1 ಅರಸುಗಳು 18:12 - ಪರಿಶುದ್ದ ಬೈಬಲ್12 ನಾನು ಹೋಗಿ ರಾಜನಾದ ಅಹಾಬನಿಗೆ ನೀನು ಇಲ್ಲಿರುವೆಯೆಂಬುದನ್ನು ತಿಳಿಸಿದರೆ, ನಂತರ ಯೆಹೋವನು ನಿನ್ನನ್ನು ಬೇರೊಂದು ಸ್ಥಳಕ್ಕೆ ಕರೆದೊಯ್ಯುವನು. ರಾಜನಾದ ಅಹಾಬನು ಇಲ್ಲಿಗೆ ಬಂದಾಗ, ನಿನ್ನನ್ನು ಕಂಡುಹಿಡಿಯಲು ಸಮರ್ಥನಾಗುವುದಿಲ್ಲ. ಆಗ ಅವನು ನನ್ನನ್ನು ಕೊಂದುಬಿಡುತ್ತಾನೆ! ನನ್ನ ಬಾಲ್ಯದಿಂದಲೂ ನಾನು ಯೆಹೋವನನ್ನೇ ಅನುಸರಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ನೀನು ಅವನಿಗೆ ಸಿಕ್ಕದೆ ಹೋದರೆ ಅವನು ನನ್ನನ್ನು ಕೊಂದು ಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾನು ತಮ್ಮನ್ನು ಬಿಟ್ಟು ಹೊರಟ ಕೂಡಲೆ, ಸರ್ವೇಶ್ವರನ ಆತ್ಮ ತಮ್ಮನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ತಾವು ಅವನಿಗೆ ಸಿಕ್ಕದೆಹೋದರೆ ಅವನು ನನ್ನನ್ನು ಕೊಂದುಹಾಕುವನು. ನಾನು ಚಿಕ್ಕಂದಿನಿಂದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವದು. ನಾನು ಹೋಗಿ ಅಹಾಬನಿಗೆ ಹೇಳುವಲ್ಲಿ ನೀನು ಅವನಿಗೆ ಸಿಕ್ಕದೆಹೋದರೆ ಅವನು ನನ್ನನ್ನು ಕೊಂದುಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಾನು ನಿನ್ನನ್ನು ಬಿಟ್ಟು ಹೋಗುವಾಗ, ಯೆಹೋವ ದೇವರ ಆತ್ಮರು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯುವರು. ನಾನು ಬಂದು ಅಹಾಬನಿಗೆ ತಿಳಿಸಿದಾಗ, ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕುವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕಂದಿನಿಂದ ಯೆಹೋವ ದೇವರನ್ನು ಆರಾಧಿಸುತ್ತೇನೆ. ಅಧ್ಯಾಯವನ್ನು ನೋಡಿ |
ಅವರು ಅವನಿಗೆ, “ನೋಡು, ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠ ಜನರಿದ್ದಾರೆ. ನಿನ್ನ ಒಡೆಯನನ್ನು ಹುಡುಕಲು ದಯವಿಟ್ಟು ಅವರಿಗೆ ಅವಕಾಶಕೊಡು. ಯೆಹೋವನ ಆತ್ಮವು ಎಲೀಯನನ್ನು ಮೇಲಕ್ಕೆ ಎತ್ತಿಕೊಂಡು ಹೋಗಿ ಯಾವುದಾದರೂ ಬೆಟ್ಟದ ಮೇಲಾಗಲಿ ಅಥವಾ ಕಣಿವೆಯಲ್ಲಾಗಲಿ ಬೀಳಿಸಿರಬೇಕು” ಎಂದು ಹೇಳಿದರು. ಆದರೆ ಎಲೀಷನು, “ಇಲ್ಲ, ಎಲೀಯನನ್ನು ಹುಡುಕಲು ಜನರನ್ನು ಕಳುಹಿಸಬೇಡಿ!” ಎಂದು ಉತ್ತರಿಸಿದನು.
ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.