1 ಅರಸುಗಳು 16:2 - ಪರಿಶುದ್ದ ಬೈಬಲ್2 “ನಾನು ನಿನ್ನನ್ನು ಪ್ರಾಮುಖ್ಯ ವ್ಯಕ್ತಿಯನ್ನಾಗಿ ಮಾಡಿದೆ. ಇಸ್ರೇಲಿನ ಜನರಿಗೆ ನಿನ್ನನ್ನು ರಾಜನನ್ನಾಗಿ ನಾನು ಮಾಡಿದೆ. ಆದರೆ ನೀನು ಯಾರೊಬ್ಬಾಮನ ಮಾರ್ಗವನ್ನೇ ಅನುಸರಿಸಿದೆ. ಇಸ್ರೇಲಿನ ನನ್ನ ಜನರು ಪಾಪಮಾಡುವಂತೆ ನೀನು ಪ್ರೇರೇಪಿಸಿದೆ. ಅವರು ತಮ್ಮ ಪಾಪಗಳಿಂದ ನನ್ನನ್ನು ಕೋಪಗೊಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನಾನು ನಿನ್ನನ್ನು ಧೂಳಿನಿಂದ ಎತ್ತಿ, ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನನ್ನಾಗಿ ಮಾಡಿದರೂ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿರುವೆ. ಅವರ ಪಾಪದ ಮೂಲಕವಾಗಿ ನನಗೆ ಕೋಪವನ್ನೆಬ್ಬಿಸಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನಾನು ನಿನ್ನನ್ನು ಧೂಳಿನಿಂದ ಎತ್ತಿ ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನನ್ನಾಗಿ ಮಾಡಿದೆ. ಆದರೂ ನೀನು ಯಾರೊಬ್ಬಾಮನ ಮಾರ್ಗದಲ್ಲೇ ನಡೆದು, ನನ್ನ ಜನರಾದ ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದೆ. ಅವರ ಪಾಪದ ಮೂಲಕ ನನಗೆ ಕೋಪವನ್ನೆಬ್ಬಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಾನು ನಿನ್ನನ್ನು ಧೂಳಿನಿಂದ ಎತ್ತಿ ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಾಯಕನನ್ನಾಗಿ ಮಾಡಿದರೂ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿ ಅವರ ಪಾಪದ ಮೂಲಕವಾಗಿ ನನಗೆ ಕೋಪವನ್ನೆಬ್ಬಿಸಿದ್ದರಿಂದ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನಾನು ನಿನ್ನನ್ನು ಧೂಳಿನಿಂದ ಎಬ್ಬಿಸಿ, ನಿನ್ನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿ ಇರಿಸಿದೆನು. ಆದರೆ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು, ನನ್ನ ಜನರಾದ ಇಸ್ರಾಯೇಲರು ತಮ್ಮ ಪಾಪಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ಅವರನ್ನು ಪಾಪಮಾಡಲು ಪ್ರೇರೇಪಿಸಿದೆ. ಅಧ್ಯಾಯವನ್ನು ನೋಡಿ |
“ಮನುಷ್ಯನು ಪ್ರತಿ ಆಜ್ಞೆಗೂ, ಅಂದರೆ ಸಣ್ಣಸಣ್ಣ ಆಜ್ಞೆಗೂ ವಿಧೇಯನಾಗಿರಬೇಕು. ಒಬ್ಬನು ಯಾವ ಆಜ್ಞೆಗಾದರೂ ಅವಿಧೇಯನಾಗಿ ಜೀವಿಸುತ್ತಾ ಆ ಆಜ್ಞೆಗೆ ಬೇರೆಯವರೂ ಅವಿಧೇಯರಾಗಿರಬೇಕೆಂದು ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅತ್ಯಲ್ಪನಾಗಿರುವನು. ಆದರೆ ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ಜೀವಿಸುತ್ತಾ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ಬೇರೆಯವರಿಗೂ ಬೋಧಿಸುವವನು ಪರಲೋಕರಾಜ್ಯದಲ್ಲಿ ಪ್ರಮುಖನಾಗಿರುವನು.
ನನ್ನ ಒಡೆಯನೇ, ನನ್ನ ರಾಜನೇ, ನನ್ನ ಮಾತುಗಳನ್ನು ಆಲಿಸು! ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿರುವುದಾದರೆ ಆತನಿಗೆ ನೈವೇದ್ಯವನ್ನು ಅರ್ಪಿಸೋಣ. ಆದರೆ ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಜನರು ಮಾಡಿದ್ದರೆ, ಅವರಿಗೆ ಯೆಹೋವನು ಕೇಡಾಗುವಂತೆ ಮಾಡಲಿ. ನನಗೆ ಯೆಹೋವನು ನೀಡಿದ ಭೂಮಿಯನ್ನು ನಾನು ಬಿಡುವಂತೆ ಜನರು ಬಲವಂತಪಡಿಸಿದರು. ‘ಹೋಗು, ಹೊರದೇಶೀಯರೊಂದಿಗೆ ನೆಲೆಸು. ಹೋಗು, ಇತರ ದೇವರುಗಳನ್ನು ಆರಾಧಿಸು’ ಎಂದು ಜನರು ನನಗೆ ಹೇಳಿದರು.