Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:15 - ಪರಿಶುದ್ದ ಬೈಬಲ್‌

15 ಆಸನು ಯೆಹೂದದ ರಾಜನಾದ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿಯು ಇಸ್ರೇಲಿನ ರಾಜನಾದನು. ಜಿಮ್ರಿಯು ತಿರ್ಚದಲ್ಲಿ ಏಳು ದಿನ ಆಳಿದನು. ಆಗ ಸಂಭವಿಸಿದ್ದೇನೆಂದರೆ: ಇಸ್ರೇಲಿನ ಸೈನ್ಯವು ಫಿಲಿಷ್ಟಿಯರಿಗೆ ಸೇರಿದ್ದ ಗಿಬ್ಬೆತೋನಿನ ವಿರುದ್ಧ ಮುತ್ತಿಗೆ ಹಾಕಿದ್ದರು. ಅವರು ಯುದ್ಧಕ್ಕೆ ಸಿದ್ಧರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಏಳು ವರ್ಷ ಆಳ್ವಿಕೆ ಮಾಡಿದನು. ಆ ಸಮಯದಲ್ಲಿ ಇಸ್ರಾಯೇಲರು ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಯೆಹೂದ್ಯರ ಅರಸ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿ ಎಂಬವನು ತಿರ್ಚದಲ್ಲಿ ಇಸ್ರಯೇಲರ ಅರಸನಾಗಿ ಏಳು ದಿವಸ ಆಳಿದನು. ಆ ಸಮಯದಲ್ಲಿ ಇಸ್ರಯೇಲರು ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೂದ್ಯರ ಅರಸನಾದ ಆಸನ ಆಳಿಕೆಯ ಇಪ್ಪತ್ತೇಳನೆಯ ವರುಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಇಸ್ರಾಯೇಲ್ಯರ ಅರಸನಾಗಿ ಏಳು ದಿವಸ ಆಳಿದನು. ಆ ಸಮಯದಲ್ಲಿ ಇಸ್ರಾಯೇಲ್ಯರು ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೂದದ ಅರಸನಾದ ಆಸನ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಏಳು ದಿನ ಆಳಿದನು. ಆಗ ಇಸ್ರಾಯೇಲರು ಫಿಲಿಷ್ಟಿಯರಿಗೆ ಸಂಬಂಧಪಟ್ಟ ಗಿಬ್ಬೆತೋನಿನ ಬಳಿಯಲ್ಲಿ ದಂಡಿಳಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:15
11 ತಿಳಿವುಗಳ ಹೋಲಿಕೆ  

ಬಾಷನು ಅಹೀಯನ ಮಗ. ಅವನು ಇಸ್ಸಾಕಾರನ ಕುಲದವನಾಗಿದ್ದನು. ರಾಜನಾದ ನಾದಾಬನನ್ನು ಕೊಲ್ಲಲು ಬಾಷನು ಸಂಚು ಮಾಡಿದನು. ನಾದಾಬನು ಇಸ್ರೇಲರೊಡನೆ ಗಿಬ್ಬೆತೋನ್ ಪಟ್ಟಣದ ವಿರುದ್ಧ ಹೋರಾಟ ಮಾಡುತ್ತಿದ್ದ ಸಂದರ್ಭವಿದು. ಇದು ಫಿಲಿಷ್ಟಿಯ ಪಟ್ಟಣ. ಆ ಸ್ಥಳದಲ್ಲಿ ಬಾಷನು ನಾದಾಬನನ್ನು ಕೊಂದುಹಾಕಿದನು.


ಎಲ್ತೆಕೇ, ಗಿಬ್ಬೆತೋನ್, ಬಾಲತ್,


ಮಹಾದುಷ್ಟನನ್ನು ನಾನು ನೋಡಿದ್ದೇನೆ. ಅವನು ಮಹಾವೃಕ್ಷದಂತೆ ಬಲಿಷ್ಠನಾಗಿದ್ದನು.


