Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:5 - ಪರಿಶುದ್ದ ಬೈಬಲ್‌

5 ಆದರೆ ಯೆಹೋವನು ಅವನಿಗೆ, “ಯಾರೊಬ್ಬಾಮನ ಪತ್ನಿಯು ಅಸ್ವಸ್ಥನಾಗಿರುವ ತನ್ನ ಮಗನ ಬಗ್ಗೆ ಕೇಳಲು ನಿನ್ನ ಬಳಿಗೆ ಬರುತ್ತಿದ್ದಾಳೆ” ಎಂದು ಹೇಳಿದ್ದನು. ಅಹೀಯನು ಏನು ಹೇಳಬೇಕೆಂಬುದನ್ನು ಯೆಹೋವನು ಅವನಿಗೆ ತಿಳಿಸಿದ್ದನು. ಯಾರೊಬ್ಬಾಮನ ಪತ್ನಿಯು ಅಹೀಯನ ಮನೆಗೆ ಬಂದಳು. ತಾನಾರೆಂಬುದು ಜನರಿಗೆ ತಿಳಿಯಬಾರದೆಂದು ಅವಳು ಪ್ರಯತ್ನಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೆ ಯೆಹೋವನು ಅವನಿಗೆ, “ಯಾರೊಬ್ಬಾಮನ ಹೆಂಡತಿಯು ಅಸ್ವಸ್ಥನಾದ ತನ್ನ ಮಗನ ವಿಷಯದಲ್ಲಿ ದೈವೋಕ್ತಿಯನ್ನು ಕೇಳುವುದಕ್ಕೆ ತನ್ನನ್ನು ಅನ್ಯಳ ಹಾಗೆ ವೇಷಮರೆಸಿಕೊಂಡು ಬರುತ್ತಾಳೆಂದೂ, ಆಕೆಗೆ ಇಂಥಿಂಥ ಉತ್ತರ ಕೊಡಬೇಕು” ಎಂದು ತಿಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೆ ಸರ್ವೇಶ್ವರ ಅವನಿಗೆ, ಯಾರೊಬ್ಬಾಮನ ಹೆಂಡತಿ ಅಸ್ವಸ್ಥನಾದ ತನ್ನ ಮಗನ ವಿಷಯದಲ್ಲಿ ದೈವೋತ್ತರವನ್ನು ಕೇಳುವುದಕ್ಕೆ ತನ್ನನ್ನು ಅನ್ಯಳೆಂದು ತೋರ್ಪಡಿಸಿಕೊಂಡು ಬರುತ್ತಾಳೆ; ಆಕೆಗೆ ಇಂಥಿಂಥ ಉತ್ತರಕೊಡು, ಎಂದು ತಿಳಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದರೆ ಯೆಹೋವನು ಅವನಿಗೆ - ಯಾರೊಬ್ಬಾಮನ ಹೆಂಡತಿಯು ಅಸ್ವಸ್ಥನಾದ ತನ್ನ ಮಗನ ವಿಷಯದಲ್ಲಿ ದೈವೋತ್ತರವನ್ನು ಕೇಳುವದಕ್ಕೆ ತನ್ನನ್ನು ಅನ್ಯಳೆಂದು ತೋರ್ಪಡಿಸಿಕೊಂಡು ಬರುತ್ತಾಳೆಂದೂ ಆಕೆಗೆ ಇಂಥಿಂಥ ಉತ್ತರ ಕೊಡಬೇಕೆಂದೂ ತಿಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಯೆಹೋವ ದೇವರು ಅಹೀಯನಿಗೆ, “ಯಾರೊಬ್ಬಾಮನ ಪತ್ನಿಯು ತನ್ನ ಮಗನಿಗೋಸ್ಕರ ನಿನ್ನಿಂದ ದೈವೋತ್ತರವನ್ನು ಕೇಳುವುದಕ್ಕೆ ಬರುತ್ತಾಳೆ. ಏಕೆಂದರೆ ಅವಳ ಮಗನು ರೋಗದಲ್ಲಿದ್ದಾನೆ. ನೀನು ಅವಳಿಗೆ ಹೀಗೀಗೆ ಹೇಳು, ಅವಳು ಒಳಗೆ ಬರುವಾಗ ಮತ್ತೊಬ್ಬಳ ಹಾಗೆ ವೇಷಹಾಕಿಕೊಂಡು ಬರುವಳು,” ಎಂದು ಹೇಳಿಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:5
8 ತಿಳಿವುಗಳ ಹೋಲಿಕೆ  

ನನ್ನ ಒಡೆಯನಾದ ಯೆಹೋವನು ಒಂದು ಕಾರ್ಯವನ್ನು ಮಾಡಲು ನಿರ್ಧರಿಸಬಹುದು. ಆದರೆ ಆತನು ಹಾಗೆ ಮಾಡುವ ಮುಂಚಿತವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ಮುಂತಿಳಿಸುವನು.


ಯೆಹೋವನೇ ವಿರೋಧವಾಗಿದ್ದರೆ, ಜಯಪ್ರಧವಾಗಬಲ್ಲ ಯೋಜನೆಯನ್ನು ಮಾಡುವಂಥ ಜ್ಞಾನ ಯಾರಿಗೂ ಇಲ್ಲ.


ಆದರೆ ಶೂನೇಮಿನ ಈ ಸ್ತ್ರೀಯು ದೇವಮನುಷ್ಯನಿದ್ದ ಬೆಟ್ಟದವರೆಗೆ ಹೋದಳು. ಅವಳು ನೆಲಕ್ಕೆ ಬಾಗಿ, ಎಲೀಷನ ಪಾದಗಳನ್ನು ಹಿಡಿದುಕೊಂಡಳು. ಶೂನೇಮಿನ ಆ ಸ್ತ್ರೀಯನ್ನು ತಳ್ಳಿಬಿಡಲು ಗೇಹಜಿಯು ಹತ್ತಿರಕ್ಕೆ ಬಂದನು. ಆದರೆ ದೇವಮನುಷ್ಯನು ಗೇಹಜಿಗೆ, “ಅವಳನ್ನು ತಡೆಯಬೇಡ! ಅವಳು ಬಹಳ ತಳಮಳಗೊಂಡಿದ್ದಾಳೆ. ಯೆಹೋವನು ನನಗೆ ಆಕೆಯ ದುಃಖವನ್ನು ಪ್ರಕಟಿಸಲಿಲ್ಲ; ನನಗೆ ಮರೆಮಾಡಿದ್ದಾನೆ” ಎಂದು ಹೇಳಿದನು.


ಆದ್ದರಿಂದ ಯೋವಾಬನು ಒಬ್ಬ ಬುದ್ಧಿವಂತ ಸ್ತ್ರೀಯನ್ನು ತೆಕೋವದಿಂದ ಕರೆತರಲು ಸಂದೇಶಕರನ್ನು ಅಲ್ಲಿಗೆ ಕಳುಹಿಸಿದನು. ಈ ಬುದ್ಧಿವಂತಳಾದ ಸ್ತ್ರೀಗೆ ಯೋವಾಬನು, “ದಯವಿಟ್ಟು ನಿನ್ನ ಚರ್ಮಕ್ಕಾಗಲಿ ತಲೆಕೂದಲಿಗಾಗಲಿ ಎಣ್ಣೆಯನ್ನು ಹಚ್ಚಿಕೊಳ್ಳಬೇಡ; ಚೆನ್ನಾಗಿರುವ ವಸ್ತ್ರಗಳನ್ನು ತೊಟ್ಟುಕೊಳ್ಳದೆ ಶೋಕಸೂಚಕ ವಸ್ತ್ರಗಳನ್ನು ಧರಿಸಿಕೋ. ಸತ್ತವನಿಗಾಗಿ ಅನೇಕ ದಿನಗಳಿಂದ ರೋಧಿಸುತ್ತಿರುವ ಸ್ತ್ರೀಯಂತೆ ನಟಿಸು.


ಅವಳು ಬಾಗಿಲಿನ ಬಳಿಗೆ ಬಂದಾಗಲೇ ಅಹೀಯನಿಗೆ ಆಕೆಯ ಪಾದಗಳ ಸಪ್ಪಳವು ಕೇಳಿಸಿತು. ಆಗ ಅಹೀಯನು, “ಯಾರೊಬ್ಬಾಮನ ಪತ್ನಿಯೇ, ಒಳಗೆ ಬಾ. ನೀನು ಯಾರೆಂಬುದು ಜನರಿಗೆ ತಿಳಿಯದಂತೆ ಮಾಡಲು ಯಾಕೆ ಪ್ರಯತ್ನಿಸುತ್ತಿರುವೆ? ನಾನು ನಿನಗೆ ಅಶುಭದ ಸುದ್ದಿಯನ್ನು ತಿಳಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು