1 ಅರಸುಗಳು 16:21 - ಪರಿಶುದ್ದ ಬೈಬಲ್21 ಇಸ್ರೇಲಿನ ಜನರಲ್ಲಿ ಎರಡು ಪಕ್ಷಗಳಾದವು. ಗೀನತನ ಮಗನಾದ ತಿಬ್ನಿಯನ್ನು ಒಂದು ಪಕ್ಷದವರು ಅನುಸರಿಸಿ, ಅವನನ್ನು ತಮ್ಮ ರಾಜನನ್ನಾಗಿ ಮಾಡಲು ಅಪೇಕ್ಷೆಪಟ್ಟರು. ಮತ್ತೊಂದು ಪಕ್ಷದವರು ಒಮ್ರಿಯನ್ನು ಅನುಸರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆ ಕಾಲದಲ್ಲಿ ಇಸ್ರಾಯೇಲರೊಳಗೆ ಎರಡು ಪಕ್ಷಗಳುಂಟಾದವು. ಒಂದು ಪಕ್ಷದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅವನನ್ನು ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು. ಇನ್ನೊಂದು ಪಕ್ಷದವರು ಒಮ್ರಿಯನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆ ಕಾಲದಲ್ಲಿ ಇಸ್ರಯೇಲರಲ್ಲಿ ಎರಡು ಪಂಗಡಗಳಿದ್ದವು; ಒಂದು ಪಂಗಡದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು; ಇನ್ನೊಂದು ಪಂಗಡದವರು ಒಮ್ರಿಯನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಎರಡು ಪಕ್ಷಗಳುಂಟಾದವು; ಒಂದು ಪಕ್ಷದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅವನನ್ನು ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು; ಇನ್ನೊಂದು ಪಕ್ಷದವರು ಒಮ್ರಿಯನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆ ಕಾಲದಲ್ಲಿ ಇಸ್ರಾಯೇಲರೊಳಗೆ ಎರಡು ಪಕ್ಷಗಳುಂಟಾದವು, ಅರ್ಧ ಜನರು ಗೀನಾತನ ಮಗ ತಿಬ್ನಿಯನ್ನು ಅರಸನನ್ನಾಗಿ ಮಾಡಲು ಅವನ ಹಿಂದೆ ಹೋದರು, ಅರ್ಧ ಜನರು ಒಮ್ರಿಯ ಹಿಂದೆ ಹೋದರು. ಅಧ್ಯಾಯವನ್ನು ನೋಡಿ |