Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 18:10 - ಪರಿಶುದ್ದ ಬೈಬಲ್‌

10 ನಿನ್ನ ದೇವರಾದ ಯೆಹೋವನಾಣೆ, ರಾಜನು ನಿನಗಾಗಿ ಎಲ್ಲಾ ಕಡೆಯೂ ಹುಡುಕುತ್ತಿದ್ದಾನೆ! ಅವನು ನಿನ್ನನ್ನು ಕಂಡುಹಿಡಿಯಲು ಎಲ್ಲಾ ದೇಶಗಳಿಗೂ ಜನರನ್ನು ಕಳುಹಿಸಿದ್ದಾನೆ. ಒಂದು ದೇಶದ ಅಧಿಪತಿಯು ನಮ್ಮ ದೇಶದಲ್ಲಿ ಎಲೀಯನು ಇಲ್ಲವೆಂದು ಹೇಳಿದರೆ ಆ ಮಾತು ಸತ್ಯವೊ ಎಂಬುದನ್ನು ತಿಳಿದುಕೊಳ್ಳುವುದಕ್ಕಾಗಿ ಅಹಾಬನು ಆ ಅಧಿಪತಿಯಿಂದ ಪ್ರಮಾಣ ಮಾಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನ್ನ ದೇವರಾದ ಯೆಹೋವನಾಣೆ, ನನ್ನ ಒಡೆಯನು ಸೇವಕರನ್ನು ಕಳುಹಿಸಿ ನಿನ್ನನ್ನು ಹುಡುಕದ ಜನಾಂಗವೂ ರಾಜ್ಯವೂ ಒಂದೂ ಇರುವುದಿಲ್ಲ. ಆ ಜನಾಂಗ ರಾಜ್ಯಗಳವರು ‘ಎಲೀಯನು ನಮ್ಮಲ್ಲಿರುವುದಿಲ್ಲ’ ಎಂದು ಹೇಳಿದಾಗ ಅವನು ಅವರಿಂದ ಪ್ರಮಾಣ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ತಮ್ಮ ದೇವರಾದ ಸರ್ವೇಶ್ವರನಾಣೆ, ನನ್ನ ಒಡೆಯ ಸೇವಕರನ್ನು ಅಟ್ಟಿ ನಿಮ್ಮನ್ನು ಹುಡುಕದ ಜನಾಂಗವಾಗಲಿ, ರಾಜ್ಯವಾಗಲಿ ಒಂದೂ ಇಲ್ಲ. ಆ ಜನಾಂಗ, ರಾಜ್ಯಗಳವರು, ‘ಎಲೀಯನು ನಮ್ಮಲ್ಲಿರುವುದಿಲ್ಲ,’ ಎಂದು ಹೇಳಿದಾಗ ಅವನು ಅವರಿಂದ ಪ್ರಮಾಣ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನ್ನ ದೇವರಾದ ಯೆಹೋವನಾಣೆ, ನನ್ನ ಒಡೆಯನು ಸೇವಕರನ್ನು ಅಟ್ಟಿ ನಿನ್ನನ್ನು ಹುಡುಕದ ಜನಾಂಗವೂ ರಾಜ್ಯವೂ ಒಂದೂ ಇರುವದಿಲ್ಲ. ಆ ಜನಾಂಗರಾಜ್ಯಗಳವರು ಎಲೀಯನು ನಮ್ಮಲ್ಲಿರುವದಿಲ್ಲವೆಂದು ಹೇಳಿದಾಗ ಅವನು ಅವರಿಂದ ಪ್ರಮಾಣಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿನ್ನ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಯಜಮಾನನು ನಿನ್ನನ್ನು ಹುಡುಕಲು ಕಳುಹಿಸದ ಜನಾಂಗವೂ, ರಾಜ್ಯವೂ ಒಂದೂ ಇಲ್ಲ. ಅವರು, ‘ಎಲೀಯನು ನಮ್ಮಲ್ಲಿ ಇಲ್ಲ,’ ಎಂದು ಹೇಳಿದಾಗ, ಅಹಾಬನು ಆ ರಾಜ್ಯಕ್ಕೂ, ಜನಾಂಗಕ್ಕೂ ಆಣೆ ಇಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 18:10
20 ತಿಳಿವುಗಳ ಹೋಲಿಕೆ  

ಎಲೀಯನು ಗಿಲ್ಯಾದಿನ ತಿಷ್ಬೀ ಪಟ್ಟಣದ ಒಬ್ಬ ಪ್ರವಾದಿ. ಎಲೀಯನು ರಾಜನಾದ ಅಹಾಬನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಸೇವಕನಾಗಿದ್ದೇನೆ. ಮುಂದಿನ ಕೆಲವು ವರ್ಷಗಳವರೆಗೆ ಹಿಮವಾಗಲಿ ಮಳೆಯಾಗಲಿ ಬೀಳುವುದಿಲ್ಲವೆಂದು ನಾನು ಆತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ಬೀಳುವಂತೆ ಮಳೆಗೆ ಆಜ್ಞಾಪಿಸಿದರೆ ಮಾತ್ರ ಅದು ಬೀಳುತ್ತದೆ” ಎಂದು ಹೇಳಿದನು.


ಇದನ್ನು ಕೇಳಿದ ಕೂಡಲೇ ಜನರು ಆತನತ್ತ ಬೀರಲು ಕಲ್ಲುಗಳನ್ನು ತೆಗೆದುಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದಿಂದ ಹೊರಟುಹೋದನು.


ರಾಜನಾದ ಯೆಹೋಯಾಕೀಮನು ಲಿಪಿಕಾರನಾದ ಬಾರೂಕನನ್ನು ಮತ್ತು ಪ್ರವಾದಿಯಾದ ಯೆರೆಮೀಯನನ್ನು ಬಂಧಿಸಬೇಕೆಂದು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶೆಲೆಮ್ಯ ಇವರಿಗೆ ಆಜ್ಞೆಯನ್ನು ಕೊಟ್ಟನು. ಆದರೆ ಅವರಿಂದ ಬಾರೂಕನನ್ನು ಮತ್ತು ಯೆರೆಮೀಯನನ್ನು ಹುಡುಕಲಾಗಲಿಲ್ಲ. ಯಾಕೆಂದರೆ ಯೆಹೋವನು ಅವರನ್ನು ಬಚ್ಚಿಟ್ಟಿದ್ದನು.


ಮಹೋನ್ನತನ ಮೊರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.


ನೀತಿವಂತರಿಗೆ ಕೇಡುಮಾಡಲು ಕೆಡುಕರು ಒಟ್ಟಾಗಿ ಸೇರಿದ್ದಾರೆ. ನೀನಾದರೋ ನೀತಿವಂತರನ್ನು ಮರೆಮಾಡಿ ಕಾಪಾಡುವೆ; ಅವರನ್ನು ನಿನ್ನ ಆಶ್ರಯಸ್ಥ್ಥಾನದಲ್ಲಿ ಅಡಗಿಸಿಡುವೆ.


ದುಷ್ಟರು ಗರ್ವಿಷ್ಠರಾಗಿ ಬಡವರನ್ನು ಹಿಂದಟ್ಟಿ ಹೋಗುತ್ತಿದ್ದರೆ, ಆ ದುಷ್ಟರ ಕುಯುಕ್ತಿಯಲ್ಲಿ ಅವರು ಸಿಕ್ಕಿಬೀಳುವರು.


ಎಲೀಯನು, “ನಾನು ಸೇವೆ ಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ಈ ದಿನ ನಾನು ರಾಜನ ಎದುರಿನಲ್ಲಿ ಹಾಜರಾಗುತ್ತೇನೆ ಎಂಬುದಾಗಿ ಪ್ರಮಾಣ ಮಾಡುತ್ತೇನೆ” ಎಂದನು.


ಆ ಸ್ತ್ರೀಯು, “ನನ್ನಲ್ಲಿ ರೊಟ್ಟಿಯಿಲ್ಲವೆಂದು ನಿನ್ನ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಾನು ಪ್ರಮಾಣ ಮಾಡುತ್ತೇನೆ. ನನ್ನ ಮಡಕೆಯಲ್ಲಿ ಸ್ವಲ್ಪ ಹಿಟ್ಟು ಮಾತ್ರ ಇದೆ; ಪಾತ್ರೆಯಲ್ಲಿ ಸ್ವಲ್ಪ ಆಲೀವ್ ಎಣ್ಣೆಯಿದೆ. ಬೆಂಕಿ ಹೊತ್ತಿಸಲು ಸೌದೆ ಚೂರುಗಳನ್ನು ಆಯ್ದುಕೊಳ್ಳವುದಕ್ಕಾಗಿ ನಾನು ಈ ಸ್ಥಳಕ್ಕೆ ಬಂದೆ. ಸೌಧೆಯನ್ನು ನಾನು ಮನೆಗೆ ತೆಗೆದುಕೊಂಡು ಹೋಗಿ, ನಮ್ಮ ಕೊನೆಯ ಊಟವನ್ನು ಸಿದ್ಧಪಡಿಸುತ್ತೇನೆ. ನನ್ನ ಮಗ ಮತ್ತು ನಾನು ಅದನ್ನು ತಿಂದು, ನಂತರ ಹಸಿವಿನಿಂದ ಸಾಯುತ್ತೇವೆ” ಎಂದು ಹೇಳಿದಳು.


“ಚೀದೋನ್ಯರ ಚಾರೆಪ್ತಗೆ ಹೋಗಿ ಅಲ್ಲಿ ವಾಸಮಾಡು. ಆ ಸ್ಥಳದಲ್ಲಿ ಒಬ್ಬ ವಿಧವೆಯು ವಾಸಿಸುತ್ತಾಳೆ. ನಿನಗೆ ಆಹಾರವನ್ನು ಕೊಡುವಂತೆ ಅವಳಿಗೆ ನಾನು ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.


ಆದ್ದರಿಂದ ಯೆಹೋವನು ಹೇಳಿದಂತೆ ಅವನು ಮಾಡಿದನು. ಅವನು ಜೋರ್ಡನ್ ನದಿಯ ಪೂರ್ವಕ್ಕಿರುವ ಕೆರೀತ್ ಹಳ್ಳದ ಹತ್ತಿರ ವಾಸಿಸಲು ಹೋದನು.


ಯೆಹೋವನು ನನ್ನನ್ನು ಇಸ್ರೇಲಿನ ರಾಜನನ್ನಾಗಿ ಮಾಡಿದನು. ನನ್ನ ತಂದೆಯಾದ ದಾವೀದನ ಸಿಂಹಾಸನವನ್ನು ಆತನು ನನಗೆ ದಯಪಾಲಿಸಿದನು. ಯೆಹೋವನು ತನ್ನ ವಾಗ್ದಾನದಂತೆ, ನನಗೆ ಮತ್ತು ನನ್ನ ವಂಶಿಕರಿಗೆ ರಾಜ್ಯಾಧಿಕಾರವನ್ನು ನೀಡಿದನು. ಅದೋನೀಯನು ಈ ದಿನವೇ ಸಾಯಬೇಕು ಎಂದು ನಾನು ಈ ಎಲ್ಲಾ ಕಾರ್ಯಗಳನ್ನು ನೆರವೇರಿಸಿದ ದೇವರ ಸನ್ನಿಧಿಯಲ್ಲಿ ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.


ಆಗ ರಾಜನು ಈ ಪ್ರಮಾಣವನ್ನು ಮಾಡಿದನು: “ದೇವರಾದ ಯೆಹೋವನು ನನ್ನನ್ನು ಎಲ್ಲಾ ತೊಂದರೆಗಳಿಂದ ರಕ್ಷಿಸಿದನು. ದೇವರಾಣೆಯಾಗಿಯೂ ನಾನು ನಿನಗೆ ಈ ಪ್ರಮಾಣವನ್ನು ಮಾಡುತ್ತೇನೆ.


