1 ಅರಸುಗಳು 16:33 - ಪರಿಶುದ್ದ ಬೈಬಲ್33 ಅಹಾಬನು ಅಶೇರ ದೇವತೆಯನ್ನು ಆರಾಧಿಸಲು ಒಂದು ವಿಶೇಷ ಸ್ತಂಭವನ್ನು ನೆಡಿಸಿದನು. ಹೀಗೆ ಎಷ್ಟೋ ಕೆಟ್ಟಕಾರ್ಯಗಳನ್ನು ಮಾಡಿ ತನ್ನ ಮುಂಚೆ ಇದ್ದ ಇಸ್ರೇಲ್ ರಾಜರುಗಳಿಗಿಂತಲೂ ಹೆಚ್ಚಾಗಿ ಇಸ್ರೇಲ್ ದೇವರಾದ ಯೆಹೋವನನ್ನು ರೇಗಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಇದಲ್ಲದೆ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದನು. ಹೀಗೆ ಇನ್ನೂ ಎಷ್ಟೋ ಕೆಟ್ಟ ಕೆಲಸಗಳನ್ನು ಮಾಡಿ, ಮುಂಚೆ ಇದ್ದ ಎಲ್ಲಾ ಇಸ್ರಾಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಬರುವಂತೆ ಮಾಡಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಇದಲ್ಲದೆ, ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿದನು; ಹೀಗೆ ಇನ್ನು ಎಷ್ಟೋ ಅಧರ್ಮ ಕೆಲಸಗಳನ್ನು ಮಾಡಿ, ಮುಂದೆಯಿದ್ದ ಎಲ್ಲ ಇಸ್ರಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ರೇಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಇದಲ್ಲದೆ ಅಶೇರವಿಗ್ರಹಸ್ತಂಭವನ್ನು ನಿಲ್ಲಿಸಿದನು; ಹೀಗೆ ಇನ್ನು ಎಷ್ಟೋ ಕೆಟ್ಟ ಕೆಲಸಗಳನ್ನು ಮಾಡಿ ಮುಂಚೆ ಇದ್ದ ಎಲ್ಲಾ ಇಸ್ರಾಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಾಯೇಲ್ ದೇವರಾದ ಯೆಹೋವನನ್ನು ರೇಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅಹಾಬನು ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದನು. ಹೀಗೆಯೇ ಅಹಾಬನು ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪ ಉಕ್ಕುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕವಾಗಿ ಕೆಟ್ಟತನ ಮಾಡಿದನು. ಅಧ್ಯಾಯವನ್ನು ನೋಡಿ |
ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.