1 ಅರಸುಗಳು 15:29 - ಪರಿಶುದ್ದ ಬೈಬಲ್29 ಬಾಷನು ಹೊಸರಾಜನಾದ ಸಮಯದಲ್ಲಿ ಅವನು ಯಾರೊಬ್ಬಾಮನ ವಂಶದಲ್ಲಿ ಎಲ್ಲರನ್ನೂ ಕೊಂದುಹಾಕಿದನು. ಯಾರೊಬ್ಬಾಮನ ವಂಶದಲ್ಲಿ ಯಾರೂ ಜೀವಸಹಿತ ಉಳಿಯಲು ಬಾಷನು ಬಿಡಲಿಲ್ಲ. ಯೆಹೋವನು ಹೇಳಿದ್ದಂತೆಯೇ ಇದು ಸಂಭವಿಸಿತು. ಯೆಹೋವನು ತನ್ನ ಸೇವಕನಾದ ಶೀಲೋವಿನ ಅಹೀಯನ ಮೂಲಕ ಇದನ್ನು ಹೇಳಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅರಸನಾದ ಕೂಡಲೆ ಯಾರೊಬ್ಬಾಮನ ಮನೆಯಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಯೆಹೋವನು ಶೀಲೋವಿನ ಪ್ರವಾದಿಯಾದ ಅಹೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅರಸನಾದ ಕೂಡಲೆ, ಯಾರೊಬ್ಬಾಮನ ಮನೆಯವರಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಸರ್ವೇಶ್ವರ ಶಿಲೋವಿನ ಪ್ರವಾದಿ ಅಹೀಯನ ಮುಖಾಂತರ ಹೇಳಿಸಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅರಸನಾದ ಕೂಡಲೆ ಯಾರೊಬ್ಬಾಮನ ಮನೆಯವರಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಯೆಹೋವನು ಶೀಲೋವಿನ ಪ್ರವಾದಿಯಾದ ಅಹೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅವನು ಆಳುತ್ತಿರುವಾಗ, ಯಾರೊಬ್ಬಾಮನ ಮನೆಯವರನ್ನೆಲ್ಲಾ ಸಂಹರಿಸಿಬಿಟ್ಟನು. ಯಾರೊಬ್ಬಾಮನು ಪಾಪಮಾಡಿ, ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನಿಮಿತ್ತವಾಗಿಯೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ, ಯೆಹೋವ ದೇವರು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ನೆರವೇರಿತು. ಅಧ್ಯಾಯವನ್ನು ನೋಡಿ |
ಯೆಹೋವನು ಪ್ರವಾದಿಯಾದ ಯೇಹುವಿಗೆ ಒಂದು ಸಂದೇಶವನ್ನು ನೀಡಿದನು. ಈ ಸಂದೇಶವು ಬಾಷನ ಮತ್ತು ಅವನ ಕುಟುಂಬದ ವಿರುದ್ಧವಾಗಿತ್ತು. ಬಾಷನು ಯೆಹೋವನ ವಿರುದ್ಧವಾಗಿ ದುರಾಚಾರವನ್ನೆಸಗಿದನು. ಇದು ಯೆಹೋವನಿಗೆ ಹೆಚ್ಚು ಕೋಪವನ್ನು ಉಂಟುಮಾಡಿತು. ಯಾರೊಬ್ಬಾಮನ ಕುಟುಂಬವು ಅವನಿಗಿಂತ ಮುಂಚೆ ಮಾಡಿದ ಕಾರ್ಯಗಳನ್ನೇ ಬಾಷನೂ ಮಾಡಿದನು. ಬಾಷನು ಯಾರೊಬ್ಬಾಮನ ಕುಟುಂಬದವರನ್ನೆಲ್ಲಾ ಕೊಂದುಹಾಕಿದ್ದಕ್ಕಾಗಿಯೂ ಯೆಹೋವನು ಕೋಪಗೊಂಡನು.