18 ಎಲೀಯನು, “ಇಸ್ರೇಲಿನ ತೊಂದರೆಗೆ ನಾನು ಕಾರಣನಲ್ಲ. ನೀನು ಮತ್ತು ನಿನ್ನ ತಂದೆಯ ಕುಟುಂಬವು ಈ ತೊಂದರೆಗಳಿಗೆಲ್ಲ ಕಾರಣ. ಯೆಹೋವನ ಆಜ್ಞೆಗಳಿಗೆ ವಿಧೇಯನಾಗದೆ ಸುಳ್ಳುದೇವರುಗಳನ್ನು ಅನುಸರಿಸತೊಡಗಿದ್ದರಿಂದ ಆ ತೊಂದರೆಗಳಿಗೆಲ್ಲಾ ನೀನೇ ಕಾರಣನಾಗಿರುವೆ.
18 ಅದಕ್ಕೆ ಅವನು, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ. ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ಮತ್ತು ನಿನ್ನ ಮನೆಯವರೂ ಅದಕ್ಕೆ ಕಾರಣರು.
18 ಅದಕ್ಕೆ ಅವನು, “ನಾನು ಇಸ್ರಾಯೇಲನ್ನು ಕಳವಳಪಡಿಸುವುದಿಲ್ಲ. ಆದರೆ ನೀನೂ, ನಿನ್ನ ತಂದೆಯ ಕುಟುಂಬದವರೂ ಯೆಹೋವ ದೇವರ ಆಜ್ಞೆಯನ್ನು ತೊರೆದುಬಿಟ್ಟು, ಬಾಳನನ್ನು ಹಿಂಬಾಲಿಸುವ ನೀವೇ ಕಳವಳಪಡಿಸುವವರು.
‘ಇದು ಏಕೆ ಸಂಭವಿಸಿತೆಂದರೆ, ಅವರು ತಮ್ಮ ದೇವರಾದ ಯೆಹೋವನನ್ನು ತ್ಯಜಿಸಿದರು. ಆತನು ಅವರ ಪೂರ್ವಿಕರನ್ನು ಈಜಿಪ್ಟಿನಿಂದ ಬರಮಾಡಿದನು. ಆದರೆ ಅವರು ಅನ್ಯದೇವರುಗಳನ್ನು ಅನುಸರಿಸಲು ತೀರ್ಮಾನಿಸಿದರು. ಅವರು ಆ ದೇವರುಗಳ ಪೂಜೆಯನ್ನೂ ಸೇವೆಯನ್ನೂ ಮಾಡಲಾರಂಭಿಸಿದರು. ಆದಕಾರಣವೇ ಈ ಕೆಟ್ಟಕಾರ್ಯಗಳೆಲ್ಲಾ ಅವರಿಗೆ ಸಂಭವಿಸುವಂತೆ ಯೆಹೋವನು ಮಾಡಿದನು’ ಎಂದು ಅನ್ಯಜನರು ಉತ್ತರಿಸುವರು.”
ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.
ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅಹಾಬನು ಮಾಡಿದರೂ ಅವು ಅವನಿಗೆ ಸಾಕಾಗಲಿಲ್ಲ. ಆದ್ದರಿಂದ ಅಹಾಬನು ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾದನು. ಎತ್ಬಾಳನು ಚೀದೋನ್ಯರ ರಾಜನಾಗಿದ್ದನು. ನಂತರ ಅಹಾಬನು ಬಾಳ್ ದೇವರನ್ನು ಪೂಜಿಸಿ ಅದರ ಸೇವೆ ಮಾಡಲಾರಂಭಿಸಿದನು.
ಅಹಾಬನು ಮಾಡಿದಷ್ಟು ಪಾಪಗಳನ್ನು, ಇಲ್ಲವೆ ಕೆಟ್ಟಕಾರ್ಯಗಳನ್ನು ಮಾಡಿದ ಮನುಷ್ಯರು ಬೇರೆ ಯಾರೂ ಇಲ್ಲ. ಅವನು ಆ ಕಾರ್ಯಗಳನ್ನು ಮಾಡುವುದಕ್ಕೆ ಅವನ ಪತ್ನಿಯಾದ ಈಜೆಬೆಲಳು ಅವನನ್ನು ಒತ್ತಾಯಪಡಿಸಿದಳು.
“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ. ಅವರು ನನ್ನಿಂದ ಮುಖ ತಿರುವಿದ್ದಾರೆ. ನಾನು ಜೀವಜಲದ ಬುಗ್ಗೆಯಾಗಿದ್ದೇನೆ. ಅವರು ತಮ್ಮದೇ ಆದ ನೀರಿನ ತೊಟ್ಟಿಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಇತರ ದೇವರುಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅವರ ತೊಟ್ಟಿಗಳು ಒಡೆದಿವೆ. ಅವುಗಳಲ್ಲಿ ನೀರು ತುಂಬಿಡಲು ಸಾಧ್ಯವಿಲ್ಲ.
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಬೇಗನೇ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಈ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ. ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯದೇವತೆಗಳನ್ನು ಪೂಜಿಸುವರು.
ಅಹಾಬನು ಬಹುಕೆಟ್ಟ ಪಾಪವನ್ನು ಮಾಡಿದನು ಮತ್ತು ವಿಗ್ರಹಗಳನ್ನು ಆರಾಧಿಸಿದನು. ಅಮೋರಿಯರು ಇಂತಹ ಕಾರ್ಯವನ್ನೇ ಮಾಡಿದ್ದರು. ಯೆಹೋವನು ಅವರನ್ನು ಅವರ ನಾಡಿನಿಂದ ಓಡಿಸಿದನು ಮತ್ತು ಅದನ್ನು ಇಸ್ರೇಲಿನ ಜನರಿಗೆ ದಯಪಾಲಿಸಿದನು.
“ಸಮಾರ್ಯದ ಪ್ರವಾದಿಗಳು ಕೆಟ್ಟದ್ದಾಗಿ ನಡೆದುಕೊಂಡದ್ದನ್ನು ನಾನು ನೋಡಿದ್ದೇನೆ. ಅವರು ಬಾಳ್ ದೇವತೆಗೋಸ್ಕರ ಆವೇಶದಿಂದ ಪ್ರವಾದಿಸಿದ್ದನ್ನು ನಾನು ಕಂಡಿದ್ದೇನೆ. ಆ ಪ್ರವಾದಿಗಳು ಇಸ್ರೇಲಿನ ಜನರನ್ನು ಯೆಹೋವನಿಂದ ದೂರ ತೆಗೆದುಕೊಂಡು ಹೋಗಿದ್ದಾರೆ.
ಯೆರೆಮೀಯನು ಜನರಿಗೆ ಹೇಳುತ್ತಿರುವ ವಿಷಯಗಳನ್ನು ಕೇಳಿದ ರಾಜಾಧಿಕಾರಿಗಳು ರಾಜನಾದ ಚಿದ್ಕೀಯನ ಬಳಿಗೆ ಹೋಗಿ, “ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇನ್ನೂ ನಗರದಲ್ಲಿರುವ ಸೈನಿಕರನ್ನೂ ಎಲ್ಲರನ್ನೂ ತನ್ನ ಮಾತುಗಳಿಂದ ಧೈರ್ಯಗೆಡಿಸುತ್ತಿದ್ದಾನೆ. ನಮಗೆ ಒಳ್ಳೆಯದಾಗಬೇಕೆಂದು ಅವನು ಬಯಸದೆ ಜೆರುಸಲೇಮಿನ ಜನರ ನಾಶನವನ್ನು ಬಯಸುತ್ತಾನೆ” ಎಂದು ಹೇಳಿದರು.