Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:13 - ಪರಿಶುದ್ದ ಬೈಬಲ್‌

13 ಆಸನು ತನ್ನ ಅಜ್ಜಿ ಮಾಕಳನ್ನು ರಾಣಿಯ ಪಟ್ಟದಿಂದ ಕೆಳಗಿಳಿಸಿದನು. ಮಾಕಳು ಅಶೇರ ದೇವತೆಯ ಒಂದು ಭೀಕರ ಮೂರ್ತಿಯನ್ನು ಮಾಡಿಸಿದ್ದಳು. ಅವನು ಅದನ್ನು ಕಿದ್ರೋನ್ ಕಣಿವೆಯಲ್ಲಿ ಸುಟ್ಟುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನ ತಾಯಿಯಾದ ಮಾಕಳೂ ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ, ಆ ಮೂರ್ತಿಯನ್ನು ಕಡಿದು, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇವನ ತಾಯಿ ಮಾಕಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ ಆಸನು ಆಕೆಯನ್ನು ‘ರಾಜಮಾತೆ’ ಎಂಬ ಪದವಿಯಿಂದ ತೆಗೆದುಹಾಕಿ ಆ ಮೂರ್ತಿಯನ್ನು ಕಡಿದು ಕಿದ್ರೋನ್ ಹಳ್ಳದ ಹತ್ತಿರ ಸುಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇವನ ತಾಯಿಯಾದ ಮಾಕಳು ಅಶೇರದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ ಆ ಮೂರ್ತಿಯನ್ನು ಕಡಿದು ಕಿದ್ರೋನ್‍ಹಳ್ಳದ ಹತ್ತಿರ ಸುಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ, ಆಸನು ತನ್ನ ಅಜ್ಜಿ ಮಾಕ ಎಂಬವಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ, ಅವಳನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಆ ಮೂರ್ತಿಯನ್ನು ಕಡಿದುಹಾಕಿ ಕಿದ್ರೋನ್ ಹಳ್ಳದ ಹತ್ತಿರ ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:13
25 ತಿಳಿವುಗಳ ಹೋಲಿಕೆ  

ಬಳಿಕ ಮೋಶೆಯು ಆ ಬಸವನ ಮೂರ್ತಿಯನ್ನು ಬೆಂಕಿಯಲ್ಲಿ ಕರಗಿಸಿ ಅದರ ಚಿನ್ನವನ್ನು ಧೂಳಿನಂತೆ ಅರೆದು ನೀರಿಗೆ ಹಾಕಿ ಆ ನೀರನ್ನು ಇಸ್ರೇಲರಿಗೆ ಕುಡಿಸಿದನು.


ಈ ಯೆಹೂದ್ಯರ ವರ್ತನೆಯನ್ನು ನಾನು ಗಮನಿಸಿದೆನು. ಅವರು ಸುವಾರ್ತೆಯ ಸತ್ಯವನ್ನು ಅನುಸರಿಸದೆ ಇರುವುದನ್ನು ಕಂಡು ಅಲ್ಲಿದ್ದ ಯೆಹೂದ್ಯರೆಲ್ಲರಿಗೂ ಕೇಳಿಸುವಂತೆ ನಾನು ಪೇತ್ರನಿಗೆ, “ನೀನು ಯೆಹೂದ್ಯನಾಗಿರುವೆ. ಆದರೆ ನೀನು ಯೆಹೂದ್ಯನಂತೆ ಜೀವಿಸುತ್ತಿಲ್ಲ. ನೀನು ಯೆಹೂದ್ಯನಲ್ಲದವನಂತೆ ಜೀವಿಸುತ್ತಿರುವೆ. ಹೀಗಿರಲು ನೀನು ಯೆಹೂದ್ಯರಲ್ಲದವರಿಗೆ ಯೆಹೂದ್ಯರಂತೆ ಜೀವಿಸಬೇಕೆಂದು ಒತ್ತಾಯಮಾಡುವುದೇಕೆ?” ಎಂದು ಕೇಳಿದೆನು.


ಹೀಗಿರಲಾಗಿ, ಲೋಕವು ಜನರ ವಿಷಯವಾಗಿ ಯೋಚಿಸುವಂತೆ ಇಂದಿನಿಂದ ನಾವು ಯಾರ ಬಗ್ಗೆಯೂ ಯೋಚಿಸುವುದಿಲ್ಲ. ಲೋಕವು ಯೋಚಿಸುವಂತೆ ಹಿಂದಿನ ಕಾಲದಲ್ಲಿ ನಾವು ಕ್ರಿಸ್ತನ ಬಗ್ಗೆ ಯೋಚಿಸಿಕೊಂಡಿದ್ದೆವು. ಆದರೆ ಈಗ ನಾವು ಆ ರೀತಿಯಲ್ಲಿ ಯೋಚಿಸುವುದಿಲ್ಲ.


ಯೇಸು ಪ್ರಾರ್ಥಿಸಿದ ಮೇಲೆ ತನ್ನ ಶಿಷ್ಯರೊಂದಿಗೆ ಹೊರಟನು. ಅವರು ಕಿದ್ರೋನ್ ಕಣಿವೆಯನ್ನು ದಾಟಿಹೋದರು. ಅದರ ಮತ್ತೊಂದು ಕಡೆಯಲ್ಲಿ ಆಲಿವ್ ಮರಗಳ ತೋಟವಿತ್ತು. ಯೇಸು ಮತ್ತು ಆತನ ಶಿಷ್ಯರು ಅಲ್ಲಿಗೆ ಹೋದರು.


“ಯಾರಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆ ಅಥವಾ ತಾಯಿಯನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ. ಯಾವನಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಇಲ್ಲವೆ ಮಗಳನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ.


ಯಾವನಾದರೂ ಪ್ರವಾದಿಸುವದನ್ನು ಮಂದುವರಿಸಿದರೆ ಅವನು ಶಿಕ್ಷೆಗೆ ಗುರಿಯಾಗುವನು. ‘ನೀನು ಯೆಹೋವನ ಹೆಸರಿನಲ್ಲಿ ಸುಳ್ಳನ್ನು ಹೇಳಿರುವೆ. ಆದ್ದರಿಂದ ನೀನು ಸಾಯಲೇಬೇಕು’ ಎಂದು ಅವನ ಸ್ವಂತ ತಂದೆತಾಯಿಗಳು ಅವನಿಗೆ ಹೇಳುವರು. ಅವನ ಸ್ವಂತ ತಂದೆ ತಾಯಿಗಳು ಅವನು ಸುಳ್ಳು ಪ್ರವಾದನೆ ಹೇಳಿದ್ದಕ್ಕೆ ಅವನನ್ನು ಖಡ್ಗದಿಂದ ಕೊಲ್ಲಿಸುವರು.


ಜನರು ಬಾಳ್ ದೇವರ ವಿಗ್ರಹಗಳನ್ನೂ ಯಜ್ಞವೇದಿಕೆಗಳನ್ನೂ ಯೋಷೀಯನ ಮುಂದೆಯೇ ಕೆಡವಿಹಾಕಿದರು. ಆಮೇಲೆ ಯೋಷೀಯನು ಉನ್ನತಸ್ಥಳದಲ್ಲಿದ್ದ ಧೂಪವೇದಿಕೆಯನ್ನು ಕೆಡವಿ ಹಾಕಿ, ವಿಗ್ರಹಗಳನ್ನೆಲ್ಲಾ ಒಡೆದು ಪುಡಿಮಾಡಿ ಬಾಳ್ ದೇವರ ಪೂಜಾರಿಗಳ ಸಮಾಧಿಯ ಮೇಲೆ ಚೆಲ್ಲಿದನು.


ಯೋಷೀಯನು ಅಶೇರಸ್ತಂಭವನ್ನು ದೇವಾಲಯದಿಂದ ತೆಗೆದುಹಾಕಿದನು. ಅವನು ಅಶೇರಸ್ತಂಭವನ್ನು ನಗರದ ಹೊರವಲಯದ ಕಿದ್ರೋನ್ ಕಣಿವೆಗೆ ತೆಗೆದುಕೊಂಡು ಹೋಗಿ ಅದನ್ನು ಅಲ್ಲಿ ಸುಟ್ಟುಹಾಕಿದನು. ನಂತರ ಅವನು ಅದನ್ನು ಪುಡಿಪುಡಿ ಮಾಡಿಸಿ ಧೂಳಿನಲ್ಲಿ ಬೆರಸಿ ಸಾಮಾನ್ಯ ಜನರ ಸ್ಮಶಾನದಲ್ಲಿ ಆ ಧೂಳನ್ನು ಚೆಲ್ಲಿದನು.


ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು “ನೆಹುಷ್ಟಾನ್” ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.


ಆಸನು ಜೆರುಸಲೇಮಿನಲ್ಲಿ ನಲವತ್ತೊಂದು ವರ್ಷ ಆಳಿದನು. ಅವನ ಅಜ್ಜಿಯ ಹೆಸರು ಮಾಕಾ. ಈಕೆಯು ಅಬೀಷಾಲೋಮನ ಮಗಳು.


ಅಬೀಯಾಮನು ಮೂರು ವರ್ಷ ಜೆರುಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಮಾಕಾ. ಅವಳು ಅಬೀಷಾಲೋಮನ ಮಗಳು.


ಜನರೆಲ್ಲರೂ ಜೋರಾಗಿ ಅಳುತ್ತಿದ್ದರು. ರಾಜನಾದ ದಾವೀದನು ಕಿದ್ರೋನ್ ಹಳ್ಳವನ್ನು ದಾಟಿಹೋದನು. ನಂತರ ಜನರೆಲ್ಲರೂ ಅರಣ್ಯಕ್ಕೆ ಹೋದರು.


ಬಳಿಕ ಇಸ್ರೇಲರು ಇಡೀ ನಗರವನ್ನು ಸುಟ್ಟು ಹಾಕಿದರು. ಅವರು ಬೆಳ್ಳಿ, ಬಂಗಾರ, ಕಂಚು ಮತ್ತು ಕಬ್ಬಿಣಗಳಿಂದ ಮಾಡಿದ ವಸ್ತುಗಳನ್ನು ಬಿಟ್ಟು ನಗರದಲ್ಲಿನ ಉಳಿದೆಲ್ಲವನ್ನು ಸುಟ್ಟು ಹಾಕಿದರು. ಅವರು ಆ ವಸ್ತುಗಳನ್ನು ಯೆಹೋವನಿಗಾಗಿ ಉಳಿಸಿದರು.


ಯೆಹೋವನೇ, ಅವರು ನಿನಗಾಗಿ ಚಿಂತಿಸಿದರು; ಸ್ವಂತ ಸಂಸಾರಕ್ಕಿಂತಲೂ ಹೆಚ್ಚಾಗಿ ನಿನ್ನನ್ನು ಪ್ರೀತಿಸಿದರು; ಅವರು ನಿನಗಾಗಿ ತಮ್ಮ ತಂದೆತಾಯಿಗಳನ್ನು ನಿರ್ಲಕ್ಷಿಸಿದರು; ಒಡಹುಟ್ಟಿದವರನ್ನೂ ಗುರುತಿಸಲಿಲ್ಲ. ಅವರು ತಮ್ಮ ಮಕ್ಕಳಿಗೆ ಪ್ರಾಮುಖ್ಯತೆಯನ್ನು ಕೊಡಲಿಲ್ಲ; ಅವರು ನಿನ್ನ ಕಟ್ಟಳೆಗಳನ್ನು ಅನುಸರಿಸಿ ಒಡಂಬಡಿಕೆಯನ್ನು ಕಾಪಾಡಿದರು.


ನೀವು ಮಾಡಿದ ಬಂಗಾರದ ಬಸವನನ್ನು ತೆಗೆದುಕೊಂಡು ಚೂರುಚೂರು ಮಾಡಿ, ಬೆಂಕಿಯಲ್ಲಿ ಸುಟ್ಟುಬಿಟ್ಟೆನು. ಮತ್ತೆ ಅದನ್ನು ಒಡೆದು ಧೂಳನ್ನಾಗಿ ಮಾಡಿ ಆ ಧೂಳನ್ನು ಬೆಟ್ಟದಿಂದ ಹರಿಯುತ್ತಿದ್ದ ನದಿಯಲ್ಲಿ ಬಿಸಾಡಿಬಿಟ್ಟೆನು.


