ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”
ಅಹಾಬನು ಅಶೇರ ದೇವತೆಯನ್ನು ಆರಾಧಿಸಲು ಒಂದು ವಿಶೇಷ ಸ್ತಂಭವನ್ನು ನೆಡಿಸಿದನು. ಹೀಗೆ ಎಷ್ಟೋ ಕೆಟ್ಟಕಾರ್ಯಗಳನ್ನು ಮಾಡಿ ತನ್ನ ಮುಂಚೆ ಇದ್ದ ಇಸ್ರೇಲ್ ರಾಜರುಗಳಿಗಿಂತಲೂ ಹೆಚ್ಚಾಗಿ ಇಸ್ರೇಲ್ ದೇವರಾದ ಯೆಹೋವನನ್ನು ರೇಗಿಸಿದನು.
ಆದರೆ ನೀನು ಅನೇಕ ಪಾಪಗಳನ್ನು ಮಾಡಿರುವೆ. ನಿನಗಿಂತಲೂ ಮೊದಲು ಆಳಿದವರ ಪಾಪಗಳಿಗಿಂತ ನಿನ್ನ ಪಾಪಗಳು ಹೆಚ್ಚು ಭಯಂಕರವಾಗಿವೆ. ನೀನು ನನ್ನನ್ನು ಅನುಸರಿಸುವುದನ್ನು ಬಿಟ್ಟುಬಿಟ್ಟೆ. ನೀನು ವಿಗ್ರಹಗಳನ್ನು ಮತ್ತು ಅನ್ಯದೇವರುಗಳನ್ನು ನಿರ್ಮಿಸಿದೆ. ಇದು ನನ್ನಲ್ಲಿ ಹೆಚ್ಚು ಕೋಪವುಂಟುಮಾಡಿತು.
ಅಹಾಬನು ಮಾಡಿದಷ್ಟು ಪಾಪಗಳನ್ನು, ಇಲ್ಲವೆ ಕೆಟ್ಟಕಾರ್ಯಗಳನ್ನು ಮಾಡಿದ ಮನುಷ್ಯರು ಬೇರೆ ಯಾರೂ ಇಲ್ಲ. ಅವನು ಆ ಕಾರ್ಯಗಳನ್ನು ಮಾಡುವುದಕ್ಕೆ ಅವನ ಪತ್ನಿಯಾದ ಈಜೆಬೆಲಳು ಅವನನ್ನು ಒತ್ತಾಯಪಡಿಸಿದಳು.