ಆದ್ದರಿಂದ ಆಕೀಷನು ದಾವೀದನನ್ನು ಕರೆದು, “ಯೆಹೋವನಾಣೆ, ನೀನು ನನಗೆ ಯಥಾರ್ಥನಾಗಿರುವೆ. ನೀನು ನನ್ನ ಸೈನ್ಯದಲ್ಲಿ ಸೇವೆ ಮಾಡುವುದೂ ನನಗೆ ಇಷ್ಟ. ನೀನು ನನ್ನ ಹತ್ತಿರಕ್ಕೆ ಬಂದಾಗಿನಿಂದ ನಾನು ನಿನ್ನಲ್ಲಿ ಯಾವ ತಪ್ಪನ್ನೂ ಗುರುತಿಸಿಲ್ಲ. ನೀನು ಒಳ್ಳೆಯವನೆಂದು ಫಿಲಿಷ್ಟಿಯರ ಅಧಿಪತಿಗಳು ಸಹ ಯೋಚಿಸಿದ್ದಾರೆ.


ಆಗ ಓಬದ್ಯನು, “ನೀನು ಎಲ್ಲಿರುವೆ ಎಂಬುದು ನನಗೆ ತಿಳಿದಿದೆಯೆಂದು ನಾನು ರಾಜನಿಗೆ ಹೇಳಿದರೆ, ಅವನು ನನ್ನನ್ನು ಕೊಂದುಬಿಡುತ್ತಾನೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ನೀನೇಕೆ ನನ್ನನ್ನು ಸಾಯಿಸಬೇಕೆಂದಿರುವೆ?


ಈಗ ನೀನು ಇಲ್ಲಿರುವೆಯೆಂಬುದನ್ನು ನಾನು ಹೋಗಿ ಅವನಿಗೆ ತಿಳಿಸುವಂತೆ, ನೀನು ಇಚ್ಛಿಸಿರುವೆಯಲ್ಲವೇ?


ಆದರೆ ಮೀಕಾಯೆಹುವು, “ಇಲ್ಲ! ಯೆಹೋವನಾಣೆ, ಆತನು ತಿಳಿಸುವುದನ್ನೇ ನಾನು ಹೇಳುತ್ತೇನೆ” ಎಂದು ಉತ್ತರಿಸಿದನು.


ಆಗ ರಾಜಾಧಿಕಾರಿಗಳು ಬಾರೂಕನಿಗೆ, “ನೀನು ಮತ್ತು ಯೆರೆಮೀಯನು ಹೋಗಿ ಎಲ್ಲಿಯಾದರೂ ಅಡಗಿಕೊಳ್ಳಿರಿ. ಎಲ್ಲಿ ಅಡಗಿಕೊಂಡಿದ್ದೀರೆಂಬುದನ್ನು ಯಾರಿಗೂ ತಿಳಿಸಬೇಡಿ” ಎಂದು ಹೇಳಿದರು.


ದಾವೀದನು ಅಡಗಿಕೊಳ್ಳತಕ್ಕ ಎಲ್ಲಾ ಸ್ಥಳಗಳನ್ನು ಕಂಡುಹಿಡಿಯಿರಿ. ನೀವು ಹಿಂದಿರುಗಿ ನನ್ನ ಬಳಿಗೆ ಬಂದು ಎಲ್ಲವನ್ನೂ ನನಗೆ ತಿಳಿಸಿ. ಅನಂತರ ನಾನು ನಿಮ್ಮೊಂದಿಗೆ ಬರುತ್ತೇನೆ. ದಾವೀದನು ಆ ಪ್ರಾಂತ್ಯದಲ್ಲಿದ್ದರೆ, ನಾನು ಅವನನ್ನು ಕಂಡು ಹಿಡಿಯುತ್ತೇನೆ. ಅವನು ಯೆಹೂದ ಕುಲಗಳಲ್ಲಿ ಎಲ್ಲೇ ಇದ್ದರೂ ಸಹ ನಾನು ಅವನನ್ನು ಕಂಡುಹಿಡಿಯುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು