1 ಅರಸುಗಳು 18:19 - ಪರಿಶುದ್ದ ಬೈಬಲ್19 ಈಗ ಕರ್ಮೆಲ್ ಬೆಟ್ಟದ ಮೇಲೆ ನನ್ನನ್ನು ಭೇಟಿಮಾಡಲು ಎಲ್ಲಾ ಇಸ್ರೇಲರಿಗೆ ತಿಳಿಸು. ಬಾಳನ ನಾನೂರೈವತ್ತು ಮಂದಿ ಪ್ರವಾದಿಗಳನ್ನು ಆ ಸ್ಥಳಕ್ಕೆ ಕರೆದುಕೊಂಡು ಬಾ. ಸುಳ್ಳುದೇವತೆಯಾದ ಅಶೇರಳ ನಾನೂರು ಮಂದಿ ಪ್ರವಾದಿಗಳನ್ನೂ ಕರೆದುಕೊಂಡು ಬಾ. ಆ ಪ್ರವಾದಿಗಳನ್ನು ರಾಣಿಯಾದ ಈಜೆಬೆಲಳು ಪೋಷಣೆ ಮಾಡುತ್ತಿದ್ದಾಳೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀನು ಈಗ ಎಲ್ಲಾ ಇಸ್ರಾಯೇಲರನ್ನೂ, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಪ್ರವಾದಿಗಳನ್ನು ಮತ್ತು ಅಶೇರ ದೇವತೆಯ ನಾನೂರು ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನೀನು ಈಗ ಎಲ್ಲ ಇಸ್ರಯೇಲರನ್ನು, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತುಮಂದಿ ಪ್ರವಾದಿಗಳನ್ನು ಹಾಗೂ ಅಶೇರದೇವತೆಯ ನಾನೂರೈವತ್ತುಮಂದಿ ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನೀನು ಈಗ ಎಲ್ಲಾ ಇಸ್ರಾಯೇಲ್ಯರನ್ನೂ ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಮಂದಿ ಪ್ರವಾದಿಗಳನ್ನೂ ಅಶೇರದೇವತೆಯ ನಾನೂರು ಮಂದಿ ಪ್ರವಾದಿಗಳನ್ನೂ ಕರ್ಮೆಲ್‍ಬೆಟ್ಟಕ್ಕೆ ಕರಿಸು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದ್ದರಿಂದ ನೀನು ಕರ್ಮೆಲು ಬೆಟ್ಟದ ಬಳಿಯಲ್ಲಿ ಸಮಸ್ತ ಇಸ್ರಾಯೇಲನ್ನೂ, ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ, ಈಜೆಬೆಲಳ ಮೇಜಿನ ಹತ್ತಿರ ಭೋಜನಮಾಡುವ ಅಶೇರನ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕೂಡಿಸು,” ಎಂದನು. ಅಧ್ಯಾಯವನ್ನು ನೋಡಿ |
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ.
ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.
ಸಮುವೇಲನು ಮಾರನೆಯ ದಿನ ಬೆಳಿಗ್ಗೆ ಮೇಲೆದ್ದು, ಸೌಲನನ್ನು ಭೇಟಿಮಾಡಲು ಹೋದನು. ಆದರೆ ಜನರೆಲ್ಲ ಸಮುವೇಲನಿಗೆ, “ಸೌಲನು ತನ್ನ ಗೌರವಾರ್ಥವಾಗಿ ಜ್ಞಾಪಕಸ್ತಂಭವನ್ನು ನಿರ್ಮಿಸಲು ಕರ್ಮೆಲ್ ಎಂಬ ಪಟ್ಟಣಕ್ಕೆ ಹೋದನು. ನಂತರ ಸೌಲನು ಕೆಲವು ಪ್ರದೇಶಗಳನ್ನು ಸುತ್ತಿಕೊಂಡು ಗಿಲ್ಗಾಲಿಗೆ ಹೋದನು” ಎಂದು ಹೇಳಿದರು. ಸಮುವೇಲನು ಸೌಲನಿದ್ದ ಸ್ಥಳಕ್ಕೆ ಹೋದನು. ಸೌಲನು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳನ್ನು ಪ್ರಥಮ ಸರ್ವಾಂಗಹೋಮವಾಗಿ ಯೆಹೋವನಿಗೆ ಅರ್ಪಿಸುತ್ತಿದ್ದನು.
ಎಲೀಷನು ಇಸ್ರೇಲಿನ ರಾಜನಿಗೆ, “ನನ್ನಿಂದ ನಿನಗೆ ಏನು ಬೇಕಾಗಿದೆ? ನಿನ್ನ ತಂದೆತಾಯಿಯರ ಪ್ರವಾದಿಗಳ ಬಳಿಗೆ ಹೋಗು!” ಎಂದು ಹೇಳಿದನು. ಇಸ್ರೇಲಿನ ರಾಜನು ಎಲೀಷನಿಗೆ, “ಇಲ್ಲ, ನಾವು ನಿನ್ನನ್ನು ನೋಡಲೆಂದು ಇಲ್ಲಿಗೆ ಬಂದಿದ್ದೇವೆ, ಏಕೆಂದರೆ ಯೆಹೋವನು ಮೂವರು ರಾಜರನ್ನು ಒಟ್ಟಿಗೆ ಬರಮಾಡಿ, ನಮ್ಮನ್ನು ಮೋವಾಬ್ಯರು ಸೋಲಿಸುವಂತೆ ಮಾಡಿದ್ದಾನೆ. ನಾವು ನಿನ್ನ ಸಹಾಯವನ್ನು ಬಯಸಿದ್ದೇವೆ” ಎಂದನು.
ಬಾಳನ ಎಲ್ಲಾ ಯಾಜಕರನ್ನೂ ಪ್ರವಾದಿಗಳನ್ನೂ ಕರೆಯಿರಿ. ಬಾಳನನ್ನು ಆರಾಧಿಸುವ ಜನರೆಲ್ಲರನ್ನೂ ಒಟ್ಟಾಗಿ ಕರೆಯಿರಿ. ಯಾರೂ ಈ ಸಭೆಯಿಂದ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಿ. ನಾನು ಬಾಳನಿಗೆ ಮಹಾಯಜ್ಞವನ್ನು ಅರ್ಪಿಸಬೇಕೆಂದಿದ್ದೇನೆ. ಈ ಸಭೆಗೆ ಯಾರಾದರೂ ಬಾರದೆ ಇದ್ದರೆ ಅವರನ್ನು ನಾನು ಕೊಂದುಹಾಕುತ್ತೇನೆ!” ಎಂದು ಹೇಳಿದನು. ಆದರೆ ಅದು ಯೇಹುವಿನ ತಂತ್ರವಾಗಿತ್ತು. ಬಾಳನ ಭಕ್ತರನ್ನು ನಾಶಪಡಿಸಬೇಕೆಂಬುದೇ ಅವನ ಅಪೇಕ್ಷೆಯಾಗಿತ್ತು.