“ಆ ಜನಾಂಗಗಳ ಯಜ್ಞವೇದಿಕೆಗಳನ್ನೆಲ್ಲಾ ನೀವು ಕೆಡವಿಹಾಕಿ ನೆಲಸಮಮಾಡಬೇಕು. ಅವರ ಸ್ಮಾರಕ ಕಲ್ಲುಗಳನ್ನು ಒಡೆದು ಚೂರುಚೂರು ಮಾಡಬೇಕು. ಅವರ ಅಶೇರಸ್ತಂಭಗಳನ್ನು ಕತ್ತರಿಸಿಹಾಕಬೇಕು; ಅವುಗಳ ಪ್ರತಿಮೆಗಳನ್ನು ಸುಟ್ಟುಹಾಕಬೇಕು.


ನಾನು ನಿಮ್ಮ ಉನ್ನತವಾದ ಪೂಜಾಸ್ಥಳಗಳನ್ನು ನಾಶಮಾಡುವೆ. ನಾನು ನಿಮ್ಮ ಧೂಪವೇದಿಕೆಗಳನ್ನು ಕಡಿದುಹಾಕುವೆನು. ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು. ನೀವು ನನಗೆ ಬಹಳ ಅಸಹ್ಯರಾಗಿರುವಿರಿ.


ಬತ್ಷೆಬೆಳು ರಾಜನಾದ ಸೊಲೊಮೋನನೊಂದಿಗೆ ಮಾತನಾಡಲು ಹೋದಳು. ಸೊಲೊಮೋನನು ಆಕೆಯನ್ನು ಕಂಡು ಎದ್ದುನಿಂತು ಅವಳಿಗೆ ಬಾಗಿ ನಮಸ್ಕರಿಸಿ, ಸಿಂಹಾಸನದ ಮೇಲೆ ಕುಳಿತನು. ಅವನು ತನ್ನ ತಾಯಿಗಾಗಿ ಮತ್ತೊಂದು ಸಿಂಹಾಸನವನ್ನು ತರಲು ಕೆಲವು ಸೇವಕರಿಗೆ ಹೇಳಿದನು. ನಂತರ ಅವಳು ಅವನ ಬಲಗಡೆಯಲ್ಲಿ ಕುಳಿತಳು.


ಅವರು ಬಾಳನ ಆಲಯದಲ್ಲಿದ್ದ ಸ್ಮಾರಕಸ್ತಂಭಗಳನ್ನು ಹೊರತಂದು, ಆಲಯವನ್ನು ಸುಟ್ಟುಹಾಕಿದರು. ನಂತರ ಅವರು ಬಾಳನ ಸ್ಮಾರಕಸ್ತಂಭಗಳನ್ನು ಚೂರುಚೂರು ಮಾಡಿದರು.


ನಂತರ ರಾಜನು ಪ್ರಧಾನಯಾಜಕನಾದ ಹಿಲ್ಕೀಯನಿಗೆ, ಇತರ ಯಾಜಕರಿಗೆ, ದ್ವಾರಪಾಲಕರಿಗೆ, ಬಾಳ್‌ದೇವರಿಗೂ ಅಶೇರ ದೇವತೆಗೂ ಮತ್ತು ಆಕಾಶದ ನಕ್ಷತ್ರಗಳಿಗೂ ಉಪಯೋಗಿಸುತ್ತಿದ್ದ ಎಲ್ಲಾ ಸಲಕರಣೆಗಳನ್ನು ದೇವಾಲಯದಿಂದ ಹೊರತರುವಂತೆ ಆಜ್ಞಾಪಿಸಿದನು. ಯೋಷೀಯನು ಜೆರುಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಅವುಗಳನ್ನು ಸುಟ್ಟುಹಾಕಿದನು. ಅವರು ಬೂದಿಯನ್ನು ಬೇತೇಲಿಗೆ ತೆಗೆದುಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು