Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:31 - ಪರಿಶುದ್ದ ಬೈಬಲ್‌

31 ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅಹಾಬನು ಮಾಡಿದರೂ ಅವು ಅವನಿಗೆ ಸಾಕಾಗಲಿಲ್ಲ. ಆದ್ದರಿಂದ ಅಹಾಬನು ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾದನು. ಎತ್ಬಾಳನು ಚೀದೋನ್ಯರ ರಾಜನಾಗಿದ್ದನು. ನಂತರ ಅಹಾಬನು ಬಾಳ್ ದೇವರನ್ನು ಪೂಜಿಸಿ ಅದರ ಸೇವೆ ಮಾಡಲಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವುದು ಅಲ್ಪ ಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಇವನು ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗದಲ್ಲಿ ನಡೆದದ್ದು ಸಾಲದೆಂದು, ಸಿದೋನ್ಯರ ಅರಸ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಇವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವದು ಅಲ್ಪಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ಬಾಳ್‍ದೇವರನ್ನು ಪೂಜಿಸತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನೆಬಾಟನ ಮಗ ಯಾರೊಬ್ಬಾಮನ ಪಾಪಗಳಲ್ಲಿ ನಡೆಯುವುದು ಅವನಿಗೆ ಅಲ್ಪವಾಗಿತ್ತು. ಅವನು ಸೀದೋನ್ಯರ ಅರಸನಾದ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:31
35 ತಿಳಿವುಗಳ ಹೋಲಿಕೆ  

ಜನರು ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸುವುದನ್ನು ನಿಲ್ಲಿಸಿದರು. ಅವರು ಚಿನ್ನದ ಎರಡು ಬಸವನ ಮೂರ್ತಿಗಳನ್ನು ನಿರ್ಮಿಸಿದರು. ಅವರು ಅಶೇರ ಸ್ತಂಭಗಳನ್ನು ನಿರ್ಮಿಸಿದರು. ಅವರು ಪರಲೋಕದ ಎಲ್ಲಾ ನಕ್ಷತ್ರಗಳನ್ನು ಮತ್ತು ಬಾಳ್ ದೇವರನ್ನು ಪೂಜಿಸಿದರು.


ಯೇಹು ಜನರನ್ನೆಲ್ಲ ಒಟ್ಟಾಗಿ ಸೇರಿಸಿ, “ಅಹಾಬನು ಬಾಳನನ್ನು ಸ್ವಲ್ಪ ಮಾತ್ರ ಸೇವಿಸಿದನು. ಆದರೆ ಯೇಹು ಬಾಳನನ್ನು ಅಧಿಕವಾಗಿ ಸೇವಿಸುತ್ತಾನೆ!


ಆ ಐದು ಜನರು ಹೊರಟರು. ಅವರು ಲಯಿಷ್ ನಗರಕ್ಕೆ ಬಂದರು. ಅಲ್ಲಿಯ ಜನರು ಸುರಕ್ಷಿತವಾಗಿರುವುದನ್ನು ಅವರು ನೋಡಿದರು. ಚೀದೋನ್ಯರು ಅವರನ್ನು ಆಳುತ್ತಿದ್ದರು. ಎಲ್ಲವೂ ಶಾಂತವಾಗಿತ್ತು; ಸಮಾಧಾನಕರವಾಗಿತ್ತು; ಸುಖಕರವಾಗಿತ್ತು. ಸಮೀಪದಲ್ಲಿ ಅವರನ್ನು ಪೀಡಿಸುವ ಶತ್ರುಗಳು ಇರಲಿಲ್ಲ. ಅವರು ಚೀದೋನ್ ನಗರದಿಂದ ಬಹಳ ದೂರ ಇದ್ದರು. ಅವರು ಆರಾಮಿನ ಜನರೊಡನೆ ಯಾವ ಒಪ್ಪಂದವನ್ನೂ ಇಟ್ಟುಕೊಂಡಿರಲಿಲ್ಲ.


ಇಸ್ರೇಲಿನ ಜನರು ದುಷ್ಕೃತ್ಯಗಳನ್ನು ಮಾಡಿದರು ಮತ್ತು ಸುಳ್ಳುದೇವರಾದ ಬಾಳನ ಸೇವೆ ಮಾಡಿದರು. ಯೆಹೋವನು ಇಸ್ರೇಲರ ಈ ದುಷ್ಕೃತ್ಯಗಳನ್ನು ನೋಡಿದನು.


ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ.


ನೀವು ಒಳ್ಳೆಯ ದೇಶದಲ್ಲಿ ಬೆಳೆಯುವ ಹುಲ್ಲನ್ನು ಮೇಯಬಹುದು. ಆದ್ದರಿಂದ ಬೇರೆ ಕುರಿಗಳು ಮೇಯಬೇಕಾದ ಹುಲ್ಲನ್ನು ನೀವು ಯಾಕೆ ತುಳಿದು ಹಾಳುಮಾಡುವಿರಿ? ನೀವು ಶುದ್ಧವಾದ ನೀರು ಬೇಕಾದಷ್ಟು ಕುಡಿಯಬಹುದು. ಆದರೆ ಬೇರೆ ಕುರಿಗಳು ನೀರು ಕುಡಿಯದಂತೆ ಯಾಕೆ ನೀರನ್ನು ಕದಡಿಸುತ್ತೀರಿ.


ಅವರಿಗಿಂತಲೂ ಹೆಚ್ಚು ಕೆಟ್ಟು ಹೋಗಲು ನಿನಗೆ ಸ್ವಲ್ಪ ಸಮಯವೇ ಸಾಕಾಯಿತು. ಅವರಿಗಿಂತಲೂ ಇನ್ನೂ ಭಯಂಕರವಾದ ಕೆಲಸಗಳನ್ನು ನೀನು ಮಾಡಿರುವೆ.


ದೇವರು ಹೇಳಿದ್ದೇನೆಂದರೆ, “ನನ್ನ ಮಕ್ಕಳಾಗಿದ್ದ ನಿನ್ನ ಪುತ್ರಪುತ್ರಿಯರನ್ನು ನೀನು ತೆಗೆದುಕೊಂಡು ಅವರನ್ನು ಆಹಾರವನ್ನಾಗಿ ವಿಗ್ರಹಗಳಿಗೆ ಯಜ್ಞ ಅರ್ಪಿಸಿದೆ. ನಿನ್ನ ಸೂಳೆತನವು ಸಾಕಾಗಿರಲಿಲ್ಲವೇ?


ಆಗ ದೇವರು ನನಗೆ, “ನರಪುತ್ರನೇ, ಅವರು ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಯೆಹೂದದ ಜನರಿಗೆ ತಾವು ಮಾಡುತ್ತಿರುವ ಈ ಭಯಂಕರ ಕೃತ್ಯಗಳು ಸಾಕಾಗಿಲ್ಲ. ಇಡೀ ದೇಶವು ದುಷ್ಟತನದಿಂದ ತುಂಬಿಹೋಗಿದೆ. ಅವರು ನನ್ನನ್ನು ಇನ್ನೂ ಹೆಚ್ಚಿಗೆ ಕೋಪಗೊಳಿಸುತ್ತಿದ್ದಾರೆ. ವಿಗ್ರಹಾರಾಧನೆಯ ಪ್ರತೀಕವಾಗಿ ತಮ್ಮ ಮೂಗುಗಳಿಗೆ ಎಳೆಯ ಕೊಂಬೆಗಳನ್ನು ಸೋಕಿಸುತ್ತಾರೆ.


ಆಗ ಯೆಶಾಯನು ಹೇಳಿದ್ದೇನೆಂದರೆ, “ದಾವೀದನ ಮನೆತನದವರೇ, ಕಿವಿಗೊಟ್ಟು ಕೇಳಿರಿ. ನೀವು ಜನರ ತಾಳ್ಮೆಯನ್ನು ಪರೀಕ್ಷಿಸುತ್ತೀರಿ. ಆದರೆ ಅದು ನಿಮಗೆ ದೊಡ್ಡ ವಿಷಯವಲ್ಲ. ಆದರೆ ಈಗ ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದೀರಿ.


ಈಗ ಕರ್ಮೆಲ್ ಬೆಟ್ಟದ ಮೇಲೆ ನನ್ನನ್ನು ಭೇಟಿಮಾಡಲು ಎಲ್ಲಾ ಇಸ್ರೇಲರಿಗೆ ತಿಳಿಸು. ಬಾಳನ ನಾನೂರೈವತ್ತು ಮಂದಿ ಪ್ರವಾದಿಗಳನ್ನು ಆ ಸ್ಥಳಕ್ಕೆ ಕರೆದುಕೊಂಡು ಬಾ. ಸುಳ್ಳುದೇವತೆಯಾದ ಅಶೇರಳ ನಾನೂರು ಮಂದಿ ಪ್ರವಾದಿಗಳನ್ನೂ ಕರೆದುಕೊಂಡು ಬಾ. ಆ ಪ್ರವಾದಿಗಳನ್ನು ರಾಣಿಯಾದ ಈಜೆಬೆಲಳು ಪೋಷಣೆ ಮಾಡುತ್ತಿದ್ದಾಳೆ” ಎಂದು ಹೇಳಿದನು.


ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)


ಚೀದೋನ್ಯರು, ಅಮಾಲೇಕ್ಯರು, ಮಿದ್ಯಾನ್ಯರು ನಿಮ್ಮನ್ನು ಪೀಡಿಸಿದಾಗ ನನಗೆ ಮೊರೆಯಿಟ್ಟಿರಿ. ಅವರಿಂದಲೂ ನಾನು ನಿಮ್ಮನ್ನು ರಕ್ಷಿಸಿದೆ.


ಇಸ್ರೇಲರು ಮತ್ತೆ ದೇವರಿಗೆ ವಿರೋಧವಾಗಿ ದುಷ್ಕೃತ್ಯಗಳನ್ನು ಮಾಡಿದರು. ಅವರು ಸುಳ್ಳುದೇವರಾದ ಬಾಳನನ್ನೂ ಸುಳ್ಳುದೇವತೆಯಾದ ಅಷ್ಟೋರೆತಳನ್ನೂ ಪೂಜಿಸತೊಡಗಿದರು. ಅವರು ಅರಾಮ್ಯರ, ಚೀದೋನ್ಯರ, ಮೋವಾಬ್ಯರ, ಅಮ್ಮೋನಿಯರ ಮತ್ತು ಫಿಲಿಷ್ಟಿಯರ ದೇವರುಗಳನ್ನು ಸಹ ಪೂಜಿಸಿದರು. ಇಸ್ರೇಲರು ಯೆಹೋವನನ್ನು ಮರೆತುಬಿಟ್ಟು ಆತನ ಸೇವೆಯನ್ನು ನಿಲ್ಲಿಸಿಬಿಟ್ಟರು.


ಇಸ್ರೇಲರ ದುಷ್ಕೃತ್ಯಗಳನ್ನು ಯೆಹೋವನು ನೋಡಿದನು. ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಮರೆತು ಬಾಳ್ ಮತ್ತು ಅಶೇರ್ ಎಂಬ ಸುಳ್ಳುದೇವರುಗಳ ಸೇವೆ ಮಾಡುತ್ತಿದ್ದರು.


ಇಸ್ರೇಲರ ದೇವರು ನಿಮ್ಮನ್ನು ಸರ್ವಸಮೂಹದಿಂದ ಆರಿಸಿಕೊಂಡದ್ದಕ್ಕಾಗಿ ನೀವು ಸಂತೋಷಪಡಬೇಕು. ದೇವರ ಪವಿತ್ರ ಗುಡಾರಕ್ಕೆ ಸಂಬಂಧಿಸಿದ ಕೆಲಸವನ್ನು ಮಾಡುವುದಕ್ಕೂ ಇಸ್ರೇಲರ ಸೇವೆಯನ್ನು ಮಾಡುವುದಕ್ಕೂ ಮತ್ತು ಯಜ್ಞಗಳನ್ನು ಸಿದ್ಧಪಡಿಸುವುದರಲ್ಲಿ ಅವರಿಗೆ ಸಹಾಯಮಾಡುವುದಕ್ಕೂ ಯೆಹೋವನು ನಿಮ್ಮನ್ನು ತನ್ನ ಸಮೀಪಕ್ಕೆ ಬರಗೊಡಿಸಿದ್ದಾನೆ. ಅದು ನಿಮಗೆ ಸಾಕಾಗಲಿಲ್ಲವೇ?


ಲೇಯಳು, “ನೀನು ಈಗಾಗಲೇ ನನ್ನ ಗಂಡನನ್ನು ತೆಗೆದುಕೊಂಡಿರುವೆ. ಈಗ ನನ್ನ ಮಗನು ತಂದಿರುವ ಹೂವುಗಳನ್ನು ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವೆ” ಎಂದು ಹೇಳಿದಳು. ರಾಹೇಲಳು, “ನಿನ್ನ ಮಗನು ತಂದಿರುವ ಹೂವುಗಳನ್ನು ನನಗೆ ಕೊಟ್ಟರೆ, ನೀನು ಈ ರಾತ್ರಿ ಯಾಕೋಬನ ಸಂಗಡ ಮಲಗಿಕೊಳ್ಳಬಹುದು” ಎಂದು ಹೇಳಿದಳು.


ಈ ಹೆಣ್ಣುಮಕ್ಕಳ ಸೌಂದರ್ಯವನ್ನು ಕಂಡ ದೇವಪುತ್ರರು ತಮಗೆ ಬೇಕಾದ ಸ್ತ್ರೀಯರನ್ನು ಆರಿಸಿಕೊಂಡು ಮದುವೆಯಾದರು. ಈ ಸ್ತ್ರೀಯರು ಮಕ್ಕಳನ್ನು ಹೆತ್ತರು. ಆ ಕಾಲದಲ್ಲಿ ಮತ್ತು ಆ ಕಾಲದ ನಂತರ ನೆಫೇಲಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಪ್ರಸಿದ್ಧರಾದ ಪರಾಕ್ರಮಶಾಲಿಗಳಾಗಿದ್ದರು. ಬಳಿಕ ಯೆಹೋವನು, “ಜನರು ಕೇವಲ ಮಾನವರಷ್ಟೆ; ನನ್ನ ಆತ್ಮವು ಅವರಿಂದ ಯಾವಾಗಲೂ ತೊಂದರೆಗೆ ಗುರಿಯಾಗಕೂಡದು. ಅವರು 120 ವರ್ಷ ಬದುಕುವಂತೆ ಮಾಡುವೆನು” ಅಂದುಕೊಂಡನು.


“ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ಯೆಹೋವನು ನಿಮ್ಮನ್ನು ನಡೆಸುವನು. ನಿಮಗಿಂತ ಬಲಿಷ್ಠವಾಗಿದ್ದು ಅಲ್ಲಿ ವಾಸಿಸುತ್ತಿರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ಆ ದೇಶದಿಂದ ನಿಮಗಾಗಿ ಹೊರಗಟ್ಟುವನು.


ಎಲೀಯನು, “ಇಸ್ರೇಲಿನ ತೊಂದರೆಗೆ ನಾನು ಕಾರಣನಲ್ಲ. ನೀನು ಮತ್ತು ನಿನ್ನ ತಂದೆಯ ಕುಟುಂಬವು ಈ ತೊಂದರೆಗಳಿಗೆಲ್ಲ ಕಾರಣ. ಯೆಹೋವನ ಆಜ್ಞೆಗಳಿಗೆ ವಿಧೇಯನಾಗದೆ ಸುಳ್ಳುದೇವರುಗಳನ್ನು ಅನುಸರಿಸತೊಡಗಿದ್ದರಿಂದ ಆ ತೊಂದರೆಗಳಿಗೆಲ್ಲಾ ನೀನೇ ಕಾರಣನಾಗಿರುವೆ.


ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೋರಾಮನು ಮಾಡಿದನು. ಆದರೆ ಯೋರಾಮನು ಅವನ ತಂದೆತಾಯಿಗಳಂತೆ ಇರಲಿಲ್ಲ. ಸುಳ್ಳುದೇವರಾದ ಬಾಳನನ್ನು ಪೂಜಿಸಲು ತನ್ನ ತಂದೆಯು ನಿರ್ಮಿಸಿದ್ದ ಸ್ತಂಭವನ್ನು ಅವನು ಕಿತ್ತುಹಾಕಿಸಿದನು.


ಮನಸ್ಸೆಯು ತನ್ನ ತಂದೆಯಾದ ಹಿಜ್ಕೀಯನು ನಾಶಪಡಿಸಿದ್ದ ಉನ್ನತಸ್ಥಳಗಳನ್ನು ಮತ್ತೆ ನಿರ್ಮಿಸಿದನು. ಮನಸ್ಸೆಯು ಇಸ್ರೇಲಿನ ರಾಜನಾದ ಅಹಾಬನಂತೆ ಬಾಳನಿಗಾಗಿ ಯಜ್ಞವೇದಿಕೆಯನ್ನು ಮತ್ತು ಅಶೇರಸ್ತಂಭಗಳನ್ನು ನಿರ್ಮಿಸಿದನು. ಮನಸ್ಸೆಯು ಪರಲೋಕದ ನಕ್ಷತ್ರಗಳನ್ನು ಆರಾಧಿಸಿ ಅವುಗಳ ಸೇವೆಮಾಡಿದನು.


ಇಸ್ರೇಲರ ರಾಜರುಗಳು ಜೀವಿಸಿದ್ದ ರೀತಿಯಲ್ಲಿ ನೀನು ಜೀವಿಸುತ್ತಿರುವೆ. ಯೆಹೂದ ದೇಶದಲ್ಲಿಯೂ ಜೆರುಸಲೇಮಿನಲ್ಲಿಯೂ ವಾಸಿಸುವ ಜನರು ನನ್ನ ಚಿತ್ತಕ್ಕನುಸಾರವಾಗಿ ಜೀವಿಸದಂತೆ ನೀನು ಮಾಡುತ್ತಿರುವೆ. ಅಹಾಬನೂ ಅವನ ಕುಟುಂಬದವರೂ ಹೀಗೆಯೇ ಮಾಡಿದರು. ಅವರು ದೇವರಿಗೆ ಅಪನಂಬಿಗಸ್ತರಾಗಿದ್ದರು. ನೀನು ನಿನ್ನ ತಮ್ಮಂದಿರನ್ನು ಕೊಂದುಹಾಕಿದೆ. ಅವರು ನಿನಗಿಂತಲೂ ಉತ್ತಮರಾಗಿದ್ದರು.


ಆಶೇರ್ಯರು ಅಕ್ಕೋ, ಚೀದೋನ್, ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಎಂಬ ನಗರಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಲಿಲ್ಲ.


ತನ್ನ ಪೂರ್ವಿಕರು ಅನುಸರಿಸಿದ ದೇವರನ್ನು ನಿರೀಕ್ಷಿಸಿದನು. ಆತನ ಆಜ್ಞೆಗಳನ್ನು ಅನುಸರಿಸಿದನು. ಇಸ್ರೇಲಿ ಅರಸರು ನಡೆದಂತೆ ಇವನು ನಡೆಯಲಿಲ್ಲ.


ಅಲ್ಲಿ ಆಕೆಗೆ ನಾನು ದ್ರಾಕ್ಷಿತೋಟಗಳನ್ನು ಕೊಡುವೆನು. ಆಕೆಗೆ ಆಕೋರ್ ತಗ್ಗುಪ್ರದೇಶವನ್ನು ನಿರೀಕ್ಷೆಯ ಬಾಗಿಲಾಗಿ ಕೊಡುವೆನು. ಆಗ ಅವಳು ತಾನು ಈಜಿಪ್ಟಿನಿಂದ ಹೊರಬಂದ ತನ್ನ ಯೌವನದ ದಿನಗಳಲ್ಲಿ ಹೇಗೆ ನನ್ನ ಸಂಗಡ ಮಾತನಾಡಿದಳೋ ಹಾಗೆಯೇ ನನ್ನೊಂದಿಗೆ ಮಾತನಾಡುವಳು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು