Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 17:20 - ಪರಿಶುದ್ದ ಬೈಬಲ್‌

20 ನಂತರ ಎಲೀಯನು, “ನನ್ನ ದೇವರಾದ ಯೆಹೋವನೇ, ಈ ವಿಧವೆಯು ತನ್ನ ಮನೆಯಲ್ಲಿ ನನಗೆ ಸ್ಥಳವನ್ನು ಕೊಟ್ಟಿದ್ದಾಳೆ. ನೀನು ಅವಳಿಗೆ ಈ ಕೇಡನ್ನು ಮಾಡುವೆಯಾ? ನೀನು ಅವಳ ಮಗುವನ್ನು ಸಾಯಿಸುವೆಯಾ?” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅನಂತರ ಅವನು ಯೆಹೋವನಿಗೆ, “ನನ್ನ ದೇವರಾದ ಯೆಹೋವನೇ, ನನಗೆ ಸ್ಥಳಕೊಟ್ಟ ಈ ವಿಧವೆಯ ಮಗನನ್ನು ನೀನು ಸಾಯಿಸಿ, ಆಕೆಗೆ ಕೇಡನ್ನುಂಟುಮಾಡಿದ್ದೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅನಂತರ ಅವನು, “ನನ್ನ ದೇವರಾದ ಸರ್ವೇಶ್ವರಾ, ನನಗೆ ಆಶ್ರಯವಿತ್ತ ಈ ವಿಧವೆಯ ಮಗನನ್ನು ನೀವು ಸಾಯಿಸಿ ಆಕೆಗೂ ಕೇಡನ್ನುಂಟುಮಾಡಿದ್ದೇಕೆ?” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನನ್ನ ದೇವರಾದ ಯೆಹೋವನೇ, ನನಗೆ ಸ್ಥಳಕೊಟ್ಟ ಈ ವಿಧವೆಯ ಮಗನನ್ನು ನೀನು ಸಾಯಿಸಿ ಆಕೆಗೂ ಕೇಡನ್ನುಂಟುಮಾಡಿದ್ದೇನು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ನನ್ನ ದೇವರಾದ ಯೆಹೋವ ದೇವರೇ, ವಿಧವೆಯ ಮಗನನ್ನು ಕೊಂದುಹಾಕುವ ಈ ದುರಂತ ಅವಳ ಮೇಲೆ ಬರಮಾಡಿದಿಯಲ್ಲಾ?” ಎಂದು ಯೆಹೋವ ದೇವರನ್ನು ಕೂಗಿ ಬೇಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 17:20
19 ತಿಳಿವುಗಳ ಹೋಲಿಕೆ  

ನೀವು ನಂಬಿ, ಪ್ರಾರ್ಥನೆಯಲ್ಲಿ ಏನನ್ನೇ ಕೇಳಿದರೂ ನಿಮಗೆ ಅದು ದೊರೆಯುವುದು” ಎಂದು ಉತ್ತರಕೊಟ್ಟನು.


ಮೋಶೆಯೂ ಆರೋನನೂ ದೇವರ ಯಾಜಕರುಗಳಾಗಿದ್ದರು. ಸಮುವೇಲನೂ ಆತನ ಹೆಸರಿನಲ್ಲಿ ಪ್ರಾರ್ಥಿಸಿದನು. ಆತನು ಅವರೆಲ್ಲರ ಪ್ರಾರ್ಥನೆಗಳಿಗೆ ಉತ್ತರಿಸಿದನು.


ಹಿಜ್ಕೀಯನು ಯೆಹೋವನ ಸನ್ನಿಧಿಯಲ್ಲಿ, “ಯೆಹೋವನೇ, ಕೆರೂಬಿಗಳ ಮೇಲೆ ರಾಜನಾಗಿ ಕುಳಿತುಕೊಳ್ಳುವ ಇಸ್ರೇಲರ ದೇವರೇ, ಲೋಕದ ರಾಜ್ಯಗಳಿಗೆಲ್ಲಾ ನೀನೊಬ್ಬನೇ ದೇವರಾಗಿರುವೆ. ನೀನು ಪರಲೋಕವನ್ನು ಮತ್ತು ಈ ಲೋಕವನ್ನು ಸೃಷ್ಟಿಸಿದೆ!


