Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:30 - ಪರಿಶುದ್ದ ಬೈಬಲ್‌

30 ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಅಹಾಬನು ಮಾಡಿದನು. ಅವನಿಗಿಂತಲೂ ಮುಂಚೆ ಇದ್ದ ರಾಜರುಗಳಲ್ಲೆಲ್ಲಾ ಅಹಾಬನೇ ಅತ್ಯಂತ ಕೆಟ್ಟವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವನು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನಾಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಇವನು ತನ್ನ ಹಿಂದಿನ ಅಧಿಕಾರಿಗಳೆಲ್ಲರಿಗಿಂತಲೂ ದುಷ್ಟನು. ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇವನು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನಾಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಒಮ್ರಿಯ ಮಗ ಅಹಾಬನು ತನಗೆ ಮುಂಚೆ ಇದ್ದ ಎಲ್ಲರಿಗಿಂತ ಯೆಹೋವ ದೇವರ ಮುಂದೆ ಹೆಚ್ಚು ಕೆಟ್ಟತನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:30
11 ತಿಳಿವುಗಳ ಹೋಲಿಕೆ  

ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನೆಲ್ಲ ಒಮ್ರಿಯು ಮಾಡಿದನು. ಒಮ್ರಿಯು ಅವನಿಗಿಂತಲೂ ಮುಂಚೆ ಇದ್ದ ರಾಜರುಗಳಲ್ಲೆಲ್ಲಾ ಅತ್ಯಂತ ಕೆಟ್ಟವನು.


ಅಹಾಬನು ಮಾಡಿದಷ್ಟು ಪಾಪಗಳನ್ನು, ಇಲ್ಲವೆ ಕೆಟ್ಟಕಾರ್ಯಗಳನ್ನು ಮಾಡಿದ ಮನುಷ್ಯರು ಬೇರೆ ಯಾರೂ ಇಲ್ಲ. ಅವನು ಆ ಕಾರ್ಯಗಳನ್ನು ಮಾಡುವುದಕ್ಕೆ ಅವನ ಪತ್ನಿಯಾದ ಈಜೆಬೆಲಳು ಅವನನ್ನು ಒತ್ತಾಯಪಡಿಸಿದಳು.


ಆದರೆ ನೀನು ಅನೇಕ ಪಾಪಗಳನ್ನು ಮಾಡಿರುವೆ. ನಿನಗಿಂತಲೂ ಮೊದಲು ಆಳಿದವರ ಪಾಪಗಳಿಗಿಂತ ನಿನ್ನ ಪಾಪಗಳು ಹೆಚ್ಚು ಭಯಂಕರವಾಗಿವೆ. ನೀನು ನನ್ನನ್ನು ಅನುಸರಿಸುವುದನ್ನು ಬಿಟ್ಟುಬಿಟ್ಟೆ. ನೀನು ವಿಗ್ರಹಗಳನ್ನು ಮತ್ತು ಅನ್ಯದೇವರುಗಳನ್ನು ನಿರ್ಮಿಸಿದೆ. ಇದು ನನ್ನಲ್ಲಿ ಹೆಚ್ಚು ಕೋಪವುಂಟುಮಾಡಿತು.


ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೋರಾಮನು ಮಾಡಿದನು. ಆದರೆ ಯೋರಾಮನು ಅವನ ತಂದೆತಾಯಿಗಳಂತೆ ಇರಲಿಲ್ಲ. ಸುಳ್ಳುದೇವರಾದ ಬಾಳನನ್ನು ಪೂಜಿಸಲು ತನ್ನ ತಂದೆಯು ನಿರ್ಮಿಸಿದ್ದ ಸ್ತಂಭವನ್ನು ಅವನು ಕಿತ್ತುಹಾಕಿಸಿದನು.


ಅಹಾಬನು ಅಶೇರ ದೇವತೆಯನ್ನು ಆರಾಧಿಸಲು ಒಂದು ವಿಶೇಷ ಸ್ತಂಭವನ್ನು ನೆಡಿಸಿದನು. ಹೀಗೆ ಎಷ್ಟೋ ಕೆಟ್ಟಕಾರ್ಯಗಳನ್ನು ಮಾಡಿ ತನ್ನ ಮುಂಚೆ ಇದ್ದ ಇಸ್ರೇಲ್ ರಾಜರುಗಳಿಗಿಂತಲೂ ಹೆಚ್ಚಾಗಿ ಇಸ್ರೇಲ್ ದೇವರಾದ ಯೆಹೋವನನ್ನು ರೇಗಿಸಿದನು.


ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅಹಾಬನು ಮಾಡಿದರೂ ಅವು ಅವನಿಗೆ ಸಾಕಾಗಲಿಲ್ಲ. ಆದ್ದರಿಂದ ಅಹಾಬನು ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾದನು. ಎತ್ಬಾಳನು ಚೀದೋನ್ಯರ ರಾಜನಾಗಿದ್ದನು. ನಂತರ ಅಹಾಬನು ಬಾಳ್ ದೇವರನ್ನು ಪೂಜಿಸಿ ಅದರ ಸೇವೆ ಮಾಡಲಾರಂಭಿಸಿದನು.


ಆಸನು ಯೆಹೂದದ ರಾಜನಾಗಿದ್ದ ಮೂವತ್ತೆಂಟನೇ ವರ್ಷದಲ್ಲಿ ಒಮ್ರಿಯ ಮಗನಾದ ಅಹಾಬನು ಇಸ್ರೇಲಿನ ರಾಜನಾದನು. ಅಹಾಬನು ಇಸ್ರೇಲನ್ನು ಸಮಾರ್ಯ ಪಟ್ಟಣದಲ್ಲಿ ಇಪ್ಪತ್ತೆರಡು ವರ್ಷ ಆಳಿದನು.


ಅಹಜ್ಯನು ತನ್ನ ತಂದೆಯಂತೆಯೇ ಸುಳ್ಳುದೇವರಾದ ಬಾಳನನ್ನು ಪೂಜಿಸಿ ಅವನ ಸೇವೆ ಮಾಡಿದನು; ಇಸ್ರೇಲಿನ ದೇವರಾದ ಯೆಹೋವನನ್ನು ರೇಗಿಸಿದನು. ಯೆಹೋವನು ಮೊದಲು ಅಹಜ್ಯನ ತಂದೆಯ ಮೇಲೆ ಕೋಪಗೊಂಡಿದ್ದಂತೆ, ಅಹಜ್ಯನ ಮೇಲೂ ಕೋಪಗೊಂಡನು.


ಯೋರಾಮನು ಯೇಹುವನ್ನು, “ಶುಭವಾರ್ತೆಯುಂಟೋ?” ಎಂದು ಕೇಳಿದನು. ಯೇಹುವು, “ನಿನ್ನ ತಾಯಿಯಾದ ಈಜೆಬೆಲಳು ಅನೇಕ ಅನೈತಿಕ ಮತ್ತು ಮಾಂತ್ರಿಕ ಕಾರ್ಯಗಳನ್ನು ಮಾಡುತ್ತಿರುವ ತನಕ ಶುಭವಿರುವುದಿಲ್ಲ” ಎಂದು ಉತ್ತರಿಸಿದನು.


ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಹೋಶೇಯನು ಮಾಡಿದನು. ಆದರೆ ಹೋಶೇಯನು ಅವನಿಗಿಂತ ಮೊದಲು ಇಸ್ರೇಲನ್ನು ಆಳಿದ ರಾಜರುಗಳಷ್ಟು ಕೆಟ್ಟವನಲ್ಲ.


ಇಸ್ರೇಲರ ರಾಜರುಗಳು ಜೀವಿಸಿದ್ದ ರೀತಿಯಲ್ಲಿ ನೀನು ಜೀವಿಸುತ್ತಿರುವೆ. ಯೆಹೂದ ದೇಶದಲ್ಲಿಯೂ ಜೆರುಸಲೇಮಿನಲ್ಲಿಯೂ ವಾಸಿಸುವ ಜನರು ನನ್ನ ಚಿತ್ತಕ್ಕನುಸಾರವಾಗಿ ಜೀವಿಸದಂತೆ ನೀನು ಮಾಡುತ್ತಿರುವೆ. ಅಹಾಬನೂ ಅವನ ಕುಟುಂಬದವರೂ ಹೀಗೆಯೇ ಮಾಡಿದರು. ಅವರು ದೇವರಿಗೆ ಅಪನಂಬಿಗಸ್ತರಾಗಿದ್ದರು. ನೀನು ನಿನ್ನ ತಮ್ಮಂದಿರನ್ನು ಕೊಂದುಹಾಕಿದೆ. ಅವರು ನಿನಗಿಂತಲೂ ಉತ್ತಮರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು