13 ನಾನು ಏನು ಮಾಡಿದೆನೆಂಬುದು ನಿನಗೆ ತಿಳಿಯಲಿಲ್ಲವೇ? ಯೆಹೋವನ ಪ್ರವಾದಿಗಳನ್ನು ಈಜೆಬೆಲಳು ಕೊಲ್ಲುತ್ತಿದ್ದಾಗ ನೂರು ಮಂದಿ ಪ್ರವಾದಿಗಳನ್ನು ನಾನು ಗುಹೆಗಳಲ್ಲಿ ಅಡಗಿಸಿಟ್ಟೆನು. ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿಯನ್ನು ಮತ್ತೊಂದು ಗುಹೆಯಲ್ಲಿಯೂ ನಾನು ಅಡಗಿಸಿಟ್ಟೆನು. ಅವರಿಗೆ ಆಹಾರವನ್ನೂ ನೀರನ್ನೂ ನಾನು ತಂದುಕೊಡುತ್ತಿದ್ದೆನು.
13 ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ನಿನಗೆ ಗೊತ್ತಾಗಲಿಲ್ಲವೋ? ಅವರಲ್ಲಿ ನೂರು ಜನರನ್ನು ತೆಗೆದುಕೊಂಡು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನ ಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.
13 ಈಜೆಬೆಲಳು ಸರ್ವೇಶ್ವರನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ತಮಗೆ ತಿಳಿಸಲಾಗಿದೆ ಅಲ್ಲವೆ? ಅವರಲ್ಲಿ ನೂರು ಮಂದಿಯನ್ನು ತೆಗೆದುಕೊಂಡು ಹೋಗಿ ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ?
13 ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾವಿುಯಾದ ನಿನಗೆ ತಿಳಿಸಲ್ಪಡಲಿಲ್ಲವೋ? ಅವರಲ್ಲಿ ನೂರು ಮಂದಿಯನ್ನು ತೆಗೆದುಕೊಂಡು ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು ಅನ್ನಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.
13 ಈಜೆಬೆಲಳು ಪ್ರವಾದಿಗಳನ್ನು ಕೊಲ್ಲುತ್ತಿದ್ದ ಸಮಯದಲ್ಲಿ ಯೆಹೋವ ದೇವರ ಪ್ರವಾದಿಗಳನ್ನು ನೂರು ಮಂದಿಯನ್ನು, ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನೀನು ಕೇಳಿಸಿಕೊಳ್ಳಲಿಲ್ಲವೇ?
ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)
ನೀವು ಈ ರಾಜ್ಯವನ್ನು ಪಡೆದುಕೊಳ್ಳಿರಿ. ಏಕೆಂದರೆ ನಾನು ಹಸಿದಿದ್ದೆನು. ನೀವು ನನಗೆ ಊಟ ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಒಬ್ಬಂಟಿಗನಾಗಿ ಮನೆಯಿಂದ ದೂರದಲ್ಲಿ ಇದ್ದಾಗ, ನೀವು ನನ್ನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಂಡಿರಿ.
ರಾಜನು ಎಲೀಷನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದನು. ಎಲೀಷನು ತನ್ನ ಮನೆಯಲ್ಲಿ ಕುಳಿತಿದ್ದನು; ಹಿರಿಯರು ಅವನೊಂದಿಗೆ ಕುಳಿತಿದ್ದರು. ಸಂದೇಶಕನು ಬರುವುದಕ್ಕೆ ಮುಂಚೆಯೇ ಎಲೀಷನು ಹಿರಿಯರಿಗೆ, “ನೋಡಿ, ನನ್ನ ತಲೆಯನ್ನು ಕತ್ತರಿಸಿಹಾಕಲು ಕೊಲೆಗಾರನ (ಇಸ್ರೇಲಿನ ರಾಜ) ಮಗ ಜನರನ್ನು ಕಳುಹಿಸಿದ್ದಾನೆ! ಆ ಸಂದೇಶಕನು ಬಂದಾಗ ಬಾಗಿಲನ್ನು ಮುಚ್ಚಿಬಿಡಿ! ಅವನು ಒಳಗೆ ಪ್ರವೇಶಿಸದಂತೆ ಬಾಗಿಲನ್ನು ಹಿಡಿದುಕೊಳ್ಳಿ! ಅವನ ಹಿಂದೆ ಬರುತ್ತಿರುವ ಅವನ ಒಡೆಯನ ಕಾಲ ಸಪ್ಪಳವು ನನಗೆ ಕೇಳಿಸುತ್ತಿದೆ!” ಎಂದು ಹೇಳಿದನು.