Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:17 - ಪರಿಶುದ್ದ ಬೈಬಲ್‌

17 ಯೆಹೂದದ ವಿರುದ್ಧವಾಗಿ ಬಾಷನು ಹೋರಾಡಿದನು. ಆಸನ ದೇಶವಾದ ಯೆಹೂದದಿಂದ ಜನರು ಬರುವುದನ್ನೂ ಹೋಗುವುದನ್ನೂ ನಿಲ್ಲಿಸಲು ಬಾಷನು ಇಚ್ಛಿಸಿದನು. ಆದ್ದರಿಂದ ಅವನು ರಾಮ ನಗರವನ್ನು ಬಲಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇಸ್ರಾಯೇಲರ ಅರಸನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇಸ್ರಯೇಲರ ಅರಸ ಬಾಷನು ಯೆಹೂದ್ಯರಿಗೆ ವಿರುದ್ಧ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ‘ರಾಮ್’ ಎಂಬ ಕೋಟೆಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇಸ್ರಾಯೇಲ್ಯರ ಅರಸನಾದ ಬಾಷನು ಯೆಹೂದ್ಯರಿಗೆ ವಿರೋಧವಾಗಿ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವದಕ್ಕಾಗದಂತೆ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲೀ, ಹೊರಗಾಗಲೀ ಯಾರೂ ಹೋಗದ ಹಾಗೆ ಸುತ್ತಲೂ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:17
10 ತಿಳಿವುಗಳ ಹೋಲಿಕೆ  

ಬೆನ್ಯಾಮೀನ್ ಗೋತ್ರದವರು ಹದಿನಾಲ್ಕು ಊರುಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲಾ ಹೊಲಗದ್ದೆಗಳನ್ನು ಪಡೆದುಕೊಂಡರು. ಆ ಊರುಗಳು ಇಂತಿವೆ: ಗಿಬ್ಯೋನ್, ರಾಮಾ, ಬೇರೋತ್,


ಯೆಹೋವನು ಹೀಗೆನ್ನುತ್ತಾನೆ: “ರಾಮದಲ್ಲಿ ಅತಿ ದುಃಖದಿಂದ ಗೋಳಾಡುವ ಒಂದು ಧ್ವನಿಯು ಕೇಳಿಬರುತ್ತದೆ. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುವಳು. ಅವಳ ಮಕ್ಕಳು ಸತ್ತುಹೋದುದರಿಂದ ರಾಹೇಲಳು ಸಮಾಧಾನ ಹೊಂದುವದಕ್ಕೆ ಒಪ್ಪಲಾರಳು.”


ಬಾಷನು ಅಹೀಯನ ಮಗ. ಅವನು ಇಸ್ಸಾಕಾರನ ಕುಲದವನಾಗಿದ್ದನು. ರಾಜನಾದ ನಾದಾಬನನ್ನು ಕೊಲ್ಲಲು ಬಾಷನು ಸಂಚು ಮಾಡಿದನು. ನಾದಾಬನು ಇಸ್ರೇಲರೊಡನೆ ಗಿಬ್ಬೆತೋನ್ ಪಟ್ಟಣದ ವಿರುದ್ಧ ಹೋರಾಟ ಮಾಡುತ್ತಿದ್ದ ಸಂದರ್ಭವಿದು. ಇದು ಫಿಲಿಷ್ಟಿಯ ಪಟ್ಟಣ. ಆ ಸ್ಥಳದಲ್ಲಿ ಬಾಷನು ನಾದಾಬನನ್ನು ಕೊಂದುಹಾಕಿದನು.


ನಂತರ ಸಮುವೇಲನು ಅಲ್ಲಿಂದ ಹೊರಟು ರಾಮಕ್ಕೆ ಹೋದನು. ಸೌಲನು ಗಿಬೆಯದ ತನ್ನ ಮನೆಗೆ ಹೋದನು.


ಯಾರೊಬ್ಬಾಮನು ತನ್ನಲ್ಲೇ, “ಜನರು ಜೆರುಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಹೋಗುವುದನ್ನೇ ಮುಂದುವರಿಸಿದರೆ, ಆಗ ಅವರು ದಾವೀದನ ಕುಟುಂಬವೇ ನಮ್ಮನ್ನು ಆಳಲಿ ಎಂದು ಅಪೇಕ್ಷೆಪಡಬಹುದು. ಜನರು ಯೆಹೂದದ ರಾಜನಾದ ರೆಹಬ್ಬಾಮನನ್ನೇ ಮತ್ತೆ ಅನುಸರಿಸಬಹುದು. ನಂತರ ಅವರು ನನ್ನನ್ನು ಕೊಂದುಬಿಡಬಹುದು.” ಅಂದುಕೊಂಡನು.


ಇಷ್ಮಾಯೇಲನು ಶವಗಳನ್ನು ಆ ಬಾವಿಯೊಳಗೆ ಹಾಕಿದನು. ಆ ಬಾವಿಯು ಬಹಳ ದೊಡ್ಡದಾಗಿತ್ತು. ಅದನ್ನು ಯೆಹೂದದ ರಾಜನಾದ ಆಸನು ತೋಡಿಸಿದ್ದನು. ಯುದ್ಧದ ಸಮಯದಲ್ಲಿ ನಗರದಲ್ಲಿ ನೀರು ಸಾಕಷ್ಟು ಇರಬೇಕೆಂಬ ಉದ್ದೇಶದಿಂದ ರಾಜನಾದ ಆಸನು ಈ ಬಾವಿಯನ್ನು ತೋಡಿಸಿದ್ದನು. ರಾಜನಾದ ಆಸನು ತನ್ನ ನಗರವನ್ನು ಇಸ್ರೇಲಿನ ರಾಜನಾದ ಬಾಷನಿಂದ ರಕ್ಷಿಸುವುದಕ್ಕಾಗಿ ಇದನ್ನು ಕಟ್ಟಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು