Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:18 - ಪರಿಶುದ್ದ ಬೈಬಲ್‌

18 ಆ ಸ್ತ್ರೀಯು ಎಲೀಯನಿಗೆ, “ನೀನು ದೇವಮನುಷ್ಯ. ನೀನು ನನಗೆ ಸಹಾಯಮಾಡಲು ಬಂದಿರುವೆಯಾ? ಅಥವಾ ನನ್ನ ಪಾಪಗಳನ್ನೆಲ್ಲ ನನ್ನ ನೆನಪಿಗೆ ತಂದುಕೊಳ್ಳುವಂತೆ ಮಾಡಲು, ನನ್ನ ಮಗನಿಗೆ ಸಾವನ್ನು ಉಂಟುಮಾಡುವುದಕ್ಕಾಗಿಯೇ ಬಂದಿರುವೆಯಾ?” ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ ಆಕೆ ಎಲೀಯನಿಗೆ, “ದೈವಪುರುಷನೇ, ನನ್ನ ವಿರುದ್ಧ ನಿನಗೇನಿದೆ? ನೀನು ನನ್ನ ಪಾಪವನ್ನು ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿಯೋ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ಆ ಸ್ತ್ರೀಯು ಎಲೀಯನಿಗೆ - ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು [ದೇವರ] ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವದಕ್ಕೆ ಬಂದಿಯೋ ಎನ್ನಲು ಅವನು ಆಕೆಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಅವಳು ಎಲೀಯನಿಗೆ, “ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವುದಕ್ಕೂ, ನನ್ನ ಮಗನು ಸಾಯುವುದಕ್ಕೂ ನನ್ನ ಬಳಿಗೆ ಬಂದಿಯೋ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:18
29 ತಿಳಿವುಗಳ ಹೋಲಿಕೆ  

ಇದನ್ನು ಕಂಡ ಬೆಸ್ತರಿಗೆಲ್ಲಾ ವಿಸ್ಮಯವಾಯಿತು. ಸೀಮೋನ್ ಪೇತ್ರನಂತೂ ಯೇಸುವಿನ ಮುಂದೆ ಮೊಣಕಾಲೂರಿ “ಪ್ರಭುವೇ ನನ್ನನ್ನು ಬಿಟ್ಟುಹೋಗು, ನಾನು ಪಾಪಿಯಾಗಿದ್ದೇನೆ!” ಎಂದನು.


“ನಜರೇತಿನ ಯೇಸುವೇ! ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡಲು ಇಲ್ಲಿಗೆ ಬಂದಿರುವೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಕಳುಹಿಸಲ್ಪಟ್ಟ ಪರಿಶುದ್ಧನು!” ಎಂದು ಕೂಗಿದನು.


ಎಲೀಷನು ಇಸ್ರೇಲಿನ ರಾಜನಿಗೆ, “ನನ್ನಿಂದ ನಿನಗೆ ಏನು ಬೇಕಾಗಿದೆ? ನಿನ್ನ ತಂದೆತಾಯಿಯರ ಪ್ರವಾದಿಗಳ ಬಳಿಗೆ ಹೋಗು!” ಎಂದು ಹೇಳಿದನು. ಇಸ್ರೇಲಿನ ರಾಜನು ಎಲೀಷನಿಗೆ, “ಇಲ್ಲ, ನಾವು ನಿನ್ನನ್ನು ನೋಡಲೆಂದು ಇಲ್ಲಿಗೆ ಬಂದಿದ್ದೇವೆ, ಏಕೆಂದರೆ ಯೆಹೋವನು ಮೂವರು ರಾಜರನ್ನು ಒಟ್ಟಿಗೆ ಬರಮಾಡಿ, ನಮ್ಮನ್ನು ಮೋವಾಬ್ಯರು ಸೋಲಿಸುವಂತೆ ಮಾಡಿದ್ದಾನೆ. ನಾವು ನಿನ್ನ ಸಹಾಯವನ್ನು ಬಯಸಿದ್ದೇವೆ” ಎಂದನು.


ಯೇಸು, “ಅಮ್ಮಾ, ನನ್ನ ಗೊಡವೆ ನಿನಗೇಕೆ? ನನ್ನ ಸಮಯ ಇನ್ನೂ ಬಂದಿಲ್ಲ” ಎಂದು ಉತ್ತರಕೊಟ್ಟನು.


ಆದರೆ ರಾಜನು, “ಚೆರೂಯಳ ಗಂಡುಮಕ್ಕಳೇ, ಈಗ ನಾನೇನು ಮಾಡಲಿ? ಶಿಮ್ಮಿಯು ನನ್ನನ್ನು ಶಪಿಸುತ್ತಿರುವುದು ನಿಜ. ಆದರೆ ನನ್ನನ್ನು ಶಪಿಸಲು ಯೆಹೋವನೇ ಅವನಿಗೆ ಹೇಳಿದ್ದಾನೆ” ಎಂದನು.


ದೆವ್ವವು ಅವನನ್ನು ಪದೇಪದೇ ವಶಪಡಿಸಿಕೊಳ್ಳುತ್ತಿತ್ತು. ಆ ಮನುಷ್ಯನನ್ನು ಸೆರೆಮನೆಗೆ ಹಾಕಿ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿದರೂ ಅವನು ಅವುಗಳನ್ನು ಕಿತ್ತೊಗೆದುಬಿಡುತ್ತಿದ್ದನು. ಅವನೊಳಗಿದ್ದ ದೆವ್ವವು ಅವನನ್ನು ಜನರಿಲ್ಲದ ಸ್ಥಳಗಳಿಗೆ ಬಲವಂತವಾಗಿ ಕೊಂಡೊಯ್ಯುತ್ತಿತ್ತು. ಯೇಸು ಆ ದೆವ್ವಕ್ಕೆ, “ಅವನನ್ನು ಬಿಟ್ಟು ಹೋಗು” ಎಂದು ಆಜ್ಞಾಪಿಸಿದನು. ಆ ಮನುಷ್ಯನು ಯೇಸುವಿನ ಮುಂದೆ ಅಡ್ಡಬಿದ್ದು ಗಟ್ಟಿಯಾದ ಸ್ವರದಿಂದ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನಿಂದ ನಿನಗೇನಾಗಬೇಕಾಗಿದೆ? ದಯಮಾಡಿ ನನ್ನನ್ನು ದಂಡಿಸಬೇಡ!” ಎಂದು ಕೂಗಿದನು.


ಜನರು ಯೇಸುವಿನ ಬಗ್ಗೆ ಹೇಳುತ್ತಿದ್ದ ಈ ಮಾತುಗಳನ್ನೆಲ್ಲಾ ಕೇಳಿದ ಹೆರೋದನು, “ನಾನು ಶಿರಚ್ಛೇದನ ಮಾಡಿಸಿದ ಯೋಹಾನನು ಈಗ ಮತ್ತೆ ಬದುಕಿಬಂದಿದ್ದಾನೆ!” ಎಂದು ಹೇಳಿದನು.


ಯೇಸು ಅವನಿಗೆ, “ಎಲೈ ದೆವ್ವವೇ, ಅವನೊಳಗಿಂದ ಹೊರಗೆ ಬಾ” ಎಂದು ಹೇಳಿದನು. ಆಗ ಅವನು ಗಟ್ಟಿಯಾದ ಧ್ವನಿಯಿಂದ ಅರಚುತ್ತಾ, “ಯೇಸುವೇ, ಪರಾತ್ಪರನಾದ ದೇವಕುಮಾರನೇ, ನನ್ನಿಂದ ನಿನಗೆ ಏನಾಗಬೇಕಾಗಿದೆ? ದೇವರಾಣೆಯಿಟ್ಟು ಬೇಡಿಕೊಳ್ಳುತ್ತೇನೆ, ನನ್ನನ್ನು ಹಿಂಸಿಸಬೇಡ” ಎಂದು ಕೇಳಿಕೊಂಡನು.


ದೇವರೇ, ನೀನು ನನಗೆ ಕಠಿಣವಾದ ದಂಡನೆಗಳನ್ನು ವಿಧಿಸಿರುವೆ. ನನ್ನ ಯೌವನದ ಪಾಪಗಳ ದೆಸೆಯಿಂದ ನನ್ನನ್ನು ಸಂಕಟಪಡಿಸಿರುವೆ.


ನಾನು ಎಷ್ಟು ಪಾಪಗಳನ್ನು ಮಾಡಿರುವೆ? ನಾನೇನು ತಪ್ಪು ಮಾಡಿರುವೆ? ನನ್ನ ತಪ್ಪನ್ನೂ ಪಾಪವನ್ನೂ ನನಗೆ ತೋರಿಸು.


ಆದರೆ ನೆಕೋ ಯೋಷೀಯನಿಗೆ ಸಂದೇಶವನ್ನು ಕಳುಹಿಸಿ ಅದರಲ್ಲಿ, “ಅರಸನಾದ ಯೋಷೀಯನೇ, ನಾನು ನಿನಗೆ ವಿರುದ್ಧವಾಗಿ ಬರಲಿಲ್ಲ. ಆದ್ದರಿಂದ ನೀನು ಯುದ್ಧಕ್ಕೆ ಕೈಹಾಕಬೇಡ. ನಾನು ನನ್ನ ವೈರಿಗಳ ಮೇಲೆ ಯುದ್ಧಮಾಡಲು ಬಂದಿದ್ದೇನೆ. ಬೇಗನೆ ಯುದ್ಧಮಾಡಲು ದೇವರು ನನ್ನನ್ನು ಅವಸರಪಡಿಸುತ್ತಿದ್ದಾನೆ. ದೇವರು ನಿನ್ನೊಂದಿಗಿದ್ದಾನೆ. ಆದ್ದರಿಂದ ನನಗೆ ತೊಂದರೆ ಕೊಡಬೇಡ. ನೀನು ನನ್ನ ಮೇಲೆ ಯುದ್ಧ ಮಾಡಿದರೆ ದೇವರು ನಿನ್ನನ್ನು ನಾಶಮಾಡುವನು” ಎಂದು ಹೇಳಿದನು.


ಆಗ ಓಬದ್ಯನು, “ನೀನು ಎಲ್ಲಿರುವೆ ಎಂಬುದು ನನಗೆ ತಿಳಿದಿದೆಯೆಂದು ನಾನು ರಾಜನಿಗೆ ಹೇಳಿದರೆ, ಅವನು ನನ್ನನ್ನು ಕೊಂದುಬಿಡುತ್ತಾನೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ನೀನೇಕೆ ನನ್ನನ್ನು ಸಾಯಿಸಬೇಕೆಂದಿರುವೆ?


ಯೆಹೂದ ದೇಶದವನಾದ ಒಬ್ಬ ದೇವಮನುಷ್ಯನು ಯೆಹೋವನ ಆಜ್ಞೆಯಂತೆ ಬೇತೇಲಿಗೆ ಬಂದನು. ಆಗ ಯಾರೊಬ್ಬಾಮನು ಧೂಪವನ್ನು ಅರ್ಪಿಸುತ್ತಾ, ಯಜ್ಞವೇದಿಕೆಯ ಹತ್ತಿರ ನಿಂತಿದ್ದನು.


ದಾವೀದನು, “ಚೆರೂಯಳ ಮಕ್ಕಳೇ, ನಾನು ನಿಮಗೆ ಏನು ಮಾಡಲಿ? ನೀವಿಂದು ನನಗೆ ವಿರುದ್ಧರಾಗಿರುವಿರಿ. ವಿಶೇಷವಾದ ಈ ದಿನದಲ್ಲಿ ಒಬ್ಬ ಇಸ್ರೇಲನನ್ನು ಸಾವಿಗೆ ಗುರಿಮಾಡುವುದು ಸರಿಯಾಗಿರುವುದೇ? ಇಸ್ರೇಲಿನಲ್ಲಿ ಈ ದಿನ ನಾನು ಇಸ್ರೇಲಿಗೆಲ್ಲ ರಾಜನೆಂಬುದು ನನಗೆ ತಿಳಿದಿದೆ” ಎಂದನು.


ಸಮುವೇಲನು ತನಗೆ ಯೆಹೋವನು ಹೇಳಿದಂತೆ ಮಾಡಿದನು. ಸಮುವೇಲನು ಬೆತ್ಲೆಹೇಮಿಗೆ ಹೋದನು. ಬೆತ್ಲೆಹೇಮಿನ ಹಿರಿಯರು ಭಯದಿಂದ ನಡುಗಿದರು. ಅವರು ಸಮುವೇಲನನ್ನು ಕಂಡು, “ನಿನ್ನ ಆಗಮನವು ಶುಭಕರವಾಗಿದೆಯೇ?” ಎಂದು ಕೇಳಿದರು.


