1 ಅರಸುಗಳು 15:23 - ಪರಿಶುದ್ದ ಬೈಬಲ್23 ಆಸನು ಮಾಡಿದ ಮಹಾಕಾರ್ಯಗಳನ್ನೂ ಅವನು ಕಟ್ಟಿಸಿದ ನಗರಗಳನ್ನೂ ಮತ್ತು ಅವನನ್ನು ಕುರಿತ ಇತರ ಸಂಗತಿಗಳನ್ನೂ “ಯೆಹೂದದ ರಾಜರುಗಳ ಚರಿತ್ರೆ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ. ಆಸನಿಗೆ ವಯಸ್ಸಾದಾಗ, ಅವನ ಕಾಲುಗಳಿಗೆ ರೋಗವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಸನ ಉಳಿದ ಚರಿತ್ರೆ, ಅವನ ಎಲ್ಲಾ ಪರಾಕ್ರಮಕೃತ್ಯಗಳು, ಅವನು ಪಟ್ಟಣಗಳನ್ನು ಕಟ್ಟಿಸಿದ ಸಂಗತಿಗಳೂ, ಅವನ ಇತರ ಕಾರ್ಯಗಳು ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಮುಪ್ಪಿನಲ್ಲಿ ಅವನ ಕಾಲುಗಳಿಗೆ ರೋಗವುಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆಸನ ಉಳಿದ ಚರಿತ್ರೆ, ಅವನ ಪರಾಕ್ರಮಕೃತ್ಯಗಳು, ಪಟ್ಟಣಗಳನ್ನು ಕಟ್ಟಿಸಿದ ಸಂಗತಿ ಹಾಗು ಅವನ ಇತರ ಕಾರ್ಯಕಲಾಪಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. ಮುಪ್ಪಿನಲ್ಲಿ ಅವನ ಕಾಲುಗಳಿಗೆ ರೋಗ ತಗಲಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಸನ ಉಳಿದ ಚರಿತ್ರೆ, ಅವನ ಎಲ್ಲಾ ಪರಾಕ್ರಮಕೃತ್ಯಗಳು, ಪಟ್ಟಣಗಳನ್ನು ಕಟ್ಟಿಸಿದ ಸಂಗತಿ ಇವುಗಳೂ ಅವನ ಇತರ ಕ್ರಿಯೆಗಳೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. ಮುಪ್ಪಿನಲ್ಲಿ ಅವನ ಕಾಲುಗಳಿಗೆ ರೋಗವುಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಸನ ಉಳಿದ ಎಲ್ಲಾ ಕಾರ್ಯಗಳೂ, ಅವನ ಸಮಸ್ತ ಪರಾಕ್ರಮವೂ, ಅವನು ಮಾಡಿದ್ದೆಲ್ಲವೂ, ಅವನು ಕಟ್ಟಿಸಿದ ಪಟ್ಟಣಗಳೂ, ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಆದರೆ ತನ್ನ ವೃದ್ಧಾಪ್ಯದಲ್ಲಿ ಅವನ ಕಾಲುಗಳಿಗೆ ರೋಗ ತಗುಲಿತು. ಅಧ್ಯಾಯವನ್ನು ನೋಡಿ |