18 ಆದ್ದರಿಂದ ಆಸನು ಯೆಹೋವನ ಆಲಯದ ಮತ್ತು ರಾಜನ ಅರಮನೆಯ ಭಂಡಾರದಲ್ಲಿ ಉಳಿದಿದ್ದ ಎಲ್ಲಾ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡನು. ಅವನು ತನ್ನ ಸೇವಕರಿಗೆ ಬೆಳ್ಳಿಬಂಗಾರಗಳನ್ನು ಕೊಟ್ಟು, ಅವರನ್ನು ಅರಾಮ್ಯರ ರಾಜನಾದ ಬೆನ್ಹದದನ ಬಳಿಗೆ ಕಳುಹಿಸಿದನು. (ಬೆನ್ಹದದನು ಟಬ್ರಿಮ್ಮೋನನ ಮಗ. ಟಬ್ರಿಮ್ಮೋನನು ಹಜ್ಯೋನನ ಮಗ.) ದಮಸ್ಕ ನಗರವು ಅವನ ರಾಜಧಾನಿಯಾಗಿತ್ತು.
18 ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿ ಮತ್ತು ಬಂಗಾರವನ್ನು ತೆಗೆದುಕೊಂಡು, ಅದನ್ನು ದೂತರ ಮುಖಾಂತರವಾಗಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನೂ, ಹೆಜ್ಯೋನನ ಮೊಮ್ಮಗನೂ, ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು.
18 ಆಗ ಆಸನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅದನ್ನು ದೂತರ ಮುಖಾಂತರ ದಮಸ್ಕದಲ್ಲಿದ್ದ ಸಿರಿಯಾದವರ ಅರಸನೂ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು.
18 ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅದನ್ನು ದೂತರ ಮುಖಾಂತರವಾಗಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನೂ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿ ಅವನಿಗೆ -
18 ಆಸನು ಯೆಹೋವ ದೇವರ ಆಲಯದ ಮತ್ತು ತನ್ನ ಅರಮನೆಯ ಬೊಕ್ಕಸಗಳಿಂದ ಮಿಕ್ಕ ಸಮಸ್ತ ಬೆಳ್ಳಿಬಂಗಾರವನ್ನು ತೆಗೆದು, ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ, ದಮಸ್ಕದಲ್ಲಿ ವಾಸವಾಗಿರುವ ಹೆಜ್ಯೋನನ ಮಗನೂ, ಟಬ್ರಿಮ್ಮೋನನ ಮಗನೂ ಆದ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿದನು.
ಯೆಹೋಷಾಫಾಟ್, ಯೆಹೋರಾಮ್ ಮತ್ತು ಅಹಜ್ಯರು ಯೆಹೂದದ ರಾಜರಾಗಿದ್ದರು. ಅವರೆಲ್ಲ ಯೆಹೋವಾಷನ ಪೂರ್ವಿಕರು. ಅವರು ಅನೇಕ ವಸ್ತುಗಳನ್ನು ಯೆಹೋವನಿಗೆ ಕೊಟ್ಟಿದ್ದರು. ಅವುಗಳನ್ನೆಲ್ಲ ಆಲಯದಲ್ಲಿ ಇಟ್ಟಿದ್ದರು. ಯೆಹೋವಾಷನೂ ಯೆಹೋವನಿಗೆ ಅನೇಕ ವಸ್ತುಗಳನ್ನು ಕೊಟ್ಟಿದ್ದನು. ಯೆಹೋವಾಷನು ಅವುಗಳ ಜೊತೆಗೆ, ಆಲಯದಲ್ಲಿದ್ದ ಮತ್ತು ತನ್ನ ಮನೆಯಲ್ಲಿದ್ದ ಬಂಗಾರವನ್ನೆಲ್ಲ ತೆಗೆದುಕೊಂಡನು. ನಂತರ ಯೆಹೋವಾಷನು ಆ ಬೆಲೆಬಾಳುವ ವಸ್ತುಗಳನ್ನೆಲ್ಲ ಅರಾಮ್ಯರ ರಾಜನಾದ ಹಜಾಯೇಲನಿಗೆ ಕಳುಹಿಸಿದನು. ಆದ್ದರಿಂದ ಹಜಾಯೇಲನು ಜೆರುಸಲೇಮಿನ ವಿರುದ್ಧ ಯುದ್ಧಮಾಡದೆ ಹೊರಟುಹೋದನು.
ಶೀಶಕನು ಯೆಹೋವನ ಆಲಯದ ಭಂಡಾರವನ್ನು ಮತ್ತು ರಾಜನ ಅರಮನೆಯ ಭಂಡಾರವನ್ನು ತೆಗೆದುಕೊಂಡು ಹೋದನು. ಅರಾಮದ ರಾಜನಾದ ಹದದೆಜರನ ಅಧಿಕಾರಿಗಳಿಂದ ದಾವೀದನು ತೆಗೆದುಕೊಂಡಿದ್ದ ಬಂಗಾರದ ಗುರಾಣಿಗಳನ್ನೂ ಅವನು ತೆಗೆದುಕೊಂಡು ಹೋದನು. ದಾವೀದನು ಈ ಗುರಾಣಿಗಳನ್ನು ಜೆರುಸಲೇಮಿಗೆ ತಂದಿದ್ದನು. ಆದರೆ ಶೀಶಕನು ಎಲ್ಲಾ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು ಹೋದನು.
ಅದಕ್ಕೆ ಅಬ್ರಾಮನು, “ದೇವರಾದ ಯೆಹೋವನೇ, ನೀನು ನನಗೆ ಏನೇ ಕೊಟ್ಟರೂ ನನಗೆ ಸಂತೋಷವಾಗುವುದಿಲ್ಲ. ಯಾಕೆಂದರೆ, ನನಗೆ ಮಗನೇ ಇಲ್ಲ. ಆದ್ದರಿಂದ ನಾನು ಸತ್ತಮೇಲೆ ನನ್ನ ಆಸ್ತಿಯೆಲ್ಲ ನನ್ನ ಸೇವಕನಾದ ದಮಸ್ಕದ ಎಲೀಯೆಜರನ ಪಾಲಾಗುವುದು” ಎಂದು ಹೇಳಿದನು.