ನೀವು ಯೋಸೇಫನಿಗೆ, ಈ ಸಂದೇಶವನ್ನು ಕೊಡಬೇಕು, ‘ನಾವು ಮಾಡಿದ್ದು ಕೆಟ್ಟಕಾರ್ಯವೇ ನಿಜ. ಅದಕ್ಕಾಗಿ ನೀನು ಅವರನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತಿದ್ದೇನೆ.’ ಆದ್ದರಿಂದ ನಾವು ಮಾಡಿದ ಕೆಟ್ಟಕಾರ್ಯಕ್ಕಾಗಿ ನೀನು ನಮ್ಮನ್ನು ಕ್ಷಮಿಸಬೇಕು. ನಾವು ನಿನ್ನ ತಂದೆಯ ದೇವರಿಗೆ ಸೇವಕರಾಗಿದ್ದೇವೆ” ಎಂದು ಹೇಳಿದರು. ಈ ವಿಷಯಗಳನ್ನು ಕೇಳಿ ಅವನು ದುಃಖದಿಂದ ಅತ್ತನು.


ಯಾಕೋಬನು ಸತ್ತಮೇಲೆ, ಯೋಸೇಫನ ಸಹೋದರರು ಕಳವಳಗೊಂಡರು. ಅವರು “ನಾವು ಮಾಡಿದ ಕಾರ್ಯಕ್ಕೆ ಯೋಸೇಫನು ಇನ್ನು ಮೇಲೆ ನಮ್ಮನ್ನು ದ್ವೇಷಿಸುವನೇ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.


ಅವರಿಬ್ಬರು ಯೇಸುವಿನ ಬಳಿಗೆ ಬಂದು. “ನೀನು ನಮಗೆ ಏನು ಮಾಡಬೇಕೆಂದಿರುವೆ? ದೇವಕುಮಾರನೇ, ನೇಮಿತ ಕಾಲಕ್ಕಿಂತ ಮುಂಚೆಯೇ ನಮ್ಮನ್ನು ಶಿಕ್ಷಿಸಲು ಇಲ್ಲಿಗೆ ಬಂದೆಯಾ?” ಎಂದು ಗಟ್ಟಿಯಾಗಿ ಕೂಗಿಕೊಂಡರು.


ಅವನು ಅವಳನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು. ಅಲ್ಲದೆ ಅವನು ಮೂರು ಸೇರು ಗೋಧಿಹಿಟ್ಟನ್ನು ಕಾಣಿಕೆಯಾಗಿ ಯಾಜಕನಿಗೆ ತಂದು ಕೊಡಬೇಕು. ಅವನು ಅದರ ಮೇಲೆ ಎಣ್ಣೆ ಹಾಕಬಾರದು; ಅವನು ಅದರ ಮೇಲೆ ಧೂಪಹಾಕಬಾರದು; ಯಾಕೆಂದರೆ ಇದು ಈರ್ಷೆಯುಳ್ಳ ಗಂಡನ ಧಾನ್ಯಸಮರ್ಪಣೆಯಾಗಿದೆ. ಆಕೆಯ ದೋಷವನ್ನು ಹೊರಪಡಿಸಲು ಕೊಟ್ಟಂಥ ಧಾನ್ಯಸಮರ್ಪಣೆ ಇದಾಗಿದೆ.


ಆದರೆ ಯೆಹೋವನು ದೇವರ ಮನುಷ್ಯನೊಬ್ಬನೊಡನೆ ಮಾತನಾಡಿದನು. ಅವನ ಹೆಸರು ಶೆಮಾಯ. ಯೆಹೋವನು,


ಸ್ವಲ್ಪಕಾಲದ ತರುವಾಯ ಆ ಸ್ತ್ರೀಯ ಮಗನು ಅಸ್ವಸ್ಥನಾದನು. ಅವನಿಗೆ ರೋಗವು ಹೆಚ್ಚಾಗುತ್ತಲೇ ಇತ್ತು. ಕೊನೆಗೆ ಆ ಬಾಲಕನು ಉಸಿರಾಡುವುದನ್ನೇ ನಿಲ್ಲಿಸಿದನು.


ಎಲೀಯನು ಅವಳಿಗೆ, “ನಿನ್ನ ಮಗನನ್ನು ನನಗೆ ಕೊಡು” ಎಂದು ಹೇಳಿದನು. ಎಲೀಯನು ಬಾಲಕನನ್ನು ಅವಳಿಂದ ತೆಗೆದುಕೊಂಡು, ಮೇಲಂತಸ್ತಿಗೆ ಹೋದನು. ಅವನು ನೆಲೆಸಿದ್ದ ಕೊಠಡಿಯ ಹಾಸಿಗೆಯ ಮೇಲೆ ಆ ಬಾಲಕನನ್ನು ಮಲಗಿಸಿದನು.


ಇಸ್ರೇಲಿನ ರಾಜನ ಹತ್ತಿರಕ್ಕೆ ಬಂದ ದೇವಮನುಷ್ಯನ ಸಂದೇಶವು ಇಂತಿದೆ: “ಯೆಹೋವನು ಹೀಗೆಂದನು: ‘ಯೆಹೋವನಾದ ನನ್ನನ್ನು ಬೆಟ್ಟಗಳ ದೇವರೆಂದು ಅರಾಮ್ಯದ ಜನರು ಹೇಳಿದ್ದಾರೆ. ನಾನು ಕಣಿವೆಗಳ ದೇವರಲ್ಲವೆಂದು ಸಹ ಅವರು ಯೋಚಿಸಿಕೊಂಡಿದ್ದಾರೆ. ಆದ್ದರಿಂದ ಈ ಮಹಾಸೇನೆಯನ್ನು ನೀನು ಸೋಲಿಸುವಂತೆ ನಾನು ಅವಕಾಶ ಮಾಡುತ್ತೇನೆ. ನಾನೇ ಯೆಹೋವನೆಂಬುದು ಆಗ ನಿನಗೇ ತಿಳಿಯುತ್ತದೆ!’”


ಯೆಹೂದನು, “ಸ್ವಾಮಿ, ನಾವು ಹೇಳುವಂಥದ್ದು ಏನೂ ಇಲ್ಲ; ವಿವರಿಸಲು ಯಾವ ದಾರಿಯೂ ಇಲ್ಲ; ನಾವು ತಪ್ಪಿತಸ್ಥರಲ್ಲವೆಂದು ತೋರಿಸಲು ಯಾವ ಮಾರ್ಗವೂ ಇಲ್ಲ. ನಾವು ಮಾಡಿದ ಬೇರೊಂದು ಕಾರ್ಯದ ನಿಮಿತ್ತ ದೇವರು ನಮ್ಮನ್ನು ತಪ್ಪಿತಸ್ಥರೆಂದು ನಿರ್ಣಯಿಸಿದ್ದಾನೆ. ಆದ್ದರಿಂದ ನಾವೆಲ್ಲರೂ ಬೆನ್ಯಾಮೀನನೂ ನಿನಗೆ ಗುಲಾಮರಾಗಿರುವೆವು” ಎಂದು ಹೇಳಿದನು.


ಆಗ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವಪುರುಷನು ನನ್ನಲ್ಲಿಗೆ ಬಂದನು. ಅವನು ದೇವರಿಂದ ಬಂದ ದೇವದೂತನಂತೆ ಕಂಡನು. ನನಗೆ ಭಯವಾಯಿತು. ನಾನು ಅವನಿಗೆ, ‘ನೀನು ಎಲ್ಲಿಂದ ಬಂದೆ?’ ಎಂದು ಕೇಳಲಿಲ್ಲ; ಅವನೂ ನನಗೆ ತನ್ನ ಹೆಸರನ್ನು ಹೇಳಲಿಲ್ಲ.


ಅಹಜ್ಯನು ಎಲೀಯನ ಬಳಿಗೆ ಒಬ್ಬ ಸೇನಾಧಿಪತಿಯನ್ನು ಮತ್ತು ಐವತ್ತು ಮಂದಿ ಜನರನ್ನು ಕಳುಹಿಸಿದನು. ಸೇನಾಧಿಪತಿಯು ಎಲೀಯನ ಬಳಿಗೆ ಹೋದನು. ಆ ಸಮಯದಲ್ಲಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿದ್ದನು. ಆ ಸೇನಾಧಿಪತಿಯು ಎಲೀಯನಿಗೆ, “ದೇವಮನುಷ್ಯನೇ, ರಾಜನು ಹೇಳುತ್ತಾನೆ, ‘ಕೆಳಗಿಳಿದು ಬಾ’” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು