Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:18 - ಪರಿಶುದ್ದ ಬೈಬಲ್‌

18 ಆ ನಗರವು ವಶವಾದುದನ್ನು ಜಿಮ್ರಿಯು ಕಂಡು ಅರಮನೆಯೊಳಕ್ಕೆ ಹೋಗಿ ಬೆಂಕಿಯನ್ನು ಹತ್ತಿಸಿದನು. ಅವನು ಅರಮನೆಯನ್ನು ಸುಟ್ಟುಹಾಕಿ ತಾನೂ ಸುಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಪಟ್ಟಣವು ಅವರ ವಶವಾದುದನ್ನು ಜಿಮ್ರಿಯು ಕಂಡು ಅರಮನೆಯ ಗರ್ಭಗೃಹಕ್ಕೆ ಹೋಗಿ, ಅರಮನೆಗೆ ಬೆಂಕಿ ಹೊತ್ತಿಸಿ ಸುಟ್ಟುಕೊಂಡು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಪಟ್ಟಣ ಅವರ ವಶವಾದದ್ದನ್ನು ಜಿಮ್ರಿ ಕಂಡು, ಅರಮನೆಯ ಗರ್ಭಗೃಹವನ್ನು ಹೊಕ್ಕು ಅರಮನೆಗೆ ಬೆಂಕಿಹೊತ್ತಿಸಿ ಸುಟ್ಟುಕೊಂಡು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಪಟ್ಟಣವು ಅವರ ವಶವಾದದ್ದನ್ನು ಜಿಮ್ರಿಯು ಕಂಡು ಅರಮನೆಯ ಗರ್ಭಗೃಹವನ್ನು ಹೊಕ್ಕು ಅರಮನೆಗೆ ಬೆಂಕಿಹೊತ್ತಿಸಿ ಸುಟ್ಟುಕೊಂಡು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಪಟ್ಟಣವು ವಶವಾದದ್ದನ್ನು ಕಂಡಾಗ, ಜಿಮ್ರಿಯು ಅರಮನೆಯ ಅಂತಃಪುರದೊಳಗೆ ಪ್ರವೇಶಿಸಿ, ತನ್ನ ಅರಮನೆಯನ್ನು ಬೆಂಕಿಯಿಂದ ಸುಟ್ಟು ತಾನೂ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:18
8 ತಿಳಿವುಗಳ ಹೋಲಿಕೆ  

ಅಹೀತೋಫೆಲನು ತನ್ನ ಸಲಹೆಯನ್ನು ಇಸ್ರೇಲರು ಸ್ವೀಕರಿಸಲಿಲ್ಲವೆಂಬುದನ್ನು ತಿಳಿದು ತನ್ನ ಹೇಸರಕತ್ತೆಯ ಮೇಲೆ ತಡಿಯನ್ನು ಹಾಕಿ ತನ್ನ ಸ್ವಂತ ಊರಿನಲ್ಲಿದ್ದ ಮನೆಗೆ ಹೋದನು. ಅವನು ತನ್ನ ಕುಟುಂಬಕ್ಕೆ ಯೋಜನೆಗಳನ್ನು ಮಾಡಿದನು. ನಂತರ ಅವನೇ ನೇಣು ಹಾಕಿಕೊಂಡು ಸತ್ತನು. ಅಹೀತೋಫೆಲನನ್ನು ಜನರು ಅವನ ತಂದೆಯ ಸಮಾಧಿಯ ಬಳಿ ಸಮಾಧಿ ಮಾಡಿದರು.


ಆಗ ಯೂದನು ಆ ಹಣವನ್ನು ದೇವಾಲಯದೊಳಗೆ ಬಿಸಾಡಿ ಹೊರಟುಹೋಗಿ ನೇಣು ಹಾಕಿಕೊಂಡನು.


ಕೂಡಲೆ ಅಬೀಮೆಲೆಕನು ತನ್ನ ಆಯುಧವಾಹಕನಿಗೆ, “ನಿನ್ನ ಖಡ್ಗವನ್ನು ಹೊರತೆಗೆದು ನನ್ನನ್ನು ಕೊಂದುಬಿಡು. ‘ಒಬ್ಬ ಹೆಂಗಸು ಅಬೀಮೆಲೆಕನನ್ನು ಕೊಂದಳು’ ಎಂದು ಜನರು ಹೇಳಬಾರದು. ಅದಕ್ಕಾಗಿ ನೀನು ನನ್ನನ್ನು ಕೊಲ್ಲಬೇಕೆಂದು ನನ್ನ ಇಚ್ಛೆ” ಎಂದನು. ಆದ್ದರಿಂದ ಆ ಸೇವಕನು ಅಬೀಮೆಲೆಕನನ್ನು ತನ್ನ ಕತ್ತಿಯಿಂದ ಇರಿದನು; ಅಬೀಮೆಲೆಕನು ಸತ್ತನು.


ಒಮ್ರಿಯು ಇಸ್ರೇಲರೆಲ್ಲರೊಡನೆ ಗಿಬ್ಬೆತೋನನ್ನು ಬಿಟ್ಟು ತಿರ್ಚಕ್ಕೆ ಮುತ್ತಿಗೆ ಹಾಕಿದನು.


ಪೆಕಹ್ಯನ ಸೇನೆಗೆ ರೆಮಲ್ಯನ ಮಗನಾದ ಪೆಕಹನು ಸೇನಾಧಿಪತಿಯಾಗಿದ್ದನು. ಅವನು ಪೆಕಹ್ಯನನ್ನು ಕೊಂದುಹಾಕಿದನು. ಅವನು ಸಮಾರ್ಯದಲ್ಲಿರುವ ರಾಜನ ಅರಮನೆಯಲ್ಲಿ ಪೆಕಹ್ಯನು ಅರ್ಗೋಬ್ ಮತ್ತು ಅರ್ಯೇ ಎಂಬವರನ್ನು ಸಹ ಕೊಂದುಹಾಕಿದನು. ಪೆಕಹ್ಯನನ್ನು ಪೆಕಹನು ಕೊಂದುಹಾಕಿದಾಗ ಅವನ ಸಂಗಡ ಗಿಲ್ಯಾದಿನ ಐವತ್ತು ಜನರಿದ್ದರು. ಪೆಕಹ್ಯನ ನಂತರ ಪೆಕಹನು ಹೊಸ ರಾಜನಾದನು.


ಯೇಹು ನಗರದೊಳಕ್ಕೆ ಪ್ರವೇಶಿಸಿದನು. ಈಜೆಬೆಲಳು, “ಜಿಮ್ರಿ, ಕ್ಷೇಮವೇ! ಅವನಂತೆಯೇ ನೀನೂ ನಿನ್ನ ಒಡೆಯನನ್ನು ಕೊಂದುಹಾಕಿದೆ!” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು