Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:27 - ಪರಿಶುದ್ದ ಬೈಬಲ್‌

27 ಬಾಷನು ಅಹೀಯನ ಮಗ. ಅವನು ಇಸ್ಸಾಕಾರನ ಕುಲದವನಾಗಿದ್ದನು. ರಾಜನಾದ ನಾದಾಬನನ್ನು ಕೊಲ್ಲಲು ಬಾಷನು ಸಂಚು ಮಾಡಿದನು. ನಾದಾಬನು ಇಸ್ರೇಲರೊಡನೆ ಗಿಬ್ಬೆತೋನ್ ಪಟ್ಟಣದ ವಿರುದ್ಧ ಹೋರಾಟ ಮಾಡುತ್ತಿದ್ದ ಸಂದರ್ಭವಿದು. ಇದು ಫಿಲಿಷ್ಟಿಯ ಪಟ್ಟಣ. ಆ ಸ್ಥಳದಲ್ಲಿ ಬಾಷನು ನಾದಾಬನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನು ಇಸ್ರಾಯೇಲರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ, ಅಹೀಯನ ಮಗನೂ ಆದ ಬಾಷನೆಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇವನು ಇಸ್ರಯೇಲರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ ಅಹೀಯನ ಮಗನೂ ಆದ ಬಾಷನೆಂಬವನು ಇವನಿಗೆ ವಿರುದ್ಧ ಒಳಸಂಚು ಮಾಡಿ ಇವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇವನು ಇಸ್ರಾಯೇಲ್ಯರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ ಅಹೀಯನ ಮಗನೂ ಆದ ಬಾಷನೆಂಬವನು ಇವನಿಗೆ ವಿರೋಧವಾಗಿ ಒಳಸಂಚು ಮಾಡಿ ಇವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಾದಾಬನೂ, ಸಮಸ್ತ ಇಸ್ರಾಯೇಲರೂ ಫಿಲಿಷ್ಟಿಯರ ಪಟ್ಟಣವಾದ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು. ಆದುದರಿಂದ ಇಸ್ಸಾಕಾರನ ಗೋತ್ರದ ಅಹೀಯನ ಮಗ ಬಾಷನು ನಾದಾಬನಿಗೆ ವಿರೋಧವಾಗಿ ಒಳಸಂಚುಮಾಡಿ, ನಾದಾಬನನ್ನು ಕೊಂದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:27
15 ತಿಳಿವುಗಳ ಹೋಲಿಕೆ  

ಯೆಹೋವನು ಇಸ್ರೇಲಿಗೆ ಹೊಸ ರಾಜನನ್ನು ನೇಮಿಸುತ್ತಾನೆ. ಆ ಹೊಸ ರಾಜನು ಯಾರೊಬ್ಬಾಮನ ಕುಟುಂಬವನ್ನು ನಾಶಗೊಳಿಸುತ್ತಾನೆ. ಇದು ಬಹುಬೇಗನೆ ಸಂಭವಿಸುತ್ತದೆ.


ದಾನ್ ಕುಲದವರು ಅವರಿಗೆ ಎಲ್ತೆಕೇ, ಗಿಬ್ಬೆತೋನ್,


ಎಲ್ತೆಕೇ, ಗಿಬ್ಬೆತೋನ್, ಬಾಲತ್,


ಆಸನು ಯೆಹೂದದ ರಾಜನಾದ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿಯು ಇಸ್ರೇಲಿನ ರಾಜನಾದನು. ಜಿಮ್ರಿಯು ತಿರ್ಚದಲ್ಲಿ ಏಳು ದಿನ ಆಳಿದನು. ಆಗ ಸಂಭವಿಸಿದ್ದೇನೆಂದರೆ: ಇಸ್ರೇಲಿನ ಸೈನ್ಯವು ಫಿಲಿಷ್ಟಿಯರಿಗೆ ಸೇರಿದ್ದ ಗಿಬ್ಬೆತೋನಿನ ವಿರುದ್ಧ ಮುತ್ತಿಗೆ ಹಾಕಿದ್ದರು. ಅವರು ಯುದ್ಧಕ್ಕೆ ಸಿದ್ಧರಾಗಿದ್ದರು.


ಯೆಹೋವಾಷನ ಅಧಿಕಾರಿಗಳು ಅವನ ವಿರುದ್ಧವಾಗಿ ಸಂಚುಮಾಡಿ ಅವನನ್ನು ಸಿಲ್ಲಾಕ್ಕೆ ಹೋಗುವ ರಸ್ತೆಯಲ್ಲಿದ್ದ ಮಿಲ್ಲೋ ಮನೆಯಲ್ಲಿ ಕೊಂದುಹಾಕಿದರು.


ಒಮ್ರಿಯು ಇಸ್ರೇಲರೆಲ್ಲರೊಡನೆ ಗಿಬ್ಬೆತೋನನ್ನು ಬಿಟ್ಟು ತಿರ್ಚಕ್ಕೆ ಮುತ್ತಿಗೆ ಹಾಕಿದನು.


ಜಿಮ್ರಿಯು ಏಲನ ಅಧಿಕಾರಿಗಳಲ್ಲಿ ಒಬ್ಬನಾಗಿದ್ದನು. ಏಲನ ರಥಬಲದ ಅರ್ಧಭಾಗಕ್ಕೆ ಜಿಮ್ರಿಯು ಅಧಿಪತಿ. ಆದರೆ ಏಲನ ವಿರುದ್ಧ ಜಿಮ್ರಿಯು ಸಂಚುಮಾಡಿದನು. ರಾಜನಾದ ಏಲನು ತಿರ್ಚದಲ್ಲಿದ್ದನು. ಅವನು ಅರ್ಚನ ಮನೆಯಲ್ಲಿ ಕುಡಿದು ಮತ್ತನಾದನು. ಅರ್ಚನು ತಿರ್ಚದಲ್ಲಿದ್ದ ಅರಮನೆಯ ಮೇಲ್ವಿಚಾರಕ.


ಆಸನು ಯೆಹೂದದ ರಾಜನಾಗಿದ್ದ ಮೂರನೆಯ ವರ್ಷದಲ್ಲಿ ಇದು ಸಂಭವಿಸಿತು. ಅನಂತರ ಬಾಷನು ಇಸ್ರೇಲಿಗೆ ರಾಜನಾದನು.


ಯೆಹೋವನು ಪ್ರವಾದಿಯಾದ ಯೇಹುವಿಗೆ ಒಂದು ಸಂದೇಶವನ್ನು ನೀಡಿದನು. ಈ ಸಂದೇಶವು ಬಾಷನ ಮತ್ತು ಅವನ ಕುಟುಂಬದ ವಿರುದ್ಧವಾಗಿತ್ತು. ಬಾಷನು ಯೆಹೋವನ ವಿರುದ್ಧವಾಗಿ ದುರಾಚಾರವನ್ನೆಸಗಿದನು. ಇದು ಯೆಹೋವನಿಗೆ ಹೆಚ್ಚು ಕೋಪವನ್ನು ಉಂಟುಮಾಡಿತು. ಯಾರೊಬ್ಬಾಮನ ಕುಟುಂಬವು ಅವನಿಗಿಂತ ಮುಂಚೆ ಮಾಡಿದ ಕಾರ್ಯಗಳನ್ನೇ ಬಾಷನೂ ಮಾಡಿದನು. ಬಾಷನು ಯಾರೊಬ್ಬಾಮನ ಕುಟುಂಬದವರನ್ನೆಲ್ಲಾ ಕೊಂದುಹಾಕಿದ್ದಕ್ಕಾಗಿಯೂ ಯೆಹೋವನು ಕೋಪಗೊಂಡನು.


ಜಿಮ್ರಿಯು ಆ ಮನೆಯೊಳಕ್ಕೆ ಹೋಗಿ ರಾಜನಾದ ಏಲನನ್ನು ಕೊಂದುಹಾಕಿದನು. ಆಸನು ಯೆಹೂದದ ರಾಜನಾಗಿದ್ದ ಇಪ್ಪತ್ತೇಳನೆಯ ವರ್ಷದಲ್ಲಿ ಇದು ನಡೆಯಿತು. ಏಲನ ನಂತರ ಜಿಮ್ರಿಯು ಇಸ್ರೇಲಿನ ಹೊಸ ರಾಜನಾದನು.


ರಾಜನ ವಿರುದ್ಧ ಜಿಮ್ರಿಯು ರಹಸ್ಯಯೋಜನೆಗಳನ್ನು ಮಾಡಿದ್ದಾನೆಂಬುದು ಪಾಳೆಯದಲ್ಲಿದ್ದ ಜನರಿಗೆ ತಿಳಿಯಿತು. ಅವನು ರಾಜನನ್ನು ಕೊಂದುಹಾಕಿದನೆಂಬುದು ಅವರಿಗೆ ತಿಳಿಯಿತು. ಆದ್ದರಿಂದ ಇಸ್ರೇಲರೆಲ್ಲರೂ ಆ ದಿನವೇ ಪಾಳೆಯದಲ್ಲಿ ಒಮ್ರಿಯನ್ನು ಇಸ್ರೇಲಿನ ರಾಜನನ್ನಾಗಿ ಮಾಡಿದರು. ಒಮ್ರಿಯು ಸೈನ್ಯದ ಅಧಿಪತಿಯಾಗಿದ್ದನು.


ಯೆಹೋಷಾಫಾಟನ ಮಗನೂ ನಿಂಷಿಯ ಮೊಮ್ಮಗನೂ ಆದ ಯೇಹುವು ಯೋರಾಮನ ವಿರುದ್ಧ ಒಳಸಂಚುಮಾಡಿದನು. ಆ ಸಮಯದಲ್ಲಿ ರಾಮೋತ್‌ಗಿಲ್ಯಾದನ್ನು ಅರಾಮ್ಯರ ರಾಜನಾದ ಹಜಾಯೇಲನಿಂದ ರಕ್ಷಿಸಲು, ಯೋರಾಮನೂ ಇಸ್ರೇಲರೂ ಪ್ರಯತ್ನಿಸಿದ್ದರು.


ಶಿಮೆಯಾತನ ಮಗನಾದ ಯೋಜಾಕಾರನು ಮತ್ತು ಶೋಮೇರನ ಮಗನಾದ ಯೆಹೋಜಾಬಾದನು ಯೆಹೋವಾಷನ ಅಧಿಕಾರಿಗಳಾಗಿದ್ದರು. ಅವರು ಯೆಹೋವಾಷನನ್ನು ಕೊಂದರು. ಜನರು ಯೆಹೋವಾಷನನ್ನು ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಯೆಹೋವಾಷನ ನಂತರ ಅವನ ಮಗನಾದ ಅಮಚ್ಯನು ನೂತನ ರಾಜನಾದನು.


ಅರಾಮ್ಯರು ಯೆಹೋವಾಷನನ್ನು ಬಿಟ್ಟುಹೋಗುವಾಗ ಅವನು ರೋಗದಿಂದ ಬಹಳ ಅಸ್ವಸ್ಥನಾಗಿದ್ದನು. ಅವನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಸಂಚು ಮಾಡಿದರು. ಯಾಕೆಂದರೆ ಅವನು ಯೆಹೋಯಾದನ ಮಗನಾದ ಜೆಕರ್ಯನನ್ನು ಕೊಂದದ್ದರಿಂದ ಸೇವಕರು ಯೆಹೋವಾಷನನ್ನು ಅವನ ಮಂಚದ ಮೇಲೆಯೇ ಕೊಂದುಹಾಕಿದರು. ಜನರು ಅವನನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಆದರೆ ಅರಸರುಗಳ ಸಮಾಧಿಯಲ್ಲಿ ಹೂಳಿಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು