1 ಅರಸುಗಳು 17:13 - ಪರಿಶುದ್ದ ಬೈಬಲ್13 ಎಲೀಯನು ಆ ಸ್ತ್ರೀಗೆ, “ಚಿಂತಿಸದಿರು, ಮನೆಗೆ ಹೋಗಿ ನೀನು ಹೇಳಿದಂತೆ ಆಹಾರವನ್ನು ಸಿದ್ಧಪಡಿಸು. ಆದರೆ ನಿನ್ನಲ್ಲಿರುವ ಹಿಟ್ಟಿನಿಂದ ಮೊದಲು ಒಂದು ಚಿಕ್ಕ ರೊಟ್ಟಿಯನ್ನು ಮಾಡು. ಆ ರೊಟ್ಟಿಯನ್ನು ನನಗೆ ತಂದುಕೊಡು; ನಂತರ ನಿನಗೆ ಮತ್ತು ನಿನ್ನ ಮಗನಿಗೆ ಅಡಿಗೆ ಮಾಡಿಕೋ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ಎಲೀಯನು ಆಕೆಗೆ, “ಹೆದರಬೇಡ, ನೀನು ಹೇಳಿದಂತೆಯೇ ಮಾಡು. ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ. ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ಎಲೀಯನು, “ಹೆದರಬೇಡ, ನೀನು ಹೇಳಿದಂತೆ ಮಾಡು; ಆದರೆ ಮೊದಲು ಅದರಿಂದ ನನಗೆ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ; ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ಎಲೀಯನು ಆಕೆಗೆ - ಹೆದರಬೇಡ; ನೀನು ಹೇಳಿದಂತೆ ಮಾಡು, ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ; ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಎಲೀಯನು ಅವಳಿಗೆ, “ಭಯಪಡಬೇಡ, ನೀನು ಹೇಳಿದ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿಮಾಡಿ, ನನ್ನ ಬಳಿಗೆ ತೆಗೆದುಕೊಂಡು ಬಾ. ತರುವಾಯ ನಿನಗೂ, ನಿನ್ನ ಮಗನಿಗೂ ಸಿದ್ಧಮಾಡಿಕೋ. ಅಧ್ಯಾಯವನ್ನು ನೋಡಿ |
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.
ಆ ಸ್ತ್ರೀಯು, “ನನ್ನಲ್ಲಿ ರೊಟ್ಟಿಯಿಲ್ಲವೆಂದು ನಿನ್ನ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಾನು ಪ್ರಮಾಣ ಮಾಡುತ್ತೇನೆ. ನನ್ನ ಮಡಕೆಯಲ್ಲಿ ಸ್ವಲ್ಪ ಹಿಟ್ಟು ಮಾತ್ರ ಇದೆ; ಪಾತ್ರೆಯಲ್ಲಿ ಸ್ವಲ್ಪ ಆಲೀವ್ ಎಣ್ಣೆಯಿದೆ. ಬೆಂಕಿ ಹೊತ್ತಿಸಲು ಸೌದೆ ಚೂರುಗಳನ್ನು ಆಯ್ದುಕೊಳ್ಳವುದಕ್ಕಾಗಿ ನಾನು ಈ ಸ್ಥಳಕ್ಕೆ ಬಂದೆ. ಸೌಧೆಯನ್ನು ನಾನು ಮನೆಗೆ ತೆಗೆದುಕೊಂಡು ಹೋಗಿ, ನಮ್ಮ ಕೊನೆಯ ಊಟವನ್ನು ಸಿದ್ಧಪಡಿಸುತ್ತೇನೆ. ನನ್ನ ಮಗ ಮತ್ತು ನಾನು ಅದನ್ನು ತಿಂದು, ನಂತರ ಹಸಿವಿನಿಂದ ಸಾಯುತ್ತೇವೆ” ಎಂದು ಹೇಳಿದಳು.