ಆದ್ದರಿಂದ ಮೋಶೆಯು ಯೆಹೋವನಿಗೆ ಮೊರೆಯಿಟ್ಟು, “ಈ ಜನರ ವಿಷಯದಲ್ಲಿ ನಾನೇನು ಮಾಡಲಿ? ಅವರು ಕಲ್ಲೆಸೆದು ನನ್ನನ್ನು ಕೊಲ್ಲುವುದಕ್ಕೆ ಸಿದ್ಧರಾಗಿದ್ದಾರೆ” ಅಂದನು.


ಯೆಹೋವನೇ, ನಾನು ನಿನ್ನ ಜೊತೆ ವಾದ ಮಾಡಿದರೆ, ನೀನು ಯಾವಾಗಲೂ ನ್ಯಾಯಪರನೆಂಬುದು ರುಜುವಾತಾಗುತ್ತದೆ. ಆದರೂ ನ್ಯಾಯಪೂರ್ಣವಲ್ಲದ ಕೆಲವು ವಿಷಯಗಳ ಬಗ್ಗೆ ನಾನು ನಿನ್ನನ್ನು ಕೇಳಬಯಸುತ್ತೇನೆ. ದುಷ್ಟರು ಏಕೆ ಅಭಿವೃದ್ಧಿ ಹೊಂದುತ್ತಾರೆ? ನಿನ್ನ ವಿಶ್ವಾಸಕ್ಕೆ ಪಾತ್ರರಾಗದವರು ನೆಮ್ಮದಿಯ ಜೀವನ ನಡೆಸಲು ಹೇಗೆ ಸಾಧ್ಯ?


ಸೇನಾಧಿಪತಿಯ ಒಡೆಯನಾದ ಅಶ್ಶೂರದ ರಾಜನು, ಜೀವಸ್ವರೂಪನಾದ ದೇವರ ಬಗ್ಗೆ ಕೆಟ್ಟದ್ದನ್ನು ನುಡಿಯಲು ಅವನನ್ನು ಕಳುಹಿಸಿದನು. ನಿಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲ ಕೇಳಿರುತ್ತಾನೆ. ಯೆಹೋವನು ಶತ್ರುಗಳನ್ನು ತಪ್ಪಿತಸ್ಥರೆಂದು ನಿರ್ಧರಿಸಬಹುದು! ಆದ್ದರಿಂದ ಇನ್ನೂ ಜೀವಸಹಿತ ಉಳಿದಿರುವ ಜನರಿಗಾಗಿ ಪ್ರಾರ್ಥಿಸಿ” ಎಂದು ಹೇಳಿದರು.


ಎಲೀಯನು ಅವಳಿಗೆ, “ನಿನ್ನ ಮಗನನ್ನು ನನಗೆ ಕೊಡು” ಎಂದು ಹೇಳಿದನು. ಎಲೀಯನು ಬಾಲಕನನ್ನು ಅವಳಿಂದ ತೆಗೆದುಕೊಂಡು, ಮೇಲಂತಸ್ತಿಗೆ ಹೋದನು. ಅವನು ನೆಲೆಸಿದ್ದ ಕೊಠಡಿಯ ಹಾಸಿಗೆಯ ಮೇಲೆ ಆ ಬಾಲಕನನ್ನು ಮಲಗಿಸಿದನು.


ಬಳಿಕ ಆ ಬಾಲಕನ ಮೇಲೆ ಎಲೀಯನು ಮೂರು ಬಾರಿ ಬೋರಲಬಿದ್ದು, “ನನ್ನ ದೇವರಾದ ಯೆಹೋವನೇ, ಈ ಬಾಲಕನಿಗೆ ಮತ್ತೆ ಜೀವವನ್ನು ಕೊಡು” ಎಂದು ಪ್ರಾರ್ಥಿಸಿದನು.


ಆದರೆ ಏರನು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ಯೆಹೋವನು ಅವನನ್ನು ಸಾಯಿಸಿದನು.


ಇದು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದರಿಂದ ಆತನು ಓನಾನನನ್ನು ಸಹ ಸಾಯಿಸಿದನು.


ಎಲೀಷನು ಕೊಠಡಿಯಲ್ಲಿ ಪ್ರವೇಶಿಸಿ ಬಾಗಿಲನ್ನು ಮುಚ್ಚಿದನು. ಈಗ ಎಲೀಷ ಮತ್ತು ಮಗು ಮಾತ್ರ ಕೊಠಡಿಯಲ್ಲಿದ್ದರು. ನಂತರ ಎಲೀಷನು ಯೆಹೋವನಲ್ಲಿ ಪ್ರಾರ್ಥಿಸಿದನು.


ಆಗ ಯೆಶಾಯನು ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಈಗಾಗಲೇ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರುವಂತೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು