1 ಅರಸುಗಳು 17:1 - ಪರಿಶುದ್ದ ಬೈಬಲ್1 ಎಲೀಯನು ಗಿಲ್ಯಾದಿನ ತಿಷ್ಬೀ ಪಟ್ಟಣದ ಒಬ್ಬ ಪ್ರವಾದಿ. ಎಲೀಯನು ರಾಜನಾದ ಅಹಾಬನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಸೇವಕನಾಗಿದ್ದೇನೆ. ಮುಂದಿನ ಕೆಲವು ವರ್ಷಗಳವರೆಗೆ ಹಿಮವಾಗಲಿ ಮಳೆಯಾಗಲಿ ಬೀಳುವುದಿಲ್ಲವೆಂದು ನಾನು ಆತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ಬೀಳುವಂತೆ ಮಳೆಗೆ ಆಜ್ಞಾಪಿಸಿದರೆ ಮಾತ್ರ ಅದು ಬೀಳುತ್ತದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ - ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್‍ದೇವರಾದ ಯೆಹೋವನಾಣೆ, ನಾನು ಸೂಚಿಸಿದ ಹೊರತು ಇಂದಿನಿಂದ ಕೆಲವು ವರುಷಗಳವರೆಗೆ ಮಳೆಯಾಗಲಿ ಮಂಜಾಗಲಿ ಬೀಳುವದಿಲ್ಲ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯ ಊರಿನವನಾದ ಎಲೀಯನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಮಾತಿನ ಪ್ರಕಾರ ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳವರೆಗೆ ಮಂಜಾಗಲಿ ಅಥವಾ ಮಳೆಯಾಗಲಿ ಬೀಳುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |
ಆಗ ಯೆಫ್ತಾಹನು ಗಿಲ್ಯಾದಿನ ಜನರನ್ನು ಒಂದೆಡೆ ಸೇರಿಸಿದನು. ಅವರು ಎಫ್ರಾಯೀಮ್ಯರ ವಿರುದ್ಧ ಯುದ್ಧ ಮಾಡಿದರು. ಏಕೆಂದರೆ ಎಫ್ರಾಯೀಮ್ಯರು ಗಿಲ್ಯಾದ್ಯರನ್ನು ಅವಮಾನ ಮಾಡಿದ್ದರು. ಅವರು, “ಗಿಲ್ಯಾದಿನವರಾದ ನೀವು ಎಫ್ರಾಯೀಮ್ಯರಲ್ಲಿ ಬದುಕಿ ಉಳಿದವರೇ ಹೊರತು ಬೇರೆಯವರಲ್ಲ. ನಿಮಗೆ ನಿಮ್ಮ ಸ್ವಂತ ಪ್ರದೇಶವೂ ಇಲ್ಲ. ನಿಮ್ಮ ಒಂದು ಭಾಗವು ಎಫ್ರಾಯೀಮ್ ಕುಲಕ್ಕೆ ಸೇರಿದೆ; ಇನ್ನೊಂದು ಭಾಗವು ಮನಸ್ಸೆ ಕುಲಕ್ಕೆ ಸೇರಿದೆ” ಎಂದಿದ್ದರು. ಅವರು ಹೀಗೆ ಅಂದದ್ದರಿಂದ ಗಿಲ್ಯಾದಿನ ಜನರು ಎಫ್ರಾಯೀಮ್ ಜನರನ್ನು ಸೋಲಿಸಿದರು.
ಆಗ ಯೆಹೋವನು ಹೇಳಿದನು: “ಯೆರೆಮೀಯನೇ, ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನಾನು ನಿನ್ನನ್ನು ದಂಡಿಸುವುದಿಲ್ಲ. ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನೀನು ನನ್ನ ಸೇವೆ ಮಾಡಬಹುದು. ಹುರುಳಿಲ್ಲದ ಮಾತುಗಳನ್ನು ಬಿಟ್ಟು ಮುಖ್ಯವಾದ ವಿಷಯಗಳನ್ನು ಕುರಿತು ಮಾತನಾಡುವದಾದರೆ ನೀನು ನನ್ನ ಪರವಾಗಿ ಮಾತನಾಡಬಹುದು. ಯೆರೆಮೀಯನೇ, ಯೆಹೂದದ ಜನರು ಬದಲಾವಣೆ ಹೊಂದಿ ನಿನ್ನಲ್ಲಿಗೆ ಬರಬೇಕು. ಆದರೆ ನೀನು ಬದಲಾವಣೆ ಹೊಂದಿ ಅವರಂತೆ ಆಗಬಾರದು.
ಆ ಸ್ತ್ರೀಯು, “ನನ್ನಲ್ಲಿ ರೊಟ್ಟಿಯಿಲ್ಲವೆಂದು ನಿನ್ನ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಾನು ಪ್ರಮಾಣ ಮಾಡುತ್ತೇನೆ. ನನ್ನ ಮಡಕೆಯಲ್ಲಿ ಸ್ವಲ್ಪ ಹಿಟ್ಟು ಮಾತ್ರ ಇದೆ; ಪಾತ್ರೆಯಲ್ಲಿ ಸ್ವಲ್ಪ ಆಲೀವ್ ಎಣ್ಣೆಯಿದೆ. ಬೆಂಕಿ ಹೊತ್ತಿಸಲು ಸೌದೆ ಚೂರುಗಳನ್ನು ಆಯ್ದುಕೊಳ್ಳವುದಕ್ಕಾಗಿ ನಾನು ಈ ಸ್ಥಳಕ್ಕೆ ಬಂದೆ. ಸೌಧೆಯನ್ನು ನಾನು ಮನೆಗೆ ತೆಗೆದುಕೊಂಡು ಹೋಗಿ, ನಮ್ಮ ಕೊನೆಯ ಊಟವನ್ನು ಸಿದ್ಧಪಡಿಸುತ್ತೇನೆ. ನನ್ನ ಮಗ ಮತ್ತು ನಾನು ಅದನ್ನು ತಿಂದು, ನಂತರ ಹಸಿವಿನಿಂದ ಸಾಯುತ್ತೇವೆ” ಎಂದು ಹೇಳಿದಳು.