1 ಅರಸುಗಳು 16:26 - ಪರಿಶುದ್ದ ಬೈಬಲ್26 ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅವನೂ ಮಾಡಿದನು, ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಆದ್ದರಿಂದ ಅವರು ಇಸ್ರೇಲಿನ ದೇವರಾದ ಯೆಹೋವನನ್ನು ಹೆಚ್ಚು ಕೋಪಗೊಳಿಸಿದರು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಆರಾಧಿಸಿದ್ದರಿಂದ ಯೆಹೋವನು ಕೋಪಗೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಇಸ್ರಾಯೇಲರು ವಿಗ್ರಹಗಳಿಂದ ತಮ್ಮ ದೇವರಾದ ಯೆಹೋವನಿಗೆ ಕೋಪ ಬರಿಸುವಂತೆ ಅವರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ಅವನೂ ನಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಇಸ್ರಯೇಲರು ವಿಗ್ರಹಗಳಿಂದ ತಮ್ಮ ದೇವರಾದ ಸರ್ವೇಶ್ವರನನ್ನು ರೇಗಿಸಿದಂತೆ ಅವರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗದಲ್ಲೇ ಇವನೂ ನಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಇಸ್ರಾಯೇಲ್ಯರು ವಿಗ್ರಹಗಳಿಂದ ತಮ್ಮ ದೇವರಾದ ಯೆಹೋವನನ್ನು ರೇಗಿಸುವಂತೆ ಅವರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ಇವನೂ ನಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವನು ನೆಬಾಟನ ಮಗ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು. ಅಧ್ಯಾಯವನ್ನು ನೋಡಿ |
“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.
ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”
ಯೆಹೋವನು ಪ್ರವಾದಿಯಾದ ಯೇಹುವಿಗೆ ಒಂದು ಸಂದೇಶವನ್ನು ನೀಡಿದನು. ಈ ಸಂದೇಶವು ಬಾಷನ ಮತ್ತು ಅವನ ಕುಟುಂಬದ ವಿರುದ್ಧವಾಗಿತ್ತು. ಬಾಷನು ಯೆಹೋವನ ವಿರುದ್ಧವಾಗಿ ದುರಾಚಾರವನ್ನೆಸಗಿದನು. ಇದು ಯೆಹೋವನಿಗೆ ಹೆಚ್ಚು ಕೋಪವನ್ನು ಉಂಟುಮಾಡಿತು. ಯಾರೊಬ್ಬಾಮನ ಕುಟುಂಬವು ಅವನಿಗಿಂತ ಮುಂಚೆ ಮಾಡಿದ ಕಾರ್ಯಗಳನ್ನೇ ಬಾಷನೂ ಮಾಡಿದನು. ಬಾಷನು ಯಾರೊಬ್ಬಾಮನ ಕುಟುಂಬದವರನ್ನೆಲ್ಲಾ ಕೊಂದುಹಾಕಿದ್ದಕ್ಕಾಗಿಯೂ ಯೆಹೋವನು ಕೋಪಗೊಂಡನು.
ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”