1 ಅರಸುಗಳು 14:8 - ಪರಿಶುದ್ದ ಬೈಬಲ್8 ದಾವೀದನ ಕುಲವು ಇಸ್ರೇಲ್ ರಾಜ್ಯವನ್ನು ಆಳುತ್ತಿತ್ತು. ಆದರೆ ನಾನು ಅವರಿಂದ ರಾಜ್ಯವನ್ನು ತೆಗೆದುಕೊಂಡು, ನಿನಗೆ ಅದನ್ನು ಕೊಟ್ಟೆ. ಆದರೆ ನೀನು ನನ್ನ ಸೇವಕನಾದ ದಾವೀದನಂತಲ್ಲ. ಅವನು ನನ್ನ ಆಜ್ಞೆಗಳಿಗೆ ಯಾವಾಗಲೂ ವಿಧೇಯನಾಗಿದ್ದನು. ಅವನು ಪೂರ್ಣಮನಸ್ಸಿನಿಂದ ನನ್ನನ್ನು ಅನುಸರಿಸುತ್ತಿದ್ದನು. ನಾನು ಒಪ್ಪಿಕೊಳ್ಳುವ ಸಂಗತಿಗಳನ್ನು ಮಾತ್ರ ಅವನು ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ರಾಜ್ಯವನ್ನು ದಾವೀದನ ಕುಟುಂಬದವರಿಂದ ಕಿತ್ತುಕೊಂಡು ನಿನಗೆ ಕೊಟ್ಟೆನು. ಆದರೂ ನೀನು ನನ್ನ ಆಜ್ಞೆಗಳನ್ನು ಕೈಕೊಂಡು ಪೂರ್ಣ ಮನಸ್ಸಿನಿಂದ ನನ್ನನ್ನು ಹಿಂಬಾಲಿಸಿ ನನ್ನನ್ನು ಮೆಚ್ಚಿಸಿದಂಥ ನನ್ನ ಸೇವಕನಾದ ದಾವೀದನಂತೆ ನಡೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ರಾಜ್ಯವನ್ನು ದಾವೀದನ ಕುಟುಂಬದವರಿಂದ ಕಿತ್ತು ನಿನಗೆ ಕೊಟ್ಟೆ. ಆದರೂ ನೀನು ನನ್ನ ದಾಸ ದಾವೀದನಂತೆ ಆಜ್ಞೆಗಳನ್ನು ಕೈಗೊಂಡು, ಪೂರ್ಣಮನಸ್ಸಿನಿಂದ ನನ್ನನ್ನು ಮೆಚ್ಚಿಸಲಿಲ್ಲ; ನನ್ನನ್ನು ಹಿಂಬಾಲಿಸಿ ನಡೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ರಾಜ್ಯವನ್ನು ದಾವೀದನ ಕುಟುಂಬದವರಿಂದ ಕಿತ್ತುಕೊಂಡು ನಿನಗೆ ಕೊಟ್ಟೆನು. ಆದರೂ ನೀನು ನನ್ನ ಆಜ್ಞೆಗಳನ್ನು ಕೈಕೊಂಡು ಪೂರ್ಣಮನಸ್ಸಿನಿಂದ ನನ್ನನ್ನು ಹಿಂಬಾಲಿಸಿ ಮೆಚ್ಚಿಸಿದಂಥ ನನ್ನ ಸೇವಕನಾದ ದಾವೀದನಂತೆ ನಡೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದಾವೀದನ ಮನೆಯಿಂದ ರಾಜ್ಯವನ್ನು ವಿಭಾಗಿಸಿ ನಿನಗೆ ಕೊಟ್ಟೆನು. ಆದರೆ ನನ್ನ ಆಜ್ಞೆಗಳನ್ನು ಕೈಗೊಂಡು, ನನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿ, ತನ್ನ ಸಂಪೂರ್ಣ ಹೃದಯದಿಂದ ನನ್ನನ್ನು ಹಿಂಬಾಲಿಸಿದ ನನ್ನ ಸೇವಕನಾದ ದಾವೀದನ ಹಾಗೆ ನೀನು ಇರಲಿಲ್ಲ. ಅಧ್ಯಾಯವನ್ನು ನೋಡಿ |
ಸೊಲೊಮೋನನು ತನಗೆ ಯೆಹೋವನ ಮೇಲಿದ್ದ ಪ್ರೀತಿಯನ್ನು ತೋರ್ಪಡಿಸಿದನು. ಅವನ ತಂದೆಯಾದ ದಾವೀದನು ಅವನಿಗೆ ಮಾಡಬೇಕೆಂದು ಹೇಳಿದ್ದ ಎಲ್ಲ ಕಾರ್ಯಗಳನ್ನು ಮಾಡುವುದರ ಮೂಲಕ ವಿಧೇಯತೆಯನ್ನು ತೋರ್ಪಡಿಸಿದನು. ಆದರೆ ಸೊಲೊಮೋನನು ತನಗೆ ದಾವೀದನು ಹೇಳದೆ ಇದ್ದ ಕೆಲವು ಕಾರ್ಯಗಳನ್ನೂ ಮಾಡಿದನು. ಸೊಲೊಮೋನನು ಎತ್ತರವಾದ ಸ್ಥಳಗಳನ್ನು ಯಜ್ಞವನ್ನರ್ಪಿಸಲು ಮತ್ತು ಧೂಪಹಾಕಲು ಉಪಯೋಗಿಸುತ್ತಿದ್ದನು.