Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:12 - ಪರಿಶುದ್ದ ಬೈಬಲ್‌

12 ಹೀಗೆ ಜಿಮ್ರಿಯು ಬಾಷನ ಕುಟುಂಬವನ್ನು ನಾಶಗೊಳಿಸಿದನು. ಬಾಷನ ವಿರುದ್ಧವಾಗಿ ಯೆಹೋವನು ಪ್ರವಾದಿಯಾದ ಯೇಹುವಿನ ಮೂಲಕ ತಿಳಿಸಿದಂತೆ ಇದು ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಬಾಷನೂ ಹಾಗು ಅವನ ಮಗನಾದ ಏಲನೂ ತಾವು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ತಮ್ಮ ವಿಗ್ರಹಗಳಿಂದ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಬಾಷನೂ ಅವನ ಮಗ ಏಲನೂ ತಾವು ಪಾಪಮಾಡಿದ್ದಲ್ಲದೆ ಇಸ್ರಯೇಲರನ್ನೂ ಪಾಪಕ್ಕೆ ಪ್ರಚೋದಿಸಿದರು. ತಮ್ಮ ವಿಗ್ರಹಗಳಿಂದ ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ರೇಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಬಾಷನೂ ಅವನ ಮಗನಾದ ಏಲನೂ ತಾವು ಪಾಪಮಾಡಿದ್ದಲ್ಲದೆ ಇಸ್ರಾಯೇಲ್ಯರನ್ನೂ ಪಾಪಕ್ಕೆ ಪ್ರೇರಿಸಿ ತಮ್ಮ ವಿಗ್ರಹಗಳಿಂದ ಇಸ್ರಾಯೇಲ್ ದೇವರಾದ ಯೆಹೋವನನ್ನು ರೇಗಿಸಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಹೀಗೆಯೇ ಬಾಷನೂ ಅವನ ಮಗ ಏಲನೂ ತಮ್ಮ ಎಲ್ಲಾ ಪಾಪಗಳಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕೋಪವನ್ನು ಎಬ್ಬಿಸಿ, ತಾವು ಮಾಡಿದ ಪಾಪಗಳಿಂದಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:12
11 ತಿಳಿವುಗಳ ಹೋಲಿಕೆ  

ಆಗ ಯೆಹೋವನು ಹನಾನೀಯ ಮಗನಾದ ಯೇಹುವಿನೊಂದಿಗೆ ಮಾತನಾಡಿ ರಾಜನಾದ ಬಾಷನ ವಿರುದ್ಧವಾಗಿ ಹೀಗೆ ಹೇಳಿದನು:


ನಿನ್ನ ಸಂದೇಶವನ್ನು ಮೂಢನ ಮೂಲಕ ಎಂದಿಗೂ ಕಳುಹಿಸಿಕೊಡಬೇಡ. ಅದು ನಿನ್ನ ಸ್ವಂತ ಕಾಲನ್ನೇ ಕತ್ತರಿಸಿಕೊಂಡಂತಿರುವುದು; ನೀನೇ ಕೇಡಿಗಾಗಿ ಕೇಳಿಕೊಂಡಂತಾಗುವುದು.


ಹೀಗೆ ರೆಹಬ್ಬಾಮನು ಜನರ ಬೇಡಿಕೆಯನ್ನು ಕೇಳಲಿಲ್ಲ. ಯಾಕೆಂದರೆ ಇದು ದೇವರ ಚಿತ್ತವಾಗಿತ್ತು. ದೇವರು ಅಹೀಯನ ಮುಖಾಂತರ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರುವಂತೆ ಹೀಗಾಯಿತು. ಅಹೀಯನು ಶೀಲೋವಿನವನಾಗಿದ್ದನು. ಯಾರೊಬ್ಬಾಮನು ನೆಬಾಟನ ಮಗನಾಗಿದ್ದನು.


ಲೆಬೊಹಮಾತಿನಿಂದ ಅರಾಬ ಸಮುದ್ರದವರೆಗೆ ಹಬ್ಬಿದ ಇಸ್ರೇಲರ ದೇಶವನ್ನು ಯಾರೊಬ್ಬಾಮನು ಮತ್ತೆ ವಶಪಡಿಸಿಕೊಂಡನು. ಇಸ್ರೇಲರ ಯೆಹೋವನು ತನ್ನ ಸೇವಕನೂ ಅಮಿತ್ತೈನ ಮಗನೂ ಗತ್‌ಹೇಫೆರಿನ ಪ್ರವಾದಿಯೂ ಆದ ಯೋನಾ ಎಂಬವನ ಮೂಲಕ ಮೊದಲೇ ತಿಳಿಸಿದ್ದಂತೆ ಇದು ಸಂಭವಿಸಿತು.


ಯೆಹೋವನು ಪ್ರವಾದಿಯಾದ ಯೇಹುವಿಗೆ ಒಂದು ಸಂದೇಶವನ್ನು ನೀಡಿದನು. ಈ ಸಂದೇಶವು ಬಾಷನ ಮತ್ತು ಅವನ ಕುಟುಂಬದ ವಿರುದ್ಧವಾಗಿತ್ತು. ಬಾಷನು ಯೆಹೋವನ ವಿರುದ್ಧವಾಗಿ ದುರಾಚಾರವನ್ನೆಸಗಿದನು. ಇದು ಯೆಹೋವನಿಗೆ ಹೆಚ್ಚು ಕೋಪವನ್ನು ಉಂಟುಮಾಡಿತು. ಯಾರೊಬ್ಬಾಮನ ಕುಟುಂಬವು ಅವನಿಗಿಂತ ಮುಂಚೆ ಮಾಡಿದ ಕಾರ್ಯಗಳನ್ನೇ ಬಾಷನೂ ಮಾಡಿದನು. ಬಾಷನು ಯಾರೊಬ್ಬಾಮನ ಕುಟುಂಬದವರನ್ನೆಲ್ಲಾ ಕೊಂದುಹಾಕಿದ್ದಕ್ಕಾಗಿಯೂ ಯೆಹೋವನು ಕೋಪಗೊಂಡನು.


ಆದ್ದರಿಂದ ಬಾಷನೇ, ನಿನ್ನನ್ನೂ ನಿನ್ನ ಕುಟುಂಬವನ್ನೂ ನಾನು ನಾಶಪಡಿಸುತ್ತೇನೆ. ನೆಬಾಟನ ಮಗನಾದ ಯಾರೊಬ್ಬಾಮನ ಕುಟುಂಬಕ್ಕೆ ನಾನು ಮಾಡಿದಂತೆ ನಿನಗೂ ಮಾಡುತ್ತೇನೆ.


ಇಸ್ರೇಲರೆಲ್ಲರು ಅವನಿಗಾಗಿ ಅತ್ತು, ಸಮಾಧಿಮಾಡಿದರು. ಯೆಹೋವನು ಹೇಳಿದಂತೆಯೇ ಇದು ಸಂಭವಿಸಿತು. ಯೆಹೋವನು ತನ್ನ ಸೇವಕನೂ ಪ್ರವಾದಿಯೂ ಆದ ಅಹೀಯನ ಮೂಲಕ ಈ ಸಂಗತಿಗಳನ್ನು ಹೇಳಿಸಿದ್ದನು.


ರಾಜನಾದ ಆಸನು ಯೆಹೂದದ ಅರಸನಾಗಿದ್ದ ಕಾಲದಲ್ಲಿ ಅವನಿಗೆ ಮತ್ತು ಇಸ್ರೇಲಿನ ರಾಜನಾದ ಬಾಷನಿಗೆ ಯಾವಾಗಲೂ ಯುದ್ಧ ನಡೆಯುತ್ತಿತ್ತು.


ದೇವದರ್ಶಿಯಾದ ಯೇಹೂ ಅವನನ್ನು ಎದುರುಗೊಂಡನು. ಅವನು ಹನಾನೀಯನ ಮಗ. ರಾಜನಿಗೆ ಯೇಹುವು ಹೇಳಿದ್ದೇನೆಂದರೆ, “ನೀನು ದುಷ್ಟಜನರಿಗೆ ಸಹಾಯಮಾಡಿದ್ದೇಕೆ? ಯೆಹೋವನನ್ನು ದ್ವೇಷಿಸುವ ಜನರನ್ನು ನೀನು ಪ್ರೀತಿಸಿದ್ದೇಕೆ? ಆ ಕಾರಣಕ್ಕಾಗಿ ಯೆಹೋವನು ನಿನ್ನ ಮೇಲೆ ಕೋಪಗೊಂಡಿದ್ದಾನೆ.


ಯೆಹೋಷಾಫಾಟನು ಆರಂಭದಿಂದ ಕೊನೆಯವರೆಗೂ ಮಾಡಿದ ಬೇರೆ ಕಾರ್ಯಗಳು, ಹನಾನೀಯನ ಮಗನಾದ ಯೇಹು ಬರೆದ ಇಸ್ರೇಲ್ ರಾಜರ ಗ್ರಂಥದಲ್ಲಿ ದಾಖಲಾಗಿವೆ.


ಮಡಕೆಯಲ್ಲಿದ್ದ ಹಿಟ್ಟು ಮತ್ತು ಪಾತ್ರೆಯಲ್ಲಿದ್ದ ಎಣ್ಣೆ ಎಂದೆಂದಿಗೂ ಖಾಲಿಯಾಗಲಿಲ್ಲ. ಯೆಹೋವನು ಎಲೀಯನ ಮೂಲಕ ಹೇಳಿದ್ದಂತೆಯೇ ಇದು ಸಂಭವಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು