20 ರಾಜನಾದ ಬೆನ್ಹದದನು ರಾಜನಾದ ಆಸನ ಜೊತೆ ಒಪ್ಪಂದ ಮಾಡಿಕೊಂಡನು. ಆದ್ದರಿಂದ ಅವನು ತನ್ನ ಸೈನ್ಯವನ್ನು ಇಸ್ರೇಲಿನ ಪಟ್ಟಣಗಳ ವಿರುದ್ದ ಹೋರಾಡಲು ಕಳುಹಿಸಿದನು. ಬೆನ್ಹದದನು ಇಯ್ಯೋನ್, ದಾನ್, ಅಬೇಲ್ಬೇತ್ಮಾಕಾ ಪಟ್ಟಣಗಳನ್ನು ಮತ್ತು ಗಲಿಲಾಯ ಸರೋವರದ ಸುತ್ತಲಿನ ಎಲ್ಲಾ ಪಟ್ಟಣಗಳನ್ನು ಸೋಲಿಸಿದನು. ಅವನು ನಫ್ತಾಲಿ ಪ್ರದೇಶವನ್ನೆಲ್ಲ ಸೋಲಿಸಿದನು.
20 ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಾಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಆಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು.
20 ಬೆನ್ಹದದನು ಅರಸ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಅಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು.
20 ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಾಯೇಲ್ಯರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಆಬೇಲ್ಬೇತ್ಮಾಕಾ, ಕಿನ್ನೆರೋತ್‍ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ ಇವುಗಳನ್ನು ಹಾಳುಮಾಡಿದರು.
ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.
ದಾನ್ಯರು ಆ ನಗರಕ್ಕೆ ಒಂದು ಹೊಸ ಹೆಸರನ್ನು ಕೊಟ್ಟರು. ಹಿಂದೆ ಅದರ ಹೆಸರು ಲಯಿಷ್ ಎಂದಿತ್ತು. ಆದರೆ ಅವರು ಅದಕ್ಕೆ ದಾನ್ ಎಂದು ಹೆಸರಿಟ್ಟರು. ಅವರು ತಮ್ಮ ಪೂರ್ವಿಕನಾದ ದಾನನ ಸ್ಮರಣಾರ್ಥವಾಗಿ ಆ ಹೆಸರನ್ನಿಟ್ಟರು. ದಾನನು ಇಸ್ರೇಲನ ಮಕ್ಕಳಲ್ಲಿ ಒಬ್ಬನು.
ಉತ್ತರದಿಕ್ಕಿನ ಪರ್ವತ ಪ್ರದೇಶಗಳಲ್ಲಿನ ಮತ್ತು ಅರಣ್ಯದಲ್ಲಿನ ಅರಸರಿಗೂ ಕಿನ್ನೆರೋತ್, ನೆಗೆವ್ ಮತ್ತು ಪಶ್ಚಿಮದ ಇಳಿಜಾರಿನ ಪ್ರದೇಶದ ಅರಸರಿಗೂ ಪಶ್ಚಿಮದಿಕ್ಕಿನ ನೆಫತ್‌ದೋರ್ ರಾಜನಿಗೂ ಯಾಬೀನನು ಸಂದೇಶವನ್ನು ಕಳುಹಿಸಿದನು.
ಗಲಿಲಾಯ ಸರೋವರದಿಂದ ಲವಣಸಮುದ್ರದವರೆಗೆ ಹಬ್ಬಿದ ಜೋರ್ಡನ್ ಕಣಿವೆಯ ಪೂರ್ವಭಾಗವು ಕೂಡ ಅವನ ಆಳ್ವಿಕೆಗೆ ಒಳಪಟ್ಟಿತ್ತು. ಬೇತ್‌ಯೆಷಿಮೋತಿನಿಂದ ದಕ್ಷಿಣದಲ್ಲಿ ಪಿಸ್ಗಾ ಬೆಟ್ಟದವರೆಗೆ ಹಬ್ಬಿದ ಪ್ರದೇಶವನ್ನು ಸಹ ಅವನು ಆಳುತ್ತಿದ್ದನು.
ಲೋಟನು ಸೆರೆಯಾಳಾಗಿರುವುದು ಅಬ್ರಾಮನಿಗೆ ತಿಳಿಯಿತು. ಆದ್ದರಿಂದ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿದ ಗಂಡಾಳುಗಳನ್ನೆಲ್ಲ ಒಟ್ಟಾಗಿ ಸೇರಿಸಿದನು. ಅವರಲ್ಲಿ ಮುನ್ನೂರ ಹದಿನೆಂಟು ಮಂದಿ ತರಬೇತಿ ಹೊಂದಿದ್ದ ಸೈನಿಕರಾಗಿದ್ದರು. ಅಬ್ರಾಮನು ಅವರೊಡನೆ ಹೊರಟು ಶತ್ರುಗಳನ್ನು ದಾನ್ ಊರಿನವರೆಗೂ ಹಿಂದಟ್ಟಿದನು.
ಬೆನ್ಹದದನು ಅರಾಮಿನ ರಾಜ. ಅವನು ತನ್ನ ಸೇನೆಯನ್ನೆಲ್ಲ ಒಟ್ಟಾಗಿ ಸೇರಿಸಿದನು. ಅವನ ಹತ್ತಿರ ಮೂವತ್ತೆರಡು ಮಂದಿ ರಾಜರಿದ್ದರು. ಅವರ ಬಳಿ ಕುದುರೆಗಳೂ ರಥಗಳೂ ಇದ್ದವು. ಅವರು ಸಮಾರ್ಯಕ್ಕೆ ವಿರುದ್ಧವಾಗಿ ಹೋಗಿ ಅದಕ್ಕೆ ಮುತ್ತಿಗೆ ಹಾಕಿದರು.
ಬೆನ್ಹದದನು ಅವನಿಗೆ, “ಅಹಾಬನೇ, ನನ್ನ ತಂದೆಯು ನಿನ್ನ ತಂದೆಯಿಂದ ವಶಪಡಿಸಿಕೊಂಡಿರುವ ಪಟ್ಟಣಗಳನ್ನು ನಿನಗೇ ಬಿಟ್ಟುಬಿಡುತ್ತೇನೆ. ನನ್ನ ತಂದೆಯು ಸಮಾರ್ಯದಲ್ಲಿ ಮಾಡಿದಂತೆ ನೀನೂ ದಮಸ್ಕದಲ್ಲಿ ಅಂಗಡಿಗಳನ್ನು ಹಾಕಬಹುದು” ಎಂದನು. ಅಹಾಬನು, “ನೀನು ಇದಕ್ಕೆ ಒಪ್ಪಿಕೊಂಡರೆ, ನಾನು ನಿನ್ನನ್ನು ಸ್ವತಂತ್ರವಾಗಿ ಹೋಗಲು ಬಿಡುತ್ತೇನೆ” ಎಂದನು. ಆ ಇಬ್ಬರು ರಾಜರುಗಳು ಶಾಂತಿಸಂಧಾನವನ್ನು ಮಾಡಿಕೊಂಡರು. ರಾಜನಾದ ಅಹಾಬನು ಬೆನ್ಹದದನಿಗೆ ಸ್ವತಂತ್ರವನ್ನು ಕೊಟ್ಟು ಕಳುಹಿಸಿದನು.