1 ಅರಸುಗಳು 17:11 - ಪರಿಶುದ್ದ ಬೈಬಲ್11 ಆ ಸ್ತ್ರೀಯು ಅವನಿಗೆ ನೀರನ್ನು ತರಲು ಹೋಗುತ್ತಿರುವಾಗ, ಎಲೀಯನು, “ದಯವಿಟ್ಟು ಒಂದು ತುಂಡು ರೊಟ್ಟಿಯನ್ನು ತೆಗೆದುಕೊಂಡು ಬಾ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಕೆಯು ಹೋಗುತ್ತಿರುವಾಗ ಪುನಃ ಆಕೆಯನ್ನು ಕರೆದು, “ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಕೆ ಹೋಗುತ್ತಿರುವಾಗ ಮತ್ತೆ ಆಕೆಯನ್ನು ಕರೆದು, “ನೀನು ಬರುವಾಗ ನನಗೆ ಒಂದು ತುಂಡು ರೊಟ್ಟಿಯನ್ನು ಸಹ ತೆಗೆದುಕೊಂಡು ಬಾ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಕೆಯು ಹೋಗುತ್ತಿರುವಾಗ ತಿರಿಗಿ ಆಕೆಯನ್ನು ಕರೆದು - ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವಳು ತೆಗೆದುಕೊಂಡು ಬರಲು ಹೋಗುತ್ತಿರುವಾಗ ಅವನು ಅವಳನ್ನು ಕರೆದು, “ನೀನು ದಯಮಾಡಿ ನಿನ್ನ ಕೈಯಲ್ಲಿ ರೊಟ್ಟಿಯ ತುಂಡನ್ನು ನನಗೆ ತೆಗೆದುಕೊಂಡು ಬಾ,” ಎಂದನು. ಅಧ್ಯಾಯವನ್ನು ನೋಡಿ |
ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)
ಆ ಸ್ತ್ರೀಯು, “ನನ್ನಲ್ಲಿ ರೊಟ್ಟಿಯಿಲ್ಲವೆಂದು ನಿನ್ನ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಾನು ಪ್ರಮಾಣ ಮಾಡುತ್ತೇನೆ. ನನ್ನ ಮಡಕೆಯಲ್ಲಿ ಸ್ವಲ್ಪ ಹಿಟ್ಟು ಮಾತ್ರ ಇದೆ; ಪಾತ್ರೆಯಲ್ಲಿ ಸ್ವಲ್ಪ ಆಲೀವ್ ಎಣ್ಣೆಯಿದೆ. ಬೆಂಕಿ ಹೊತ್ತಿಸಲು ಸೌದೆ ಚೂರುಗಳನ್ನು ಆಯ್ದುಕೊಳ್ಳವುದಕ್ಕಾಗಿ ನಾನು ಈ ಸ್ಥಳಕ್ಕೆ ಬಂದೆ. ಸೌಧೆಯನ್ನು ನಾನು ಮನೆಗೆ ತೆಗೆದುಕೊಂಡು ಹೋಗಿ, ನಮ್ಮ ಕೊನೆಯ ಊಟವನ್ನು ಸಿದ್ಧಪಡಿಸುತ್ತೇನೆ. ನನ್ನ ಮಗ ಮತ್ತು ನಾನು ಅದನ್ನು ತಿಂದು, ನಂತರ ಹಸಿವಿನಿಂದ ಸಾಯುತ್ತೇವೆ” ಎಂದು ಹೇಳಿದಳು.