1 ಅರಸುಗಳು 14:6 - ಪರಿಶುದ್ದ ಬೈಬಲ್6 ಅವಳು ಬಾಗಿಲಿನ ಬಳಿಗೆ ಬಂದಾಗಲೇ ಅಹೀಯನಿಗೆ ಆಕೆಯ ಪಾದಗಳ ಸಪ್ಪಳವು ಕೇಳಿಸಿತು. ಆಗ ಅಹೀಯನು, “ಯಾರೊಬ್ಬಾಮನ ಪತ್ನಿಯೇ, ಒಳಗೆ ಬಾ. ನೀನು ಯಾರೆಂಬುದು ಜನರಿಗೆ ತಿಳಿಯದಂತೆ ಮಾಡಲು ಯಾಕೆ ಪ್ರಯತ್ನಿಸುತ್ತಿರುವೆ? ನಾನು ನಿನಗೆ ಅಶುಭದ ಸುದ್ದಿಯನ್ನು ತಿಳಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಕೆಯು ಅಹೀಯನ ಮನೆಯನ್ನು ಪ್ರವೇಶಿಸುತ್ತಿರುವಾಗಲೇ ಅಹೀಯನು ಆಕೆಯ ಕಾಲು ಸಪ್ಪಳವನ್ನು ಕೇಳಿ, “ಯಾರೊಬ್ಬಾಮನ ಹೆಂಡತಿಯೇ ಬಾ. ಯಾಕೆ ನಿನ್ನನ್ನು ಅನ್ಯಳೆಂದು ತೋರ್ಪಡಿಸಿಕೊಳ್ಳುತ್ತೀ? ನಿನಗೆ ಕಠಿಣವಾದ ಉತ್ತರ ಕೊಡಬೇಕೆಂದು ನನಗೆ ಅಪ್ಪಣೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಕೆ ಅಹೀಯನ ಮನೆಯನ್ನು ಪ್ರವೇಶಿಸುವಾಗಲೇ ಅಹೀಯನು ಆಕೆಯ ಕಾಲುಸಪ್ಪಳವನ್ನು ಕೇಳಿ, “ಯಾರೊಬ್ಬಾಮನ ಹೆಂಡತಿಯೇ, ಬಾ; ಏಕೆ ನೀನು ಅನ್ಯಳೆಂದು ನಟಿಸುತ್ತಿರುವೆ? ನಿನಗೆ ಕಠಿಣವಾದ ಉತ್ತರವನ್ನು ಕೊಡಬೇಕೆಂದು ನನಗೆ ಅಪ್ಪಣೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಕೆಯು ಅಹೀಯನ ಮನೆಯನ್ನು ಪ್ರವೇಶಿಸುವಾಗಲೇ ಅಹೀಯನು ಆಕೆಯ ಕಾಲುಸಪ್ಪಳವನ್ನು ಕೇಳಿ - ಯಾರೊಬ್ಬಾಮನ ಹೆಂಡತಿಯೇ, ಬಾ; ಯಾಕೆ ನಿನ್ನನ್ನು ಅನ್ಯಳೆಂದು ತೋರ್ಪಡಿಸಿಕೊಳ್ಳುತ್ತೀ? ನಿನಗೆ ಕಠಿಣವಾದ ಉತ್ತರವನ್ನು ಕೊಡಬೇಕೆಂದು ನನಗೆ ಅಪ್ಪಣೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅನಂತರ ಅವಳು ಬಾಗಿಲಲ್ಲಿ ಪ್ರವೇಶಿಸುವಾಗ, ಅಹೀಯನು ಅವಳ ಹೆಜ್ಜೆಗಳ ಶಬ್ದ ಕೇಳುತ್ತಲೇ ಅವನು, “ಯಾರೊಬ್ಬಾಮನ ಪತ್ನಿಯೇ ಒಳಗೆ ಬಾ, ನೀನು ಮತ್ತೊಬ್ಬಳಂತೆ ತೋರಿಸಿಕೊಳ್ಳುವುದು ಏಕೆ? ನಾನು ಕಠಿಣವಾದವುಗಳನ್ನು ತಿಳಿಸಲು ನನಗೆ ಅಪ್ಪಣೆಯಾಗಿದೆ. ಅಧ್ಯಾಯವನ್ನು ನೋಡಿ |
ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.