1 ಅರಸುಗಳು 17:17 - ಪರಿಶುದ್ದ ಬೈಬಲ್17 ಸ್ವಲ್ಪಕಾಲದ ತರುವಾಯ ಆ ಸ್ತ್ರೀಯ ಮಗನು ಅಸ್ವಸ್ಥನಾದನು. ಅವನಿಗೆ ರೋಗವು ಹೆಚ್ಚಾಗುತ್ತಲೇ ಇತ್ತು. ಕೊನೆಗೆ ಆ ಬಾಲಕನು ಉಸಿರಾಡುವುದನ್ನೇ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಕೆಲವು ದಿನಗಳಾದನಂತರ ಆ ಸ್ತ್ರೀಯ ಮಗನು ಅಸ್ವಸ್ಥನಾದನು. ಹುಡುಗನಿಗೆ ರೋಗವು ಹೆಚ್ಚಾಗಿದ್ದುದರಿಂದ ಉಸಿರಾಡುವುದು ನಿಂತುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಕೆಲವು ದಿನಗಳಾದ ನಂತರ ಆ ಮನೆಯಜಮಾನಿಯ ಮಗನು ಅಸ್ಪಸ್ಥನಾದನು; ಅವನ ರೋಗ ಹೆಚ್ಚುತ್ತಾ ಕೊನೆಗೆ ಉಸಿರಾಡುವುದು ನಿಂತುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಕೆಲವು ದಿನಗಳಾದನಂತರ ಮನೆಯ ಯಜಮಾನಿಯಾದ ಆ ಸ್ತ್ರೀಯ ಮಗನು ಅಸ್ವಸ್ಥನಾದನು; ಹುಡುಗನಿಗೆ ರೋಗವು ಹೆಚ್ಚಾದದರಿಂದ ಉಸಿರಾಡುವುದು ನಿಂತು ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಸ್ವಲ್ಪ ಸಮಯದ ತರುವಾಯ, ಮನೆಯ ಯಜಮಾನಿಯಾದ ಆ ಸ್ತ್ರೀಯ ಮಗನು ಅಸ್ವಸ್ಥನಾದನು. ಕೊನೆಗೆ ರೋಗವು ಹೆಚ್ಚಾಗಿದ್ದುದರಿಂದ ಉಸಿರಾಡುವುದು ನಿಂತುಹೋಯಿತು. ಅಧ್ಯಾಯವನ್ನು ನೋಡಿ |
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.
ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.