1 ಅರಸುಗಳು 16:13 - ಪರಿಶುದ್ದ ಬೈಬಲ್13 ಬಾಷನ ಮತ್ತು ಅವನ ಮಗನಾದ ಏಲನ ಪಾಪಗಳೇ ಅದಕ್ಕೆ ಕಾರಣ. ಅವರು ಪಾಪಗಳನ್ನು ಮಾಡಿದರು ಮತ್ತು ಪಾಪಗಳನ್ನು ಮಾಡುವಂತೆ ಇಸ್ರೇಲಿನ ಜನರನ್ನು ಪ್ರೇರೇಪಿಸಿದರು. ಅವರಲ್ಲಿ ಅನೇಕ ವಿಗ್ರಹಗಳಿದ್ದುದರಿಂದ ಯೆಹೋವನು ಕೋಪಗೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದುದರಿಂದ ಆತನು ಪ್ರವಾದಿಯಾದ ಯೇಹುವಿನ ಮುಖಾಂತರವಾಗಿ ಬಾಷನ ಮನೆಗೆ ಆಗುವ ದುರ್ಗತಿಯನ್ನು ಮುಂತಿಳಿಸಿದ್ದನು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಈ ಕಾರಣ ಪ್ರವಾದಿ ಯೇಹುವಿನ ಮುಖಾಂತರ ಸರ್ವೇಶ್ವರ ಬಾಷನ ಮನೆಗೆ ದುರ್ಗತಿಯನ್ನು ಮುಂತಿಳಿಸಿದ್ದರು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆತನು ಪ್ರವಾದಿಯಾದ ಯೇಹುವಿನ ಮುಖಾಂತರವಾಗಿ ಬಾಷನ ಮನೆಗೆ ದುರ್ಗತಿಯನ್ನು ಮುಂತಿಳಿಸಿದ್ದನು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ತಾವು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ್ದರಿಂದಲೂ, ಯೆಹೋವ ದೇವರು ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೆ ವಿರೋಧವಾಗಿ ಹೇಳಿದ ಆತನ ವಾಕ್ಯದ ಪ್ರಕಾರವೇ ಜಿಮ್ರಿಯು ಬಾಷನ ಮನೆಯವರನ್ನೆಲ್ಲಾ ನಾಶಮಾಡಿದನು. ಅಧ್ಯಾಯವನ್ನು ನೋಡಿ |
ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.