ಯೇಹು ನಗರದೊಳಕ್ಕೆ ಪ್ರವೇಶಿಸಿದನು. ಈಜೆಬೆಲಳು, “ಜಿಮ್ರಿ, ಕ್ಷೇಮವೇ! ಅವನಂತೆಯೇ ನೀನೂ ನಿನ್ನ ಒಡೆಯನನ್ನು ಕೊಂದುಹಾಕಿದೆ!” ಎಂದಳು.


ಆಸನು ಯೆಹೂದದ ರಾಜನಾದ ಇಪ್ಪತ್ತಾರನೆಯ ವರ್ಷದಲ್ಲಿ ಏಲನು ಇಸ್ರೇಲಿನ ರಾಜನಾದನು. ಏಲನು ಬಾಷನ ಮಗ. ಅವನು ತಿರ್ಚದಲ್ಲಿ ಎರಡು ವರ್ಷ ಆಳಿದನು.


ದಾನ್ ಕುಲದವರು ಅವರಿಗೆ ಎಲ್ತೆಕೇ, ಗಿಬ್ಬೆತೋನ್,


ಯಾರೊಬ್ಬಾಮನ ಪತ್ನಿಯು ತಿರ್ಚಾಗೆ ಹಿಂದಿರುಗಿ ಹೋದಳು. ಆಕೆಯು ಮನೆಯೊಳಕ್ಕೆ ಕಾಲಿಟ್ಟಕೂಡಲೇ ಮಗನು ಸತ್ತುಹೋದನು.


ಈ ಆಕ್ರಮಣದ ಸುದ್ದಿಯು ಬಾಷನಿಗೆ ತಿಳಿಯಿತು. ಆದ್ದರಿಂದ ಅವನು ರಾಮ ನಗರವನ್ನು ಬಲಪಡಿಸಲು ತಾನು ಕೈಗೊಂಡಿದ್ದ ಕೆಲಸವನ್ನು ನಿಲ್ಲಿಸಿದನು. ಅವನು ಆ ಪಟ್ಟಣದಿಂದ ತಿರ್ಚಕ್ಕೆ ಹಿಂದಿರುಗಿದನು.


ರಾಜನ ವಿರುದ್ಧ ಜಿಮ್ರಿಯು ರಹಸ್ಯಯೋಜನೆಗಳನ್ನು ಮಾಡಿದ್ದಾನೆಂಬುದು ಪಾಳೆಯದಲ್ಲಿದ್ದ ಜನರಿಗೆ ತಿಳಿಯಿತು. ಅವನು ರಾಜನನ್ನು ಕೊಂದುಹಾಕಿದನೆಂಬುದು ಅವರಿಗೆ ತಿಳಿಯಿತು. ಆದ್ದರಿಂದ ಇಸ್ರೇಲರೆಲ್ಲರೂ ಆ ದಿನವೇ ಪಾಳೆಯದಲ್ಲಿ ಒಮ್ರಿಯನ್ನು ಇಸ್ರೇಲಿನ ರಾಜನನ್ನಾಗಿ ಮಾಡಿದರು. ಒಮ್ರಿಯು ಸೈನ್ಯದ ಅಧಿಪತಿಯಾಗಿದ್ದನು.


ಜಿಮ್ರಿಯು ಆ ಮನೆಯೊಳಕ್ಕೆ ಹೋಗಿ ರಾಜನಾದ ಏಲನನ್ನು ಕೊಂದುಹಾಕಿದನು. ಆಸನು ಯೆಹೂದದ ರಾಜನಾಗಿದ್ದ ಇಪ್ಪತ್ತೇಳನೆಯ ವರ್ಷದಲ್ಲಿ ಇದು ನಡೆಯಿತು. ಏಲನ ನಂತರ ಜಿಮ್ರಿಯು ಇಸ್ರೇಲಿನ ಹೊಸ ರಾಜನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು