮನ ನಡುವೆ ಯುದ್ಧ ನಡೆಯುತ್ತಲೇ ಇತ್ತು.


ಲೈಂಗಿಕ ಸಂಬಂಧಕ್ಕಾಗಿ ತಮ್ಮ ದೇಹಗಳನ್ನು ಮಾರಾಟ ಮಾಡುತ್ತಿದ್ದ ಗಂಡಸರನ್ನು ಮತ್ತು ಹೆಂಗಸರನ್ನು, ಯೆಹೋಷಾಫಾಟನು ದೇಶದಿಂದ ಹೊರಗಟ್ಟಿದನು. ಅವನ ತಂದೆಯಾದ ಆಸನು ರಾಜನಾಗಿದ್ದ ಕಾಲದಲ್ಲಿ ಆ ಜನರು ಪೂಜಾಸ್ಥಳಗಳಲ್ಲಿ ಸೇವೆಯನ್ನು ಮಾಡುತ್ತಿದ್ದರು.


ಯೆಹೂದದ ರಾಜರುಗಳು ಎಂಬ ಇತಿಹಾಸ ಪುಸ್ತಕದಲ್ಲಿ ಯೆಹೋರಾಮನು ಮಾಡಿದ ಇತರ ಎಲ್ಲಾ ಕಾರ್ಯಗಳನ್ನು ಬರೆಯಲಾಗಿದೆ.


ಯೆಹೋವಾಷನ ಅಧಿಕಾರಿಗಳು ಅವನ ವಿರುದ್ಧವಾಗಿ ಸಂಚುಮಾಡಿ ಅವನನ್ನು ಸಿಲ್ಲಾಕ್ಕೆ ಹೋಗುವ ರಸ್ತೆಯಲ್ಲಿದ್ದ ಮಿಲ್ಲೋ ಮನೆಯಲ್ಲಿ ಕೊಂದುಹಾಕಿದರು.


“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅಮಚ್ಯನು ಮಾಡಿದ ಇತರ ಮಹಾಕಾರ್ಯಗಳನ್ನೆಲ್ಲ ಬರೆಯಲಾಗಿದೆ.


“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅಜರ್ಯನು ಮಾಡಿದ ಇತರ ಮಹಾಕಾರ್ಯಗಳನ್ನು ಕುರಿತು ಬರೆಯಲಾಗಿದೆ.


“ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಶಲ್ಲೂಮನು ಮಾಡಿದ ಕಾರ್ಯಗಳನ್ನೂ ಜೆಕರ್ಯನ ವಿರುದ್ಧವಾಗಿ ಅವನು ಯೋಜಿಸಿದ ಉಪಾಯಗಳನ್ನೂ ಬರೆಯಲಾಗಿದೆ.


“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೋತಾಮನು ಮಾಡಿದ ಇತರ ಮಹಾಕಾರ್ಯಗಳನ್ನು ಬರೆಯಲಾಗಿದೆ.


“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅಹಾಜನು ಮಾಡಿದ ಇತರ ಮಹಾಕಾರ್ಯಗಳನ್ನು ಬರೆಯಲಾಗಿದೆ.


“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಹಿಜ್ಕೀಯನು ಮಾಡಿದ ಇತರ ಎಲ್ಲಾ ಮಹಾಕಾರ್ಯಗಳನ್ನೂ ಅವನು ನಗರಕ್ಕೆ ಕೆರೆಯಿಂದ ಕೊಳವೆಗಳ ಮೂಲಕ ನೀರಿನ ವ್ಯವಸ್ಥೆಮಾಡಿದ್ದನ್ನೂ ಬರೆಯಲಾಗಿದೆ.


“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಮನಸ್ಸೆಯು ಮಾಡಿದ ಎಲ್ಲಾ ಕಾರ್ಯಗಳನ್ನೂ ಅವನು ಮಾಡಿದ ಪಾಪಕೃತ್ಯಗಳನ್ನೂ ಬರೆಯಲಾಗಿದೆ.


“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಆಮೋನನು ಮಾಡಿದ ಇತರ ಕಾರ್ಯಗಳನ್ನು ಕುರಿತು ಬರೆಯಲಾಗಿದೆ.


“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೋಷೀಯನು ಮಾಡಿದ ಇತರ ಕಾರ್ಯಗಳೆಲ್ಲವನ್ನು ಕುರಿತು ಬರೆಯಲಾಗಿದೆ.


“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೆಹೋಯಾಕೀಮನು ಮಾಡಿದ ಇತರ ಕಾರ್ಯಗಳನ್ನು ಬರೆಯಲಾಗಿದೆ.


ಅಮಚ್ಯನ ಬೇರೆ ಕಾರ್ಯಗಳು ಅಂದರೆ ಆರಂಭದಿಂದ ಕೊನೆಯವರೆಗಿನ ಕಾರ್ಯಗಳನ್ನು ಯೆಹೂದದ ಮತ್ತು ಇಸ್ರೇಲಿನ ರಾಜರ ಗ್ರಂಥದಲ್ಲಿ ಬರೆಯಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು