1 ಅರಸುಗಳು 16:8 - ಪರಿಶುದ್ದ ಬೈಬಲ್8 ಆಸನು ಯೆಹೂದದ ರಾಜನಾದ ಇಪ್ಪತ್ತಾರನೆಯ ವರ್ಷದಲ್ಲಿ ಏಲನು ಇಸ್ರೇಲಿನ ರಾಜನಾದನು. ಏಲನು ಬಾಷನ ಮಗ. ಅವನು ತಿರ್ಚದಲ್ಲಿ ಎರಡು ವರ್ಷ ಆಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತಾರನೆಯ ವರ್ಷದಲ್ಲಿ ಬಾಷನ ಮಗನಾದ ಏಲನು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಯೆಹೂದ್ಯರ ಅರಸ ಆಸನ ಆಳ್ವಿಕೆಯ ಇಪ್ಪತ್ತಾರನೆಯ ವರ್ಷದಲ್ಲಿ ಬಾಷನ ಮಗ ಏಲನು ತಿರ್ಚದಲ್ಲಿ ಇಸ್ರಯೇಲರ ಅರಸನಾಗಿ ಎರಡು ವರ್ಷ ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೂದ್ಯರ ಅರಸನಾದ ಆಸನ ಆಳಿಕೆಯ ಇಪ್ಪತ್ತಾರನೆಯ ವರುಷದಲ್ಲಿ ಬಾಷನ ಮಗನಾದ ಏಲನು ತಿರ್ಚದಲ್ಲಿ ಇಸ್ರಾಯೇಲ್ಯರ ಅರಸನಾಗಿ ಎರಡು ವರುಷ ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೂದದ ಅರಸನಾದ ಆಸನ ಇಪ್ಪತ್ತಾರನೆಯ ವರುಷದಲ್ಲಿ ಬಾಷನ ಮಗ ಏಲನು ಇಸ್ರಾಯೇಲಿನ ಮೇಲೆ ತಿರ್ಚದಲ್ಲಿ ಎರಡು ವರ್ಷ ಆಳಿದನು. ಅಧ್ಯಾಯವನ್ನು ನೋಡಿ |
ಯೆಹೋವನು ಪ್ರವಾದಿಯಾದ ಯೇಹುವಿಗೆ ಒಂದು ಸಂದೇಶವನ್ನು ನೀಡಿದನು. ಈ ಸಂದೇಶವು ಬಾಷನ ಮತ್ತು ಅವನ ಕುಟುಂಬದ ವಿರುದ್ಧವಾಗಿತ್ತು. ಬಾಷನು ಯೆಹೋವನ ವಿರುದ್ಧವಾಗಿ ದುರಾಚಾರವನ್ನೆಸಗಿದನು. ಇದು ಯೆಹೋವನಿಗೆ ಹೆಚ್ಚು ಕೋಪವನ್ನು ಉಂಟುಮಾಡಿತು. ಯಾರೊಬ್ಬಾಮನ ಕುಟುಂಬವು ಅವನಿಗಿಂತ ಮುಂಚೆ ಮಾಡಿದ ಕಾರ್ಯಗಳನ್ನೇ ಬಾಷನೂ ಮಾಡಿದನು. ಬಾಷನು ಯಾರೊಬ್ಬಾಮನ ಕುಟುಂಬದವರನ್ನೆಲ್ಲಾ ಕೊಂದುಹಾಕಿದ್ದಕ್ಕಾಗಿಯೂ ಯೆಹೋವನು ಕೋಪಗೊಂಡನು.