Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:19 - ಪರಿಶುದ್ದ ಬೈಬಲ್‌

19 ಎಲೀಯನು ಅವಳಿಗೆ, “ನಿನ್ನ ಮಗನನ್ನು ನನಗೆ ಕೊಡು” ಎಂದು ಹೇಳಿದನು. ಎಲೀಯನು ಬಾಲಕನನ್ನು ಅವಳಿಂದ ತೆಗೆದುಕೊಂಡು, ಮೇಲಂತಸ್ತಿಗೆ ಹೋದನು. ಅವನು ನೆಲೆಸಿದ್ದ ಕೊಠಡಿಯ ಹಾಸಿಗೆಯ ಮೇಲೆ ಆ ಬಾಲಕನನ್ನು ಮಲಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ಆಕೆಗೆ, “ನಿನ್ನ ಮಗನನ್ನು ನನಗೆ ಕೊಡು” ಎಂದು ಹೇಳಿ ಅವನನ್ನು ಆಕೆಯ ಮಡಿಲಿನಿಂದ ತೆಗೆದುಕೊಂಡು, ತಾನು ವಾಸವಾಗಿದ್ದ ಮೇಲಿನ ಕೋಣೆಗೆ ಹೋಗಿ ತನ್ನ ಮಂಚದ ಮೇಲೆ ಮಲಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆದರೆ ಎಲೀಯನು, “ನಿನ್ನ ಮಗನನ್ನು ನನಗೆ ಕೊಡು,” ಎಂದು ಹೇಳಿ ಅವನನ್ನು ಆಕೆಯ ಮಡಿಲಿನಿಂದ ತೆಗೆದುಕೊಂಡು, ತಾನು ವಾಸವಾಗಿದ್ದ ಮೇಲಿನ ಕೋಣೆಗೆ ಹೋಗಿ, ತನ್ನ ಮಂಚದ ಮೇಲೆ ಮಲಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿನ್ನ ಮಗನನ್ನು ನನಗೆ ಕೊಡು ಎಂದು ಹೇಳಿ ಅವನನ್ನು ಆಕೆಯ ಉಡಿಲಿನಿಂದ ತೆಗೆದುಕೊಂಡು ತಾನು ವಾಸವಾಗಿದ್ದ ಮೇಲಿನ ಕೋಣೆಗೆ ಹೋಗಿ ತನ್ನ ಮಂಚದ ಮೇಲೆ ಮಲಗಿಸಿದನು. ಅನಂತರ ಅವನು ಯೆಹೋವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನು ಅವಳಿಗೆ, “ನಿನ್ನ ಮಗನನ್ನು ನನಗೆ ಕೊಡು,” ಎಂದು ಹೇಳಿ, ಅವನನ್ನು ಅವಳ ಮಡಿಲಿನಿಂದ ಎತ್ತಿಕೊಂಡು, ತಾನು ವಾಸವಾಗಿದ್ದ ಮಾಳಿಗೆಯ ಕೋಣೆಗೆ ಹೋಗಿ, ಅವನನ್ನು ಮಂಚದ ಮೇಲೆ ಮಲಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:19
6 ತಿಳಿವುಗಳ ಹೋಲಿಕೆ  

ಎಲೀಷನು ಮನೆಯೊಳಕ್ಕೆ ಬಂದನು. ಆ ಮಗು ಅವನ ಹಾಸಿಗೆಯ ಮೇಲೆ ಸತ್ತುಬಿದ್ದಿತ್ತು.


ಪೇತ್ರನು ಲುದ್ದದಲ್ಲಿದ್ದಾಗ ಆಕೆಯು ಕಾಯಿಲೆಯಿಂದ ಸತ್ತುಹೋದಳು. ಜನರು ಆಕೆಯ ದೇಹವನ್ನು ತೊಳೆದು ಮೇಲ್ಮಾಳಿಗೆಯ ಒಂದು ಕೋಣೆಯಲ್ಲಿಟ್ಟರು.


ಆ ಸ್ತ್ರೀಯು ಬಾಲಕನನ್ನು ದೇವಮನುಷ್ಯನ (ಎಲೀಷನ) ಹಾಸಿಗೆಯ ಮೇಲೆ ಮಲಗಿಸಿದಳು. ನಂತರ ಅವಳು ಬಾಗಿಲನ್ನು ಮುಚ್ಚಿಕೊಂಡು, ಹೊರಗೆ ಹೋದಳು.


ದಯವಿಟ್ಟು ಎಲೀಷನಿಗಾಗಿ ಮಾಳಿಗೆಯ ಮೇಲೆ ಚಿಕ್ಕದೊಂದು ಕೊಠಡಿಯನ್ನು ಕಟ್ಟೋಣ. ಆ ಕೊಠಡಿಯಲ್ಲಿ ಹಾಸಿಗೆಯೊಂದನ್ನು ಹಾಕೋಣ. ಅಲ್ಲಿ ಒಂದು ಮೇಜು, ಕುರ್ಚಿ ಮತ್ತು ದೀಪಸ್ತಂಭವನ್ನು ಇಡೋಣ. ಅವನು ನಮ್ಮ ಮನೆಗೆ ಬಂದಾಗ, ಈ ಕೊಠಡಿಯನ್ನು ತನಗಾಗಿ ಉಪಯೋಗಿಸಲಿ” ಎಂದು ಹೇಳಿದನು.


ಆ ಸ್ತ್ರೀಯು ಎಲೀಯನಿಗೆ, “ನೀನು ದೇವಮನುಷ್ಯ. ನೀನು ನನಗೆ ಸಹಾಯಮಾಡಲು ಬಂದಿರುವೆಯಾ? ಅಥವಾ ನನ್ನ ಪಾಪಗಳನ್ನೆಲ್ಲ ನನ್ನ ನೆನಪಿಗೆ ತಂದುಕೊಳ್ಳುವಂತೆ ಮಾಡಲು, ನನ್ನ ಮಗನಿಗೆ ಸಾವನ್ನು ಉಂಟುಮಾಡುವುದಕ್ಕಾಗಿಯೇ ಬಂದಿರುವೆಯಾ?” ಎಂದು ಕೇಳಿದಳು.


ನಂತರ ಎಲೀಯನು, “ನನ್ನ ದೇವರಾದ ಯೆಹೋವನೇ, ಈ ವಿಧವೆಯು ತನ್ನ ಮನೆಯಲ್ಲಿ ನನಗೆ ಸ್ಥಳವನ್ನು ಕೊಟ್ಟಿದ್ದಾಳೆ. ನೀನು ಅವಳಿಗೆ ಈ ಕೇಡನ್ನು ಮಾಡುವೆಯಾ? ನೀನು ಅವಳ ಮಗುವನ್ನು ಸಾಯಿಸುವೆಯಾ?” ಎಂದು ಪ್ರಾರ್ಥಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು